ಕೊರೊನಾ ರೋಗಿಗೆ 5 ಲಕ್ಷ ಬಿಲ್: ಅಪೋಲೋ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮ: ಸಚಿವ ಕೆ. ಸುಧಾಕರ್

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂನ ಖಾಸಗಿ ಅಪೋಲೋ ಆಸ್ಪತ್ರೆ ಕೊರೊನಾ ರೋಗಿಯೊಬ್ಬರಿಗೆ ಐದು ಲಕ್ಷ ರೂಪಾಯಿ ಬಿಲ್ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಕಿಡಿಕಾರಿದ್ದಾರೆ. ಈ ಹಿಂದೆ ಅನೇಕ ಬಾರಿ ಅಪೋಲೋ ಆಸ್ಪತ್ರೆಗೆ ವಾರ್ನ್ ಮಾಡಿದ್ದೇನೆ. ಆದರೂ ಕೂಡ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದು ತಿಳಿಸಿದರು. ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿಯು ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿದೆ. ನಿಗದಿ ಮಾಡಿದ ದರಕ್ಕಿಂತಲೂ ಹೆಚ್ಚು […]
ಕೆಲವೇ ಕ್ಷಣಗಳಲ್ಲಿ ರಫೇಲ್ ಯುದ್ದ ವಿಮಾನಗಳ ಆಗಮನ ವಾಯುನೆಲೆಯಲ್ಲಿ ಸರ್ವ ಸಿದ್ಧತೆ

ಹರಿಯಾಣ: ಇಂದು ಮಧ್ಯಾಹ್ನ ಫ್ರಾನ್ಸ್‌ನಿಂದ ಹೊರಟಿರುವ ಮೊದಲ ಹಂತದ ಐದು ರಫೇಲ್ ಯುದ್ಧ ವಿಮಾನಗಳು ಅಂಬಾಲ ವಾಯುನೆಲೆಗೆ ಬಂದಿಳಿಯಲಿದೆ. ಇದನ್ನು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ ಬರಮಾಡಿಕೊಳ್ಳಲಿದ್ದಾರೆ. ಹತ್ತಿರದ ನಾಲ್ಕು ಹಳ್ಳಿಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ವಾಯುನೆಲೆ ಸುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಹಾಗೂ ಯುದ್ಧ ವಿಮಾನಗಳು ಇಳಿಯುವ ದೃಶ್ಯ ಸೆರೆ ಹಿಡಿಯುವುದನ್ನು ನಿಷೇಧಿಸಲಾಗಿದೆ.