ದ.ಕ ಜಿಲ್ಲೆಯಲ್ಲಿ ಇಂದು 173 ಮಂದಿಗೆ ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 5103ಕ್ಕೆ ಏರಿಕೆ
ದ.ಕ ಜಿಲ್ಲೆಯಲ್ಲಿ ಇಂದು ಮತ್ತೆ 173 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದು ಮತ್ತೆ 173 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5103ಕ್ಕೆ ಏರಿಕೆಯಾಗಿದೆ. ಸದ್ಯ 2632 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದಂತೆ 2338 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೂಡ 41 ಮಂದಿ ಗುಣಮುಖರಾಗಿರುವ ವರದಿ ಲಭ್ಯವಾಗಿದ್ದು, ಈ ನಡುವೆ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಂದು ದೃಢವಾದ ಪಾಸಿಟಿವ್ ಪ್ರಕರಣಗಳ ಪೈಕಿ 21 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ […]
ಉಡುಪಿ ಜಿಲ್ಲೆಗೆ ವಿದೇಶ,ಹೊರ ರಾಜ್ಯಗಳಿಂದ ಬಂದಿರುವ ವ್ಯಕ್ತಿಗಳು 14 ದಿನ ಹೋಂ ಕ್ವಾರಂಟೈನ್ ಮಾಡಲೇಬೇಕು: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಗೆ ವಿದೇಶ,ಹೊರ ರಾಜ್ಯಗಳಿಂದ ಬಂದಿರುವ ವ್ಯಕ್ತಿಗಳು ಹಾಗೂ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಅವರು 14 ದಿನ ಹೋಂ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಆದರೆ ಕೆಲವರು ನಿಯಮ ಬಾಹಿರವಾಗಿ ಹೊರಗಡೆ ತಿರುಗುತ್ತಿರುವುದು ಕಂಡುಬಂದಿರುತ್ತದೆ. ಇದರಿಂದಾಗಿ ಕೋವಿಡ್ ರೋಗ ನಿಯಂತ್ರಣದಲ್ಲಿ ಹಿನ್ನಡೆಯಾಗುತ್ತಿದೆ. ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ನಿಗಾ ಇಡಲು Quarantine Watch App ತಂತ್ರಜ್ಞಾನದ ಬಳಕೆಯಾಗುತ್ತಿದ್ದು, ಇದರಿಂದಾಗಿ ಹೋಂ […]
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಗಾಗಿ ಶೇ.50 ಬೆಡ್ ಮೀಸಲು ಕಡ್ಡಾಯ : ಜಿಲ್ಲಾಧಿಕಾರಿ ಜ.ಜಗದೀಶ್
ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿಕೊಂಡಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಯಲ್ಲಿ ಶೇ.50 ಬೆಡ್ ಗಳನ್ನು ಕಡ್ಡಾಯವಾಗಿ ಮೀಸಲಿಡುವಂತೆ ಸೂಚಿಸಿ, ಬೆಡ್ ಗಳನ್ನು ಮೀಸಲಿಡದ ಆಸ್ಪತ್ರೆಗಳ ನೊಂದಣಿಯನ್ನು ಕೆಪಿಎಂಇ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿಕೊಂಡಿರುವ […]
ಅಯೋಧ್ಯೆಯಲ್ಲಿ ಭಯೋತ್ಪಾದಕರಿಂದ ದಾಳಿಗೆ ಸಂಚು: ಗುಪ್ತಚರ ಇಲಾಖೆಯಿಂದ ಮಾಹಿತಿ
ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮಮಂದಿರದ ಭೂಮಿ ಪೂಜೆ ಆ. 5 ರಂದು ನಡೆಯಲಿದ್ದು, ಇದನ್ನು ಗುರಿಯನ್ನಾಗಿಸಿ ಆ.15 ರಂದು ದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಭಯೋತ್ಪಾದಕ ಗುಂಪು ಸಂಚು ನಡೆಸಿವೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ. ಈ ಭಯೋತ್ಪಾದಕರನ್ನು ಮೂರರಿಂದ ಐದು ಗುಂಪುಗಳಲ್ಲಾಗಿ ಭಾರತಕ್ಕೆ ಕಳುಹಿಸಲು ಸಂಚು ರೂಪಿಸಲಾಗಿದೆ ಎಂದು ಅದು ಬಹಿರಂಗಪಡಿಸಿದೆ. ಆ.5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕಳೆದ ವರ್ಷ ಆ.೫ರಂದು ಕಾಶ್ಮೀರಕ್ಕೆ ವಿಶೇಷ […]
ಉಡುಪಿಯಲ್ಲಿ ಇಂದು 109 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇಂದು 109 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3722ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.