ಮಂದಿರ‌ ನಿರ್ಮಾಣ ಕೇವಲ ‌ಕನಸಲ್ಲ: ಅಸಂಖ್ಯಾತ ಹಿಂದೂಗಳ ಹೋರಾಟ ಬಲಿದಾನವಿದೆ: ವಿಶ್ವಪ್ರಸನ್ನ ಶ್ರೀ

ಉಡುಪಿ: ಭಾರತ ದೇಶದ ಸಂಸ್ಕೃತಿಯ ಅಡಿಗಲ್ಲು ಆಗಿದ್ದ ರಾಮಮಂದಿರದ ಪುನರ್ ನಿರ್ಮಾಣ ಆಗಬೇಕೆನ್ನುವುದು ಶತಶತಮಾನಗಳ ಕನಸು. ರಾಮಮಂದಿರ ನಿರ್ಮಾಣ ಕೇವಲ ಕನಸು ಮಾತ್ರವಲ್ಲ, ಅದರ ಹಿಂದೆ ಅಸಂಖ್ಯಾತ ಹಿಂದೂಗಳ ಹೋರಾಟ, ಬಲಿದಾನವಿದೆ ಎಂದು ರಾಮಮಂದಿರ ನಿರ್ಮಾಣ ಟ್ರಸ್ಟಿಯು ಆಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಸೋಮವಾರ ವಿಡಿಯೋ ಹೇಳಿಕೆ ಮೂಲಕ ಸಂದೇಶ ನೀಡಿದ ಶ್ರೀಗಳು, ರಾಮಾಯಣ ಹಾಗೂ ಮಹಾಭಾರತ ನಮ್ಮ ದೇಶದ ಸಂಸ್ಕೃತಿಯ ಮೂಲ ಬೇರುಗಳು. ನಮ್ಮಲ್ಲಿರುವ ಸನಾತನ ಸಂಸ್ಕೃತಿ, ಪರಂಪರೆಯಿಂದಾಗಿ ಭಾರತ ದೇಶಕ್ಕೆ […]

ಅಯೋಧ್ಯೆ ಶ್ರೀರಾಮ ಮಂದಿರದ ಭೂಮಿ ಪೂಜೆ ಹಿನ್ನೆಲೆ: ಆ.5ರಂದು ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ

ಮಂಗಳೂರು: ಆಗಸ್ಟ್ 5ರಂದು ಅಯೋಧ್ಯೆ ಶ್ರೀ ರಾಮ ಮಂದಿರದ ಭೂಮಿ ಪೂಜೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 5 ರಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಭೂಮಿ ಪೂಜಾನಾ ದಿನದಂದು ಹಿಂದೂ  ಸಂಘಟನೆಗಳು ಸಂಭ್ರಮಾಚರಣೆಗೆ ಮುಂದಾಗಿದ್ದು, ಮುಸ್ಲೀಂ ಸಂಘಟನೆಗಳು ಪ್ರತಿಭಟನೆಗೂ ಸಿದ್ಧತೆ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಖಡಕ್ ಆದೇಶ ಹೊರಡಿಸಿದ್ದಾರೆ.

ಸಿಎಂ ಸಂಪರ್ಕಕ್ಕೆ ಬಂದ ಹಿನ್ನೆಲೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಮ್ ಕ್ವಾರಂಟೈನ್

ಉಡುಪಿ: ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 30 ರಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಕೋಟದ ತಮ್ಮ ನಿವಾಸದಲ್ಲಿ ಸ್ವಯಂ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕಳೆದ ಐದು ದಿನಗಳಲ್ಲಿ ಯಾವುದೇ ರೋಗಲಕ್ಷಣ ಕಂಡುಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ರಕ್ಷಾಬಂಧನ ಹಬ್ಬ ಆಚರಣೆ

ಉಡುಪಿ: ಭಾರತೀಯ ಜನತಾಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚದ ವತಿಯಿಂದ ಪಕ್ಷದ ಸಹೋದರರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನ ಕಾರ್ಯಕ್ರಮವನ್ನು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ರಕ್ಷೆ ಸ್ವಾಭಿಮಾನದ ಸಂಕೇತ, ಗಿಡಕ್ಕೆ ಬೇರಿನ ರಕ್ಷಣೆ, ಬೆಂಕಿಗೆ ಗಾಳಿಯ ರಕ್ಷಣೆ, ದೇಶಕ್ಕೆ ಯೋಧರ ರಕ್ಷಣೆ ಹಾಗೇ ನಮಗೆ ಸಹೋದರತೆಯೇ ರಕ್ಷಣೆ ಈ ಪರಿಕಲ್ಪನೆಯಲ್ಲಿ ಮಹಿಳಾ ಮೋರ್ಚಾ ರಕ್ಷಾಬಂಧನ ಹಬ್ಬ ಆಚರಿಸಿದೆ ಎಂದು ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ ಹೇಳಿದರು. ಬಿಜೆಪಿ ಜಿಲ್ಲಾದ್ಯಕ್ಷ ಸುರೇಶ್ ನಾಯಕ್ ರಕ್ಷಾಬಂಧನದ ಸಂದೇಶ […]

ಉಡುಪಿಯಲ್ಲಿ ಇಂದು 126 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 126 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4800ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.