ಉಡುಪಿಯಲ್ಲಿ ನಾಳೆಯಿಂದ ಬಸ್ ಸಂಚಾರ ಪುನರಾರಂಭ: ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಕ್ರಮ: ಡಿಸಿ ಜಿ. ಜಗದೀಶ್

ಉಡುಪಿ: ಸಿಎಂ ಯಡಿಯೂರಪ್ಪನವರು ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ಮಾಡಲ್ಲವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ (ಜುಲೈ 22)ದಿಂದ ಮತ್ತೆ ಬಸ್ ಸಂಚಾರ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಇಂದು ವಿಡಿಯೋ ಹೇಳಿಕೆ ಮೂಲಕ ಮಾಹಿತಿ ನೀಡಿದರು. ಬಸ್ ಅನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಓಡಿಸಬೇಕು. ಪ್ರಯಾಣಿಕರು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದ್ದಾರೆ. ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಕಾರ್ಯನಿರ್ವಹಿಸಲಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ […]

ಮಂಗಳೂರು: ಎಕ್ಸ್ ಪರ್ಟ್ ವಿದ್ಯಾರ್ಥಿಗಳ ಇನ್ನೊಂದು ವಿಶೇಷ ಸಾಧನೆ

ಮಂಗಳೂರು: ಶಿಕ್ಷಣ ಸಂಸ್ಥೆಯಲ್ಲಿ ವೈಜ್ಞಾನಿಕ ರೀತಿಯಲ್ಲಿ ಬೋಧನೆ, ಸೂಕ್ತ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಪಟ್ಟರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಈ ಭಾರಿಯೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಭೀತು ಪಡಿಸಿದ್ದಾರೆ. ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 95 ಅಂಕ ಪಡೆದದವರು ಪಿಯುಸಿಯಲ್ಲಿ ಶೇ. 99, ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 90 ಅಂಕ ಪಡೆದದವರು ಪಿಯುಸಿಯಲ್ಲಿ ಶೇ. 95 ಪಡೆಯುವುದು ಒಂದು ರೀತಿಯ ಸಾಧನೆಯಾದರೆ, ಎಸ್‍ಎಸ್‍ಎಲ್‍ಸಿಯಲ್ಲಿ ಕಡಿಮೆ ಅಂಕ ಪಡೆದರೂ […]

ನಾಡದೋಣಿ ಮೀನುಗಾರಿಕೆಯನ್ನು ಆಗಸ್ಟ್ 30ರ ವರೆಗೆ ವಿಸ್ತರಿಸಿ: ಮೀನುಗಾರರ ಆಗ್ರಹ

ಮಲ್ಪೆ: ಮಳೆಗಾಲ ಋತುವಿನ ನಾಡದೋಣಿ ಮೀನುಗಾರಿಕೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸುವಂತೆ ಮಲ್ಪೆ ಸಾಂಪ್ರಾದಾಯಿಕ ನಾಡದೋಣಿ ಸಂಘ, ನಾಡಟ್ರಾಲ್‌ದೋಣಿ ಸಂಘ ಹಾಗೂ ಸಾಂಪ್ರಾದಾಯಿಕ ಕಂತು ಬಲೆ ದೋಣಿ ಸಂಘ ಆಗ್ರಹಿಸಿದೆ. ನಾಡದೋಣಿ ಮೀನುಗಾರರ ನಿಯೋಗವು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್‌, ಜಿಲ್ಲಾಧಿಕಾರಿ ಜಿ. ಜಗದೀಶ್‌, ಮೀನುಗಾರಿಕಾ ಜಂಟಿ ನಿರ್ದೇಶಕ, ಮೀನುಗಾರಿಕಾ ಸಹಾಯಕ ನಿರ್ದೇಶಕರು, ಮಲ್ಪೆ ಮೀನುಗಾರರ ಸಂಘ ಮತ್ತು ಆಳಸಮುದ್ರ ತಾಂಡೇಲರ ಸಂಘಕ್ಕೆ ಮನವಿ ನೀಡಿ ಒತ್ತಾಯಿಸಿದೆ. ಈ ಹಿಂದೆ […]

ದ.ಕ. ಜಿಲ್ಲೆ: ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್

ಮಂಗಳೂರು: ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್ ಆಗಲಿದ್ದು, ಗುರುವಾರ ಬೆಳಗ್ಗೆ 5 ಗಂಟೆ ತನಕ ಮಾತ್ರ ಲಾಕ್ ಡೌನ್ ಇರಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಅವಕಾಶ ನೀಡಿದ್ದ ಎಲ್ಲಾ ಕ್ಷೇತ್ರಗಳೂ ಚಟುವಟಿಕೆ ನಡೆಸಬಹುದು ಎಂದು ಅವರು ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು 84 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 84 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.