ಉಡುಪಿ: ಕೊರೊನಾಗೆ ಕೊಲ್ಲೂರು ಮೂಲದ 45 ವರ್ಷದ ವ್ಯಕ್ತಿ ಬಲಿ: ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ

ಉಡುಪಿ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಕೊಲ್ಲೂರು ಮೂಲದ 45 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಈ ವ್ಯಕ್ತಿಗೆ ಸೋಂಕು‌ ತಗಲಿದ್ದು, ಕೋವಿಡ್ 19 ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ದ.ಕ.ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಔಷದಿ, ಆಸ್ಪತ್ರೆಗೆ ಮಾತ್ರ ಅವಕಾಶ

ಮಂಗಳೂರು: ನಾಳೆ ರಾಜ್ಯಾದ್ಯಂತ ‘ಸಂಡೇ ಲಾಕ್ ಡೌನ್’ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆ ಕೂಡ ಸಂಪೂರ್ಣ ಲಾಕ್ ಡೌನ್ ಆಗಲಿದೆ. ದಿನವಿಡೀ ಲಾಕ್ ಆಗಲಿದ್ದು, ನಾಳೆ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ಅಲ್ಲದೇ ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಆಗಲಿದೆ. ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶವಿರುವುದಿಲ್ಲ. ಹಾಲು, ಔಷಧಿ, ಆಸ್ಪತ್ರೆಗೆ ಮಾತ್ರ ಅವಕಾಶ ನೀಡಲಾಗಿದೆ. ಇಂದು ರಾತ್ರಿ‌ 9ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಸಂಪೂರ್ಣ ಲಾಕ್ ಆಗಲಿದೆ. ಪ್ರತಿ ದಿನ ರಾತ್ರಿ 9 ರಿಂದ ಬೆಳಗ್ಗೆ 5ರ ವರೆಗೂ […]

ಉಡುಪಿಯಲ್ಲಿ ಇಂದು 182 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 182 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3218ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮಣಿಪಾಲ: ಕೊರೊನಾ ಸೋಂಕಿಗೆ ಶಿವಮೊಗ್ಗದ 75 ವರ್ಷದ ವೃದ್ಧ ಬಲಿ

ಮಣಿಪಾಲ: ಇಲ್ಲಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ 75 ವರ್ಷದ ಕೊರೊನಾ ಸೋಂಕಿತ ವೃದ್ಧರೊಬ್ಬರು ಜು.24ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಗೆ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ವ್ಯಕ್ತಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆಗ ಇವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ತೀವ್ರ ನಿಗಾ ಘಟಕದಲ್ಲಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಾಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಪ್ರಕೃತಿ ಮಡಿಲಲ್ಲಿರೋ ಈ ಕಾಲೇಜಲ್ಲಿ ವಿದ್ಯಾರ್ಥಿ ವಿಕಸನಕ್ಕೆ ಎಲ್ಲವೂ  ಉಂಟು !

ಕುಂದಾಪುರ: ಕುಂದಾಪುರದ  ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರಾಹಿಯ  ಮನಮೋಹಕ ಪ್ರಕೃತಿಯ ಮಡಿಲಿನಲ್ಲಿ ಕಂಗೊಳಿಸುತ್ತಿರುವ ಸುಂದರ ಶೈಕ್ಷಣಿಕ ಸಂಸ್ಥೆ. ಮೌಲ್ಯಯುತ ಶಿಕ್ಷಣದ ಜೊತೆಜೊತೆಗೆ ಜೀವನಕ್ಕೆ ಅಗತ್ಯವಾದ ವಿವಿಧ ಕ್ಷೇತ್ರಗಳ ಶಿಕ್ಷಣವನ್ನೂ ನೀಡುತ್ತಿರುವ ಈ ಸಂಸ್ಥೆ ನೂರಾರು ವಿದ್ಯಾರ್ಥಿಗಳಿಗೆ ಬದುಕಿನ ದಾರಿಯನ್ನು ತೋರಿಸಿದೆ. ಸಾರ್ವಜನಿಕ ವಲಯದಲ್ಲೂ ಈ ಕಾಲೇಜಿಗೆ ಮಹತ್ತರವಾದ ಮನ್ನಣೆಗಳು ದೊರಕುತ್ತಿವೆ . ♦ ಸಂಸ್ಥೆಯ ವಿಶೇಷಗಳು ಹೀಗಿವೆ: ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಶೈಕ್ಷಣಿಕ ವರ್ಷ  ಆರಂಭಿಸಿದ ವಿವಿಧ […]