ಉಡುಪಿ: ಇಂದು 83 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ನಾಲ್ಕು ಮಂದಿ ಕೊರೊನಾದಿಂದ ಸಾವು

ಉಡುಪಿ: ಜಿಲ್ಲೆಯಲ್ಲಿ ಇಂದು 83 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 2311 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಇನ್ನು ಸಹ 1558 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ನಾಲ್ಕು ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

ಉಡುಪಿಯಲ್ಲಿ ಇಂದು 173 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 173 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3895ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

ತೀರದ ತುಡಿತ: ಭರತ್ ರಾಜ್ ಕೋಟೇಶ್ವರ್ ಕ್ಲಿಕ್ಕಿಸಿದ ಚಿತ್ರ

  ಭರತ್ ರಾಜ್  ಕೋಟೇಶ್ವರ ಅವರು ಮೂಲತಃ ಉಡುಪಿ ಜಿಲ್ಲೆಯ ಕೋಟೇಶ್ವರದವರು. ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿ. ಆಗಾಗ ಫೋಟೋಗ್ರಫಿ ಮಾಡುವುದು ಅವರ ನೆಚ್ಚಿವ ಹವ್ಯಾಸಗಳಲ್ಲೊಂದು. ಇವರ ಸಂಪರ್ಕ:9901903930

ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಹೋಮ್ ಐಸೋಲೇಷನ್, ಆರೈಕೆ ಪ್ಯಾಕೇಜ್ ಕಿಟ್

ಮಣಿಪಾಲ: ಸರ್ಕಾರದ ಮಾರ್ಗಸೂಚಿಯಂತೆ ಮನೆಯಲ್ಲಿಯೇ ಐಸೋಲೇಷನ್ ಆಗುವ ಕೊರೊನಾ ರೋಗಿಗಳು ಮತ್ತು ಕುಟುಂಬ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹೋಮ್ ಐಸೋಲೇಷನ್ ಆರೈಕೆ ಕಾರ್ಯಕ್ರಮ ಮತ್ತು ಕಿಟ್ ಬಿಡುಗಡೆಗೊಳಿಸಿದೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ನಿರ್ವಣಾಧಿಕಾರಿ ಜಿ ಮುತ್ತಣ ಮತ್ತು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ  ಮೊದಲ ಕಿಟ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಮಾರುಕಟ್ಟೆ ಮುಖ್ಯಸ್ಥ ಸಚಿನ್ ಕಾರಂತ ಮತ್ತು ಆಪರೇಷನ್ ಮುಖ್ಯಸ್ಥ ಜಿಬು ಥಾಮಸ್ ಉಪಸ್ಥಿತರಿದ್ದರು. ಪ್ಯಾಕೇಜ್ ಕಿಟ್ […]

ಸದ್ಯಕ್ಕೆ ಶಾಲಾ-ಕಾಲೇಜು ಆರಂಭವಾಗುವುದಿಲ್ಲ: ಸಚಿವ ಸುರೇಶ್ ಕುಮಾರ್ 

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಆದ್ದರಿಂದ ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇಂದು ಅವರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆ ಕುರಿತು ಸಭೆ ನಡೆಸಿದರು. ಶಾಲೆಗಳನ್ನು ಆರಂಭಿಸದಿದ್ದರೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಎಲ್ಲ ಆಯಾಮಗಳಿಂದ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪಡಸಾಲೆ ಶಾಲೆ, ಮನೆಶಾಲೆ, ವಠಾರ ಶಾಲೆ, ತಂತ್ರಜ್ಞಾನ ಆಧಾರಿತ ಶಿಕ್ಷಣ, ಚಂದನ ದೂರದರ್ಶನ […]