ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ: ರಾಜ್ಯದಲ್ಲಿ ಇನ್ನಿಲ್ಲ ಲಾಕ್ ಡೌನ್: ಸಿ.ಎಂ. ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇನ್ನು ಲಾಕ್ ಡೌನ್ ಮಾಡುವ ಪ್ರಶ್ನೆ ಇಲ್ಲ. ಜಿಲ್ಲಾಧಿಕಾರಿಗಳು ಇನ್ನು ಮುಂದೆ ಲಾಕ್ ಡೌನ್ ಬಗ್ಗೆ ಮಾತಾಡಬಾರದು. ಕಂಟೋನ್ಮೆಂಟ್ ಝೋನ್‌ಗಳಲ್ಲಿ ಮಾತ್ರ ಅತ್ಯಂತ ಕಠಿಣ ಕ್ರಮಗಳು ಜಾರಿಯಲ್ಲಿರುತ್ತವೆ. ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಿಸಲು ಸಹಾಯ ಮಾಡಿ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಜನತೆ ಎಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ಆರ್ಥಿಕವಾಗಿ ರಾಜ್ಯವನ್ನು ಪುನಶ್ಚೇತನಗೊಳಿಸಲು ಸಹಕರಿಸಬೇಕು. ರಾಜ್ಯದಲ್ಲಿ […]
ಉಡುಪಿ ಎಸ್ಪಿ ಕಚೇರಿಯ ಮಹಿಳಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಉಡುಪಿ ಎಸ್ಪಿ ಕಚೇರಿಯ ಮಹಿಳಾ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಸ್ಪಿ ಕಚೇರಿಯ ವಿಭಾಗವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯನ್ನು ಜುಲೈ 17ರಂದು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ಖಚಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಇಡೀ ಕಚೇರಿಯನ್ನು ಸ್ಯಾನಿಟೈಸ್ ಮಾಡಿ ಶುಚಿಗೊಳಿಸಲಾಗುವುದು ಎಂದು ಎಸ್ಪಿ ವಿಷ್ಣುವರ್ಧನ ತಿಳಿಸಿದ್ದಾರೆ.
ಉಡುಪಿ ನ್ಯಾಯಾಧೀಶರಿಗೆ ಕೊರೊನಾ ಪಾಸಿಟಿವ್: ನ್ಯಾಯಾಲಯ ಸಂಕೀರ್ಣ ಸೀಲ್ ಡೌನ್

ಉಡುಪಿ: ಉಡುಪಿ ನ್ಯಾಯಾಲಯದ ನ್ಯಾಯಾಧೀಶರೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಸಂಕೀರ್ಣವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ನ್ಯಾಯಾಲಯದ ಗೇಟ್ ಗಳನ್ನು ಬಂದ್ ಮಾಡಿದ್ದು, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜು.21 ಮತ್ತು 22ರಂದು ಇಡೀ ನ್ಯಾಯಾಲಯವನ್ನು ಸ್ಯಾನಿಟೈಸ್ ಮಾಡಿಲಿದ್ದು, ಜು.23ರಿಂದ ಮತ್ತೆ ಎಂದಿನಂತೆ ನ್ಯಾಯಾಲಯ ಸಂಕೀರ್ಣ ಕಾರ್ಯ ನಿರ್ವಹಿಸಲಿದೆ ಎಂದು ಜಿಲ್ಲಾ ಮುಖ್ಯ ನ್ಯಾಯಾಧೀಶರ ಪ್ರಕಟನೆ ತಿಳಿಸಿದೆ.
ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಗಳಿಗೆ ಕೊರೊನಾ ಪಾಸಿಟಿವ್

ಉಡುಪಿ: ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಶ್ರೀಗಳ ಆಪ್ತ ಮೂಲಗಳಿಂದ ತಿಳಿದುಬಂದಿದೆ. ಪುತ್ತಿಗೆ ಶ್ರೀಪಾದರು ನಿನ್ನೆ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ: ಕೇರಳದ ಯುವಕ ಕೊರೊನಾ ಸೋಂಕಿಗೆ ಬಲಿ

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೂತ್ರಪಿಂಡ ಸಮಸ್ಯೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ಕಣ್ಣೂರು ಜಿಲ್ಲೆಯ 35 ವರ್ಷದ ವ್ಯಕ್ತಿ ಸೋಮವಾರ ರಾತ್ರಿ ಮೃತಪಟ್ಟಿದ್ದು, ಆತನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಮೃತ ವ್ಯಕ್ತಿ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಆ ಬಳಿಕ ಕೊರೊನಾ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ