ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸರಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಉಡುಪಿ:  ರಾಜ್ಯ ಸರ್ಕಾರದ ಜನಸ್ನೇಹಿ ಆಡಳಿತದ ಒಂದು ವರ್ಷ ಸವಾಲುಗಳ ವರ್ಷವಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಸರ್ಕಾರ ಎಲ್ಲಾ ಸವಾಲುಗಳನ್ನು ಎದುರಿಸಿ ಅಭಿವೃದ್ಧಿಯ ಹಾದಿಯಲ್ಲಿ  ಸಾಗುವಲ್ಲಿ ಯಶಸ್ವಿಯಾಗಿದೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಈ ಸರಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಅವರು  ಸೋಮವಾರ ವಿಧಾನಸೌಧದ ಬ್ರಾಂಕ್ವೆಟ್ ಹಾಲ್‌ನಲ್ಲಿ , ನವತಂತ್ರಜ್ಞಾನದ ವರ್ಚುವಲ್ ವೇದಿಕೆಯ  ಮೂಲಕ ಆಯೋಜಿಸಲಾದ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ನೇರಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ನೇರ ಪ್ರಸಾರ ಕಾರ್ಯಕ್ರಮ ಉಡುಪಿ ಜಿಲ್ಲೆಯ […]

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ನೇಮಕ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮೆಂಡನ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ‌ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 30, 31 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನಗಳು ಸಾಧಾರಣ ಮಳೆ ಆಗಲಿದ್ದು, ಜು. 30 ರಂದು ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, […]