ಉಡುಪಿಯಲ್ಲಿ ಇಂದು 170 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇಂದು 170 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4970ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯ, ಖಾಸಗಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ
ಬೆಂಗಳೂರು: ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಹಾಗೂ ಎಲ್ಲಾ ಖಾಸಗಿ ದೇವಾಲಯಗಳಲ್ಲಿ ಶಿಲಾನ್ಯಾಸ ಕಾರ್ಯಕ್ರಮದ ಸಂದರ್ಭದಲ್ಲಿ ಅರ್ಚಕರ ಮೂಲಕ ವಿಶೇಷ ಪೂಜೆ ಹಾಗೂ ಪ್ರಾರ್ಥನೆ (ಕೋವಿಡ್ ನಿಯಮ ಪಾಲಸಿಕೊಂಡು) ಯನ್ನು ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿಯಲ್ಲಿ ಆ.6ರ ವರೆಗೆ ನಿಷೇಧಾಜ್ಞೆ ಜಾರಿ
ಉಡುಪಿ: ಅಯೋಧ್ಯೆಯಲ್ಲಿ ನಾಳೆ (ಆ.5) ರಾಮಮಂದಿರ ನಿರ್ಮಾಣದ ಭೂಮಿಪೂಜೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಆ. 6ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಆಗಸ್ಟ್ 5ರಂದು ಉಡುಪಿ ಬಿಜೆಪಿ ಕಚೇರಿಯಲ್ಲಿ ಮನ್ವಂತರ ಕಾರ್ಯಕ್ರಮ
ಉಡುಪಿ: ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆಯಲ್ಲಿ ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಮಹಿಳಾ ಮೋರ್ಚಾದ ಸಹಭಾಗಿತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11.30ಕ್ಕೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ‘ಮನ್ವಂತರ’ ರಂಗೋಲಿ ಸ್ಪರ್ಧೆ, ಭಜನೆ, ರಾಮರಕ್ಷಾಸ್ತೋತ್ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಕ್ಷದ ಎಲ್ಲ ಪ್ರಮುಖರು, ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು, ಎಲ್ಲ ಮೋರ್ಚಾಗಳ ಅಧ್ಯಕ್ಷರು, ಎಲ್ಲ ಪ್ರಕೋಷ್ಠಗಳ ಸಂಚಾಲಕರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ. 5ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ರಾಮಮಂದಿರ ಭೂಮಿ ಪೂಜೆಯ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮ
ಉಡುಪಿ: ಅಯೋಧ್ಯೆ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್ ಬಜರಂಗದಳ ವತಿಯಿಂದ ಆಗಸ್ಟ್ 5ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಭೂಮಿ ಪೂಜನಾ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 11ರಿಂದ ಶ್ರೀರಾಮ ನಾಮ ಜಪ, ಭಜನೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ ಹಾಗೂ ಹಿರಿಯ ವಿಶ್ವಪ್ರಿಯ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಸಂಘಟನೆ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ