ಬೈಂದೂರು: ಹೊಳೆ ದಾಟುತ್ತಿದ್ದ ವೇಳೆ ಕೊಚ್ಚಿಹೋದ ಮಹಿಳೆ
ಬೈಂದೂರು: ಇಲ್ಲಿನ ಕಾಲ್ತೋಡು ಗ್ರಾಮದಲ್ಲಿ ಹೊಳೆ ದಾಟುತ್ತಿದ್ದ ವೇಳೆ ಮಹಿಳೆಯೊಬ್ಬರು ನೀರಿಗೆ ಬಿದ್ದು ಕೊಚ್ಚಿಹೋದ ಘಟನೆ ನಡೆದಿದೆ. ಸೂರಮ್ಮ ಪೂಜಾರ್ತಿ (66) ಹೊಳೆ ನೀರಿನಲ್ಲಿ ಕೊಚ್ಚಿ ಹೋದವರೆಂದು ಗುರುತಿಸಲಾಗಿದೆ. ಹೊಳೆ ದಾಟಿಕೊಂಡು ಮನೆಗೆ ಹೋಗುವಾಗ ಈ ದುರ್ಘಟನೆ ನಡೆದಿದ್ದು, ಮಳೆ ನೀರಿನ ರಭಸಕ್ಕೆ ಮಹಿಳೆ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಭಾರಿ ಮಳೆ ಹಿನ್ನೆಲೆ: ಉಡುಪಿ ಡಿಸಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಿಎಂ
ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಭಾರಿ ಗಾಳಿಮಳೆ ಸುರಿಯುತ್ತಿರುವ ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಉಡುಪಿ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರವಾಹ ಉಂಟಾಗುವ ಭೀತಿ ಇದ್ದಲ್ಲಿ ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಹಾಗೂ ಮಳೆ ಹಾನಿಗೆ ಸೂಕ್ತ ಪರಿಹಾರ ನೀಡಿ ಎಂದು ಡಿಸಿ ಜಿ. ಜಗದೀಶ್ ಅವರಿಗೆ ಸೂಚಿಸಿದ್ದಾರೆ.
ಉಡುಪಿಯಲ್ಲಿ ಧಾರಾಕಾರ ಮಳೆ: ಚರಂಡಿಗೆ ಬಿದ್ದು ಮಹಿಳೆ ಸಾವು
ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮಳೆ ಅಬ್ಬರಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಪುತ್ತೂರು ಗ್ರಾಮದ ಕುಕ್ಕುಂಜೆ ನಿವಾಸಿ ಗುಲಾಬಿ (60) ಎಂಬುವವರು ಆಕಸ್ಮಿಕವಾಗಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ. ನಿಟ್ಟೂರು- ಹನುಮಂತನಗರದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿ: ಸತತವಾಗಿ ಗಾಳಿ ಸಹಿತ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಸ್ವರ್ಣ, ಸೌಪರ್ಣಿಕಾ, ಸೀತಾ ನದಿಗಳು […]
ಆ.10 ವರೆಗೆ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ನಿರೀಕ್ಷೆ, ರೆಡ್ ಅಲರ್ಟ್ ಘೋಷಣೆ
ಉಡುಪಿ: ಕರಾವಳಿಯಾದ್ಯಂತ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 10ರ ವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ಆ.10 ವರೆಗೂ ಮಳೆಯ ನಿರೀಕ್ಷೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಕೊರೊನಾ ಪಾಸಿಟಿವ್
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಕೆಲ ದಿನಗಳ ಹಿಂದೆ ಹರೀಶ್ ಪೂಂಜಾ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಭೇಟಿಯಾದ ಒಂದೆರಡು ದಿನದಲ್ಲೇ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದ ತಕ್ಷಣ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದೀಗ ಪಾಸಿಟಿವ್ ದೃಢಪಟ್ಟಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.