ಆಗಸ್ಟ್‌ 5ರಂದು ರಾಮಮಂದಿರಕ್ಕೆ ಭೂಮಿಪೂಜೆ ಹಿನ್ನೆಲೆ: ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭ

ಅಯೋಧ್ಯೆ: ಆಗಸ್ಟ್ 5ರಂದು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುವ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನ ಆರಂಭಗೊಂಡಿದೆ. ರಾಮ್ ಲಲ್ಲಾ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದೆ. ರಾಮ್ ಲಲ್ಲಾ ಮೂರ್ತಿಗೆ ವಿವಿಧ ಬಣ್ಣದ ಬಟ್ಟೆಯ ಅಲಂಕಾರ ಮಾಡಲಾಗುತ್ತಿದೆ. ಪ್ರತಿದಿನ ಒಂದೊಂದು ಬಟ್ಟೆಯನ್ನು ತೊಡಿಸಲಾಗುತ್ತಿದ್ದು, ಸೋಮವಾರ ಬಿಳಿ, ಮಂಗಳವಾರ ಕೆಂಪು, ಬುಧವಾರ ಹಸಿರು ಬಣ್ಣದ ಬಟ್ಟೆಯಿಂದ ಸಿಂಗಾರ ಮಾಡಲಾಗುತ್ತಿದೆ. ಕೇಸರಿ, ಹಲದಿ ಬಣ್ಣದ ಬಟ್ಟೆಯನ್ನು ಸಿದ್ಧ ಪಡಿಸಲಾಗಿದೆ. ಪ್ರಧಾನಿ ಮೋದಿ […]

ಸಿಎಂ ಗೃಹ ಕಚೇರಿ ಕೃಷ್ಣಾದ 6 ಕ್ಕಿಂತಲೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದ 6ಕ್ಕಿಂತಲೂ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಿನ್ನೆ ಸಿಎಂ ಹಾಗೂ ಅವರ ಮಗಳು ಪದ್ಮಾವತಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಅವರ ಗೃಹ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು 6ಕ್ಕಿಂತಲೂ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ. ಎರಡು ಆ್ಯಂಬುಲೆನ್ಸ್ ಗಳಲ್ಲಿ ಸಿಬ್ಬಂದಿಯನ್ನು ಕರೆದೊಯ್ಯದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಸಿಎಂ ಯಡಿಯೂರಪ್ಪನವರ ಶೀಘ್ರ ಚೇತರಿಕೆಗೆ ಸಚಿವ ಕೋಟರಿಂದ ಹಾರೈಕೆ

ಉಡುಪಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಯವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಯಾವುದೇ ರೋಗ ಲಕ್ಷಣ ಕಂಡುಬರದಿದ್ದರೂ ಮುಂಜಾಗ್ರತ ದೃಷ್ಟಿಯಿಂದ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ಪಡೆಯಲು ಸಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾರೈಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗಲಿರುವುದು ಭಾನುವಾರ ದೃಢಪಟ್ಟಿದೆ. ಈ ಬಗ್ಗೆ ಸ್ವತ: ಯಡಿಯೂರಪ್ಪ ನವರ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ಸಿಎಂ ಅವರಿಗೆ ಯಾವುದೇ ಕೊರೊನಾ ಲಕ್ಷಣ ಕಾಣಿಸಿಕೊಂಡಿಲ್ಲ. ಆದರೆ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಸಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಯಾವುದೇ ರೋಗಲಕ್ಷಣ […]