ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ 300 ಕೋ.ರೂ. ವೆಚ್ಚದ ರಾಮಮಂದಿರ ನಿರ್ಮಾಣ
ಉಡುಪಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ನ ಸದಸ್ಯರೂ ಆಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಇಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ರಾಮಮಂದಿರ ನಿರ್ಮಿಸುವ 700 ಎಕರೆ ಪರಿಸರದ ಅಭಿವೃದ್ಧಿಗೆ 1000 ಕೋಟಿ ರೂ. ಅವಶ್ಯವಿದ್ದು, ವಿವಿಧ ಕಂಪೆನಿಗಳ ಸಿಎಸ್ ಆರ್ ನಿಧಿಯಿಂದ ಸಂಗ್ರಹಿಸುವ ಗುರಿ […]
ಕುಂದಾಪುರ: ಇನ್ನೊರ್ವ ಎಎಸ್ಐ ಸಿಬ್ಬಂದಿಗೆ ಕೊರೋನಾ ಸೋಂ
ಕುಂದಾಪುರ: ನಗರ ಪೊಲೀಸ್ ಠಾಣೆಯ ಎಎಸ್ಐ ಒಬ್ಬರಲ್ಲಿ ಕೊರೋನಾ ಸೋಂಕು ದೃಢವಾಗಿರುವುದರಿಂದ ಸ್ಯಾನಟೈಸ್ ಕಾರಣಕ್ಕಾಗಿ ಒಂದು ದಿನದ ಮಟ್ಟಿಗೆ ಪೊಲೀಸ್ ಠಾಣೆ ಸಮೀಪದ ಪ್ರವಾಸಿ ಮಂದಿರದಲ್ಲಿ ಕಾರ್ಯನಿರ್ವಹಿಸಿಲಿದೆ. ಹೈವೇ ಪೆಟ್ರೋಲ್ ವಾಹನದಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ಅವರ ಕರ್ತವ್ಯ ಪಾಳಿ ಜು.10 ಕ್ಕೆ ಮುಗಿದಿತ್ತು. ಇವರು ಕರ್ತವ್ಯ ನಿರ್ವಹಿಸುತ್ತಿದ್ದ ವಾಹನದಲ್ಲಿನ ಇನ್ನೊಂದು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಹಾಗೂ ಎಎಸ್ಐ ಅವರಿಗೆ ಸೋಂಕು ದೃಢವಾಗಿದ್ದ ಹಿನ್ನೆಲೆಯಲ್ಲಿ ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಶನಿವಾರ ಬಂದಿರುವ ವರದಿಯಲ್ಲಿ ಸೋಂಕು […]
ಉಡುಪಿಯಲ್ಲಿ ಇಂದು ಒಂದೇ ದಿನ 109 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ವೇಗ ಹೆಚ್ಚಳವಾಗಿದ್ದು, ಇಂದು ಒಂದೇ ದಿನ 109 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಅಮರನಾಥ ಗುಹೆಗೆ ರಾಜನಾಥ್ ಸಿಂಗ್ ಭೇಟಿ: ಪೂಜೆ ಸಲ್ಲಿಸಿ ದರ್ಶನ ಪಡೆದ ಸಚಿವರು
ಜಮ್ಮುಕಾಶ್ಮೀರ: ಜಮ್ಮು ಕಾಶ್ಮೀರ ದಲ್ಲಿರುವ ಪವಿತ್ರ ಸನ್ನಿಧಿ ಅಮರನಾಥ ಗುಹೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಭೇಟಿ ನೀಡಿ ದರ್ಶನ ಪಡೆದರು. ರಕ್ಷಣಾ ಪಡೆಗಳ ಮುಖ್ಯಸ್ಥ ಎಂಎಂ ನರವಾಣೆ ಕೂಡ ರಕ್ಷಣಾ ಸಚಿವರ ಜತೆಗಿದ್ದು ದೇವರ ದರ್ಶನ ಪಡೆದರು. ಈ ಬಗ್ಗೆ ಸ್ವತಃ ರಕ್ಷಣಾ ಸಚಿವರು ಟ್ವೀಟ್ ಮಾಡಿದ್ದು, ಅಮರನಾಥನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ವೇಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಮರನಾಥನ ಸನ್ನಿಧಿಯಲ್ಲಿ ಸಚಿವರು […]
ಶಿರೂರು ಲಕ್ಷ್ಮೀವರತೀರ್ಥ ಶ್ರೀಪಾದರ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸಿ: ಶಿರೂರು ಅಭಿಮಾನಿಗಳಿಗೆ ಕೇಮಾರು ಶ್ರೀ ಕರೆ
ಉಡುಪಿ: ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರು ಕೃಷ್ಣೈಖ್ಯರಾಗಿ ಜುಲೈ19ರಂದು ಎರಡು ವರ್ಷ ತುಂಬಲಿದ್ದು, ಈ ಬಾರಿ ಶ್ರೀಪಾದರ ಸಂಸ್ಮರಣೆ ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಆಯೋಜಿಸಬೇಕೆಂದು ಕೇಮಾರು ಸಾಂದೀಪನಿ ಮಠದ ಈಶವಿಠಲದಾಸ ಶ್ರೀಪಾದರು ಶಿರೂರು ಅಭಿಮಾನಿ ಹಾಗೂ ಭಕ್ತವೃಂದಕ್ಕೆ ಕರೆ ನೀಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು,ಉಡುಪಿ, ಸಿಮಂತೂರು,ಕೇಮಾರು ಸೇರಿದಂತೆ ನಾಡಿನ ವಿವಿಧ ಸ್ಥಳಗಳಲ್ಲಿ ಶಿರೂರು ಶ್ರೀಪಾದರ ಜನ್ಮದಿನ ಹಾಗೂ ಸಂಸ್ಮರಣೆ ದಿನವನ್ನು ಶ್ರೀಪಾದರ ಆಪ್ತರಾದ ಕೇಮಾರು ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತವೃಂದವು ವಿವಿಧ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಆಚರಿಸಿಕೊಂಡು […]