ಸಿಇಟಿ ಪರೀಕ್ಷೆ ಹೈಕೋರ್ಟ್ ಗ್ರೀನ್ ಸಿಗ್ನಲ್: ನಿಗದಿಯಂತೆ ಜುಲೈ 30, 31 ಪರೀಕ್ಷೆ
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಗೆ ಹೈಕೋರ್ಟ್ ಅನುಮತಿ ನೀಡಿದೆ. ಆದ್ದರಿಂದ ನಿಗದಿಯಂತೆ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಮುಂದೂಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್ ಸಿಇಟಿ ಮುಂದೂಡಲು ನಿರಾಕರಿಸಿದೆ. ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಯಾವುದೇ ಪರೀಕ್ಷಾರ್ಥಿಗಳಿಗೆ ಅವಕಾಶ ನಿರಾಕರಿಸಬಾರದು ಎಂದು ಹೈಕೋರ್ಟ್ ಆದೇಶದಲ್ಲಿ ಸೂಚಿಸಿದೆ.
ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ: ನೈಟ್ ಕರ್ಪ್ಯೂ ತೆರವು, ಜಿಮ್ ತೆರೆಯಲು ಅವಕಾಶ
ನವದೆಹಲಿ: ಕೇಂದ್ರ ಸರ್ಕಾರವು ಕೊರೊನಾ ತಡೆಗೆ ಸಂಬಂಧಿಸಿದಂತೆ ಹೇರಿದ್ದ ಬಹುತೇಕ ನಿರ್ಬಂಧಗಳನ್ನು ತೆರವುಗೊಳಿಸಿ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರಗಳನ್ನು ಒಪನ್ ಮಾಡಲು ಅವಕಾಶ ನೀಡಲಾಗಿದೆ. ಪ್ರಸ್ತುತ ಜಾರಿಯಲ್ಲಿದ್ದ ನೈಟ್ ಕರ್ಪ್ಯೂಯನ್ನು ತೆರವುಗೊಳಿಸಿದೆ. ಹಾಗಾಗಿ ಆಗಸ್ಟ್ 1ರಿಂದ ನೈಟ್ ಕರ್ಪ್ಯೂ ಇರುವುದಿಲ್ಲ. ಆಗಸ್ಟ್ 31ರ ವರೆಗೆ ಶಾಲಾ-ಕಾಲೇಜು ತೆರೆಯುವಂತಿಲ್ಲ: ಹೊಸ ಮಾರ್ಗಸೂಚಿಯಲ್ಲಿ ಶಾಲಾ ಕಾಲೇಜು ತೆರೆಯಲು ಅವಕಾಶ ನೀಡಿಲ್ಲ. ಆಗಸ್ಟ್ 31ರ ವರೆಗೂ ಶಾಲಾ ಕಾಲೇಜುಗಳನ್ನು ಆರಂಭಿಸಬಾರದು ಎಂದು ಆದೇಶ ನೀಡಿದೆ. […]
ಶಾಂತಿಯುತವಾಗಿ ಬಕ್ರೀದ್ ಆಚರಿಸಿ : ಜಿಲ್ಲಾಧಿಕಾರಿ ಜಿ ಜಗದೀಶ್
ಉಡುಪಿ : ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಪ್ರಾಣಿಗಳನ್ನು ಸಾಗಾಣಿಕೆ ಮಾಡುತ್ತಿದ್ದಲ್ಲಿ ಸಾರ್ವಜನಿಕರು ತಾವೇ ಕಾನೂನನ್ನು ಕೈಗೊತ್ತಿಕೊಳ್ಳುವಂತಿಲ್ಲ , ಈ ಬಗ್ಗೆ ಸಂಬAಧಿಸಿದ ಹತ್ತಿರದ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಅಥವಾ 100 ಕರೆ ಮಾಡಿ ತಿಳಿಸಬೇಕು, ಸಾರ್ವಜನಿಕರು ತಾವೇ ಕಾನೂನನ್ನು ಕೈಗೆತ್ತಿಕೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ […]
ಭಾರತಕ್ಕೆ ಬಂದಿಳಿದ ರಫೇಲ್ ಯುದ್ದ ವಿಮಾನ: ಸೇನಾ ಬತ್ತಳಿಕೆಗೆ ಸೇರಿತು ಬಲಿಷ್ಟ ಫೈಟರ್ ಜೆಟ್
ನವದೆಹಲಿ: ಬಹು ನಿರೀಕ್ಷಿತ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳು ಬುಧವಾರ ಭಾರತದ ಅಂಬಾಲಾ ವಾಯುನೆಲೆಗೆ ಬಂದಿಳಿದಿವೆ. ಬೆಳಗ್ಗೆ 11.44ರ ಹೊತ್ತಿನಲ್ಲಿ ಮತ್ತೆ ಟೇಕ್ ಆಫ್ ಯುದ್ಧ ವಿಮಾನಗಳು ಭಾರತದತ್ತ ಪಯಾಣ ಬೆಳೆಸಿದ್ದು, ಅನಂತರ ಹರ್ಯಾಣ ಅಂಬಾಲಾ ಏರ್ ಬೇಸ್ ಗೆ ಬಂದಿಳಿದಿವೆ. ಫ್ರೆಂಚ್ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಶನ್ ಕಾರ್ಖಾನೆ ನಿರ್ಮಿಸಿದ ರಫೆಲ್ ಫೈಟರ್ ಜೆಟ್‌ಗಳು ದಕ್ಷಿಣ ಫ್ರಾನ್ಸ್‌ನ ಬೋರ್ಡಾಕ್ಸ್ ನಗರದ ಮೆರಿಗ್ನಾಕ್ ವಾಯು ನೆಲೆಯಿಂದ ಜು. 27ರಂದು ಭಾರತದತ್ತ ಮುಖ ಮಾಡಿದ್ದವು. ಅನಂತರ […]
ಹೆಜಮಾಡಿ ಕಡಲ ಕಿನಾರೆಯಲ್ಲಿ ಸ್ವಚ್ಛತಾ ಶ್ರಮದಾನ
ಪಡುಬಿದ್ರಿ: ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಂದ ಹಮ್ಮಿಕೊಂಡ ಕಾರ್ಯಕ್ರಮಗಳು ಶ್ಲಾಘನೀಯ, ಗ್ರಾಪ ಪಂಚಾಯತ್ ಗಳಲ್ಲಿ ಎಸ್.ಎಲ್.ಆರ್.ಎಮ್ ಘಟಕಗಳನ್ನು ಪ್ರಾರಂಭಿಸಿ ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ, ಹಾಗೂ ಹೆಜಮಾಡಿ ಗ್ರಾಮ ಪಂಚಾಯತ್ ನ ಘಟಕದ ಸ್ವಚ್ಛತಾ ಸಿಬ್ಬಂದಿಗಳು ಅತ್ಯುತ್ತಮವಾಗಿ ಸ್ವಚ್ಛತಾ ಕಾರ್ಯ ನಡೆಸುತ್ತಾ ಬರುತ್ತಿದ್ದಾರೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದ್ದಾರೆ. ಸ್ವಚ್ಚ ಭಾರತ್ ಮಿಷನ್(ಗ್ರಾ) ಜಿಲ್ಲಾ ಪಂಚಾಯತ್ ಉಡುಪಿ, ಮತ್ತು ಹೆಜಮಾಡಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಜು.29 […]