ನಾಗರಿಕ ಸೇವೆಗಳ ತರಬೇತಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಪಿಯುಸಿ/ಐಸಿಎಸ್‌ಸಿ/ಸಿಬಿಎಸ್‌ಸಿ ಮಂಡಳಿಗಳು ಶೈಕ್ಷಣಿಕ ವರ್ಷ 2019-20ರ ಅವಧಿಯಲ್ಲಿ ನಡೆಸಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರುವ ವಾಣಿಜ್ಯ ಮತ್ತು ಕಲಾ ವಿಭಾಗದ (ವಿಜ್ಞಾನದ ವಿದ್ಯಾರ್ಥಿಗಳಿಗೆ ಅವಕಾಶವಿಲ್ಲ) ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದ ವಿದ್ಯಾರ್ಥಿಗಳಿಗೆ “ನಾಗರಿಕ ಸೇವೆಗಳ ತರಬೇತಿ” ಸಂಯೋಜಿತ ಪದವಿ ಕೋರ್ಸ್ಗಳಿಗೆ ಆನ್‌ಲೈನ್ ಮಾಲಕ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರತಿಭೆ ಆಧಾರದ ಮೇಲೆ ಮೊದಲ 50 ವಿದ್ಯಾರ್ಥಿಗಳನ್ನು ಮಾತ್ರ ಕಿರುಪಟ್ಟಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್  https://gokdom.kar.nic.in […]

ರಾಮಮಂದಿರ ಭೂಗರ್ಭಕ್ಕೆ ಕೃಷ್ಣ ನಗರಿಯ ಮಣ್ಣು: ಪ್ರಧಾನಿ ಮೋದಿ ಅವರಿಂದ ಅಯೋಧ್ಯೆ ಭೂಮಿಗೆ ಅರ್ಪಣೆ

ಉಡುಪಿ: ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ! ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು  ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ. ಅದರಂತೆ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀ ಕೃಷ್ಣನ ಗಂಧ ಪ್ರಸಾದ […]

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗ ತಾತ್ಕಾಲಿಕ ಸ್ಥಗಿತ

ಮಣಿಪಾಲ: ಕೊರೊನಾ ವೈರಸ್ (ಕೋವಿಡ್ 19) ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಲ್ಲಾ ಹೊರರೋಗಿ ಸೇವೆಯನ್ನು ಜುಲೈ 21ರ ಮಂಗಳವಾರದಿಂದ ಜುಲೈ 26ರ ವರೆಗೆ ಸ್ಥಗಿತಗೊಳಿಸಿದೆ. ಜುಲೈ 27ರಿಂದ ಹೊರರೋಗಿ ವಿಭಾಗವು ಎಂದಿನಂತೆ ಸೇವೆ ಸಲ್ಲಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು ಮತ್ತು ಕಳೆದ ಕೆಲವು ದಿನಗಳಿಂದ ನಮ್ಮ ಅನೇಕ ಆರೋಗ್ಯ ಕಾರ್ಯಕರ್ತರು […]

ಕೋವಿಡ್ ನಿಯಂತ್ರಣಕ್ಕೆ ಶ್ರಮಿಸ್ತಿದೆ ಔಷಧ ನಿಯಂತ್ರಣ ಇಲಾಖೆ

ಉಡುಪಿ ಜುಲೈ 20: ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸುವಲ್ಲಿ ಜಿಲ್ಲೆಯ ಔಷಧ ನಿಯಂತ್ರಣ ಇಲಾಖೆ ಮಹತ್ವದ ಪಾತ್ರ ವಹಿಸುತ್ತಿದ್ದು, ಜ್ವರ ಶೀತ ಕೆಮ್ಮು ಲಕ್ಷಣ ಗಳಿರುವ ವ್ಯಕ್ತಿಗಳಲ್ಲಿ, ಕೋವಿಡ್-19 ಹೆಚ್ಚಿನ ಪ್ರಮಾಣದಲ್ಲಿ ಕಂಡುಬರಲಿದ್ದು, ಇಂತಹ ವ್ಯಕ್ತಿಗಳು ಮೆಡಿಕಲ್ ಶಾಪ್ ಗಳಲ್ಲಿ ಔಷಧ ಪಡೆದು ಕೋವಿಡ್-19 ತಪಾಸಣೆಯಿಂದ ತಪ್ಪಿ ಹೋಗಿ ಹೆಚ್ಚಿನ ಪ್ರಮಾಣದಲ್ಲಿ ರೋಗ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿ ಒಟ್ಟು 385 ಮೆಡಿಕಲ್ ಶಾಪ್ ಗಳಿದ್ದು, ಎಲ್ಲಾ ಮೆಡಿಕಲ್ ಶಾಪ್ ಗಳಲ್ಲಿ ವೈದ್ಯರ […]

ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜು ಶೇ.100 ಫಲಿತಾಂಶ

ಕುಂದಾಪುರ ಕಳೆದ ಮೂರು ವರ್ಷಗಳಿಂದ ಸತತವಾಗಿ ಶೇ.100 ಫಲಿತಾಂಶ ದಾಖಲಿಸುವಲ್ಲಿ ಯಶಸ್ವಿಯಾಗಿರುವ ಕುಂದಾಪುರದ ಶ್ರೀವೆಂಕಟರಮಣ ಪದವಿಪೂರ್ವ ಕಾಲೇಜು ಈ ಬಾರಿಯೂ ಅದೇ ಸ್ಥಾನ ಕಾಯ್ದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ ಕುಂದಾಪುರದ ಸ್ವಾತಿ ಪೈ(594) ಅಂಕಗಳಿಸಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸುವುದರೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸೋಹನ್ ಕುಮಾರ್ ಶೆಟ್ಟಿ(589) ಅಂಕಗಳಿಸಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಭುವನ್(588) ಅಂಕಗಳಿಸಿ 8ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 45 […]