ಉಡುಪಿ: ಇಂದು 88 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಮೂವರು ಕೊರೊನಾ ಸೋಂಕಿಗೆ ಬಲಿ
ಉಡುಪಿ: ಜಿಲ್ಲೆಯಲ್ಲಿ ಇಂದು 88 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 1918 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಇಂದು ಒಂದೇ ದಿನ 190 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಜಿಲ್ಲೆಯಲ್ಲಿ 1104 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಮೂವರು ಕೊರೊನಾದಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ 14 ಮಂದಿ ಕೊರೊನಾದಿಂದ ಮರಣ ಹೊಂದಿದ್ದಾರೆ ಎಂದು ಮಾಹಿತಿ ನೀಡಿದೆ.