ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ 12 ದಿನಗಳ ಕಾಲ ಚಿಕಿತ್ಸೆ ಪಡೆದು ಇಂದು ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅವರು ನೇರವಾಗಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಠಕ್ಕೆ ತೆರಳಿದ್ದಾರೆ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ. ಮುಂದಿನ ಹದಿನಾಲ್ಕು ದಿನಗಳ ಕಾಲ ಶ್ರೀಪಾದರಿಗೆ ವಿಶ್ರಾಂತಿಯ ಅಗತ್ಯವಿದೆ. ಹಾಗಾಗಿ ಶ್ರೀಗಳ ಆರೋಗ್ಯ ವಿಚಾರಿಸಲು ಭಕ್ತರು ಮಠಕ್ಕೆ ಬರುವುದು ಬೇಡ ಎಂದು ಮಠ […]
ದ.ಕ. ಜಿಲ್ಲೆ: ಇಂದು 139 ಮಂದಿಯಲ್ಲಿ ಕೊರೊನಾ ಪಾಸಿಟಿವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 139 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ. ಹಾಗೂ ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 159 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 54 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ 19, ಬೆಳ್ತಂಗಡಿಯಲ್ಲಿ 14, ಪುತ್ತೂರಿನಲ್ಲಿ 9, ಹಾಗೂ ಬೇರೆ ಜಿಲ್ಲೆಯ ಆರು ಮಂದಿಗೆ […]
ಐವಾನ್ ಡಿಸೋಜಾಗೆ ಕೊರೋನಾ ಪಾಸಿಟಿವ್: ಕಾಂಗ್ರೆಸ್ ಮುಖಂಡರಲ್ಲಿ ಆತಂಕ
ಮಂಗಳೂರು: ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರಿಗೆ ಸ್ವಾಬ್ ಟೆಸ್ಟ್ ವೇಳೆ ಕೊರೋನಾ ಸೋಂಕು ಪತ್ತೆಯಾಗಿದೆ. ಐವಾನ್ ಡಿಸೋಜಾ ಪತ್ನಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಪತ್ನಿ ಖಾಸಗಿ ಆಸ್ಪತ್ರೆಯ ವೈದ್ಯೆ ಯಾಗಿದ್ದಾರೆ. ಐವಾನ್ ನಿನ್ನೆ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸುದ್ದಿಗೋಷ್ಠಿ ವೇಳೆಯೂ ಡಿಕೆಶಿ ಜೊತೆಯಲ್ಲಿದ್ದರು. ಸದ್ಯ ಐವಾನ್ ಜೊತೆಗಿದ್ದ ಕಾಂಗ್ರೆಸ್ ನಾಯಕರಿಗೆ ಕ್ವಾರೆಂಟೈನ್ ಟೆನ್ಷನ್ ಶುರುವಾಗಿದೆ. KPCC ಅಧ್ಯಕ್ಷ ಡಿಕೆಶಿ, ಮಾಜಿ ಸಚಿವ ಯು.ಟಿ.ಖಾದರ್, ರಮಾನಾಥ್ ರೈ ಸೇರಿದಂತೆ ಹಲವು ಮುಖಂಡರಿಗೆ ಆತಂಕ […]
ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೇಖಾ ಶೆಟ್ಟಿಯನ್ನು ಬಂಧಿಸಿ ಕರ್ತವ್ಯದಿಂದ ವಜಾ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಆಗ್ರಹ
ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ದ ಮಾತಾಡಿ ಸಂವಿಧಾನವನ್ನು ಮುಖ್ಯಾಧಿಕಾರಿ ನಿಂದನೆ ಮಾಡಿದ್ದಾರೆ, ತಮಗೂ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಕಾರ್ಕಳದ ದಲಿತ ಉಪನ್ಯಾಸಕಿ ಸವಿತಾಕುಮಾರಿ ಪೊಲೀಸ್ ಠಾಣೆಗೆ ದೂರು ನೀಡಿ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೀಘ್ರವೇ ಮುಖ್ಯಾಧಿಕಾರಿ ರೇಖಾ ಶೆಟ್ಟಿಯನ್ನು ಕೂಡಲೇ ಬಂದಿಸಬೇಕು, ತಪ್ಪಿದಲ್ಲಿ ಇದರ ವಿರುದ್ದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಇದರ ರಾಜ್ಯ ಸಂಚಾಲಕರಾದ ಉದಯ್ ಕುಮಾರ್ ತಲ್ಲೂರ್ ತಿಳಿಸಿದ್ದಾರೆ. ಮುಖ್ಯಾಧಿಕಾರಿ ರೇಖಾ ಶೆಟ್ಟಿ ಅವರಿಗೆ ಸರಕಾರವು […]
ಉಡುಪಿಯಲ್ಲಿ ಇಂದು 136 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇಂದು 136 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4492ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.