ಪುನರೂರು ವಿಶ್ವನಾಥ ಕ್ಷೇತ್ರದಲ್ಲಿ ಶಿರೂರು ಶ್ರೀಪಾದರ ಆರಾಧನೆ

ಉಡುಪಿ: ನಿರಂತರ 48 ವರ್ಷಗಳ ಕಾಲ ಉಡುಪಿ ಕೃಷ್ಣ ದೇವರಿಗೆ ಪೂಜೆ ಸಲ್ಲಿಸಿ, ಮೂರು ಪರ್ಯಾಯಗಳನ್ನು ಯಶಸ್ವಿಯಾಗಿ ನಡೆಸಿದ ಶ್ರೀಶಿರೂರು ಮಠದ ಕೀರ್ತಿಶೇಷ  ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಆರಾಧನೆಯು ಪುನರೂರು ವಿಶ್ವನಾಥ ಕ್ಷೇತ್ರದಲ್ಲಿ ಜರಗಿತು. ಶಿರೂರು ಶ್ರೀಪಾದರ ಪೂರ್ವಾಶ್ರಮದ ಮೂಲ ದೇವತಾ ಸನ್ನಿಧಾನವಾದ ಪುನರೂರು ಕ್ಷೇತ್ರದಲ್ಲಿ ಕುಟುಂಬಿಕರ ಉಪಸ್ಥಿತಿಯಲ್ಲಿ ಶ್ರೀವಿಶ್ವನಾಥ ದೇವರಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀಗುರುಮೂರ್ತಿ ಆವರು ಮಹಾಪೂಜೆ ಸಹಿತ ಏಕಾದಶ ರುದ್ರಾಭಿಷೇಕ, ಹಾಗೂ ವಿದ್ವಾಂಸರಾದ ಕಡಂದಲೆ ಅನಂತ ಕೃಷ್ಣಾಚಾರ್ಯಾರು ಪವಮಾನ ಹೋಮ […]

ಕಾಪು ಶಾಸಕ ಲಾಲಾಜಿ ಮೆಂಡನ್ ಸಹಿತ ನಾಲ್ಕು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಹಿಂಪಡೆದ ಸಿಎಂ

ಬೆಂಗಳೂರು: ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಹಿತ ನಾಲ್ಕು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿಂಪಡೆಯಲು ಸೂಚಿಸಿದ್ದಾರೆ. ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಜಿ.ಎಚ್.ತಿಪ್ಪಾರೆಡ್ಡಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಪರಣ್ಣ ಈಶ್ವರಪ್ಪ ಮುನವಳ್ಳಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಲಾಲಾಜಿ ಆರ್.ಮೆಂಡನ್ ಮತ್ತು ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಬಸವರಾಜ್ ದಢೇಸೂರ್ ಅವರ ನೇಮಕವನ್ನು ಮುಖ್ಯಮಂತ್ರಿ ಹಿಂಪಡೆದಿದ್ದಾರೆ. ರಾಜ್ಯದ ವಿವಿಧ […]

ಉಡುಪಿಯಲ್ಲಿ ಇಂದು 225 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 225 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3613ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆಟೋ ರಿಕ್ಷಾಗಳ ಲಭ್ಯತೆ ತಿಳಿಯಲು ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ರೆಡಿ ಮಾಡಿದ್ರು ‘ಆಟೋ ಪ್ಲೀಸ್’ ಉಚಿತ ಎಪ್ಲಿಕೇಶನ್

ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ‘ಆಟೋ ಪ್ಲೀಸ್’ ಎಂಬ ಒಂದು ವಿನೂತನ ಎಪ್ಲಿಕೇಶನ್ನೊಂದನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪರಿಚಯಿಸಿದೆ. ಈ ಎಪ್ಲಿಕೇಶನ್‌ನ ಮೂಲಕ ಸಾರ್ವಜನಿಕರು ತಮ್ಮ ಸಮೀಪದ ರಿಕ್ಷಾ ನಿಲ್ದಾಣವನ್ನು ಅಯ್ಕೆ ಮಾಡಿದಲ್ಲಿ, ಅಲ್ಲಿ ಸಂಚಾರಕ್ಕೆ ಲಭ್ಯವಿರುವ ಆಟೋರಿಕ್ಷಾಗಳ ಪಟ್ಟಿಯು ದೊರೆಯಲಿದೆ. ಇದರೊಂದಿಗೆ ಚಾಲಕನ ಹೆಸರು, ಭಾವಚಿತ್ರ, ಲೈಸನ್ಸ್ ಮುಂತಾದ ವಿವಿರಗಳನ್ನು ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಇರುವ ಚಾಲಕರ ಮಾಹಿತಿಯನ್ನು ಗಮನಿಸಿ ಆ ರಿಕ್ಷಾ ಚಾಲಕನಿಗೆ ಕರೆಮಾಡುವ ಸೌಲಭ್ಯವನ್ನೂ ಇದರಲ್ಲಿ ನೀಡಲಾಗಿದೆ. ಈ ಎಪ್ಲಿಕೇಶನ್ ಉಚಿತವಾಗಿದ್ದು, ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್ಲೋಡ್ […]

ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆ : ಆನ್‌ಲೈನ್ ತರಬೇತಿ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಆನ್‌ಲೈನ್‌ನಲ್ಲಿ ನೀಡಲು ಆಯೋಜಿಸಿದೆ. ಆಸಕ್ತರು ಆಗಸ್ಟ್ 8 ರೊಳಗೆ (ರಜಾ ದಿನಗಳನ್ನು ಹೊರತುಪಡಿಸಿ) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ […]