ಅಯೋಧ್ಯೆ ರಾಮ ಮಂದಿರದ ಶಿಲಾನ್ಯಾಸ ಭಾರತೀಯರೆಲ್ಲರಿಗೂ ಶುಭ ಸುದ್ದಿ: ಡಾ.ಡಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ‌ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ. ಶ್ರೀರಾಮ ಭಗವಂತನ ಅವತಾರವೆಂದು ಭಾರತೀಯರ ನಂಬಿಕೆ, ಶ್ರದ್ಧೆ. ಆತ ಭೂಮಿಯಲ್ಲಿ ಅವತರಿಸಿದ ಬಳಿಕ ತನ್ನ ಸದ್ಗುಣಗಳಿಂದ ಆದರ್ಶಮೂರ್ತಿ ಎನಿಸಿದ. ಸಹಸ್ರಾರು ವರ್ಷಗಳಿಂದ ಮರ್ಯಾದ ಪುರುಷೋತ್ತಮನೆನಿಸಿ ತನ್ನ ವ್ಯಕ್ತಿತ್ ವ,ದೃಢ ನಿರ್ಧಾರಗಳಿಂದಾಗಿ ಜನಮಾನಸದಲ್ಲಿ ನೆಲೆಯಾದ. ತನ್ನ ಆದರ್ಶಗಳಿಂದ ವಿಶ್ವವ್ಯಾಪಿಯಾದ. ಶ್ರೀರಾಮ ಸ್ಮರಣೆ ಇನ್ನೂ ಸಹಸ್ರ ವರ್ಷಗಳವರೆಗೆ ಈ ನೆಲದಲ್ಲಿ ಉಳಿಯಲಿ ಮತ್ತು ಬೆಳೆಯಲಿ […]

ಉಳುವ ಯೋಗಿಯ ನೋಡಲ್ಲಿ: ಸುದಿ ಕೆ ಸಾಣೂರು ಕ್ಲಿಕ್ಕಿಸಿದ ಚಿತ್ರ

  ಕೃಷಿಭೂಮಿ ಉಳುವ ಕೃಷಿಕನ ಈ ಸುಂದರ ಚಿತ್ರ ಸೆರೆಹಿಡಿದವರು ಸುದಿ ಕೆ ಸಾಣೂರು. ಕಾರ್ಕಳದ ಸರಕಾರಿ ಕಾಲೇಜಿನಲ್ಲಿ ಡಿಗ್ರಿ ವ್ಯಾಸಂಗ ಮಾಡುತ್ತಿರುವ ಇವರು, ಬಿಡುವಾದಾಗ ಸುತ್ತಲಿರುವ ದೃಶ್ಯಗಳನ್ನು ಸೆರೆಹಿಡಿಯುತ್ತಾರೆ. ಉಳಿದಂತೆ ಅಭಿನಯ ಮತ್ತು ಯಕ್ಷಗಾನದಲ್ಲಿ ಇವರು ಆಸಕ್ತರು. ಇವರ ಸಂಪರ್ಕ:7624888434  

ಐಪಿಎಲ್ ಪ್ರಾಯೋಜಕತ್ವದಿಂದ ಹಿಂದೆ ಸರಿದ ವಿವೊ ಕಂಪೆನಿ

ನವದೆಹಲಿ: ಭಾರತ ಮತ್ತು ಚೀನಾದ ಗಡಿ ಸಂಘರ್ಷದ ಬೆಳವಣಿಗೆ ಇದೀಗ ಐಪಿಎಲ್ ಮೇಲೂ ಪರಿಣಾಮ ಬೀರಿದೆ. ಚೀನಾ ಮೂಲದ ಮೊಬೈಲ್‌ ತಯಾರಿಕ ಕಂಪನಿ ವಿವೊ ಐಪಿಎಲ್‌ ಪ್ರಾಯೋಜಕತ್ವದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿವೊ ಕಂಪನಿಯನ್ನು ಐಪಿಎಲ್‌ ಪ್ರಾಯೋಜಕತ್ವದಲ್ಲಿ ಮುಂದುವರಿಸಿದ ಐಪಿಎಲ್‌ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ಮಂಗಳವಾರ ದೇಶದಲ್ಲಿ ಪ್ರತಿಭಟನೆಗಳು ನಡೆದಿದ್ದವು. ವಿವೊ ಪಾಯೋಜಕತ್ವದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದೆ ಎಂದು ವರದಿಯಾಗಿದೆ. ಗಡಿ ಸಂಘರ್ಷದ ಬಳಿಕ ಭಾರತವು ಚೀನಾ ಮೂಲದ ಹಲವು […]

ಕರಾವಳಿಯಾದ್ಯಂತ ಆಗಸ್ಟ್ 8ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿಯಾದ್ಯಂತ ಆಗಸ್ಟ್ 8ರ ವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಆ. 8ರ ವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿ ಜಿಲ್ಲೆಯಾದ್ಯಂತ ಆ. 6ರ ವರೆಗೆ ಮದ್ಯ ಮಾರಾಟ ಬಂದ್

ಉಡುಪಿ: ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಆ. 6ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು. ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್ ಇಡಿ […]