ಉಡುಪಿ: 217 ಮಂದಿಗೆ ಕೊರೊನಾ ಪಾಸಿಟಿವ್: 36 ವರ್ಷದ ಯುವಕ ಸಹಿತ ಆರು ಮಂದಿ ಕೊರೊನಾಗೆ ಬಲಿ
ಉಡುಪಿ: ಜಿಲ್ಲೆಯಲ್ಲಿ ಇಂದು 217 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5360 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 34 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 51 ಮಂದಿ ಸಹಿತ 85 ಮಂದಿ ಕೊರೊನಾ ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 3157 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2153 ಸಕ್ರಿಯ ಕೊರೊನಾ ಸೋಂಕಿತರಿದ್ದು, 1054 […]
ಮಳೆ ಹಾನಿಗೆ ತಕ್ಷಣ ಪರಿಹಾರ ವಿತರಿಸಿ: ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಚಿವ ಬೊಮ್ಮಾಯಿ ಹೇಳಿಕೆ
ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ಥರಿಗೆ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ತಕ್ಷಣವೇ ಪರಿಹಾರ ವಿತರಿಸುವಂತೆ ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಗುರುವಾರ, ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಮಳೆ ಹಾನಿ ಹಾಗೂ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪ್ರಾಥಮಿಕ ಹಂತದ ಪರಿಹಾರ ಬಿಡುಗಡೆಗೊಳಿಸಿ, ಮನೆ ಹಾನಿಯ ವಿವರ ಕುರಿತು ರಾಜೀವ ಗಾಂಧಿ ವಸತಿ […]
ಗೇರು ಬೆಳೆಯಲ್ಲಿ ಎಲೆ ತಿನ್ನುವ ದುಂಬಿಗಳನ್ನು ಹೇಗೆ ನಿಯಂತ್ರಿಸೋದು :ಇಲ್ಲಿದೆ ಕೃಷಿಕರಿಗೆ ಸಲಹೆ
ಉಡುಪಿ : ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಗೇರು ಬೆಳೆಯಲ್ಲಿ ಎಲೆ ತಿನ್ನುವ ದುಂಬಿಗಳು ಕಾಣಿಸಿಕೊಳ್ಳುತ್ತಿದ್ದು, ಸೂಕ್ತ ಹತೋಟಿ ಕ್ರಮವನ್ನು ಕೈಗೊಳ್ಳುವುದು ಉತ್ತಮ. ಈ ದುಂಬಿಗಳನ್ನು ವೈಜ್ಞಾನಿಕವಾಗಿ ಮೋನೊಲಿಪ್ಟಾ ಲೊಂಗಿಟಾರ್ಸಸ್ ಎಂದು ಕರೆಯಲಾಗುತ್ತದೆ. ಪಶ್ಚಿಮ ಕರಾವಳಿ ಭಾಗದಲ್ಲಿ ಕಂಡು ಬರುವ ಪ್ರಮುಖ ಕೀಟವಾಗಿದ್ದು, ಕೆಂಪು ಬಣ್ಣದಿಂದ ಕೂಡಿರುತ್ತದೆ. ಈ ದುಂಬಿಗಳು, ಅಧಿಕ ಪ್ರಮಾಣದಲ್ಲಿ ಗುಂಪು ಗುಂಪಾಗಿ ಕಂಡು ಬಂದು, ಎಳೆಯ ಗಿಡಗಳು, ಮರದ ಚಿಗುರುಗಳು ಹಾಗೂ ಸಸ್ಯಾಗಾರದ ಗಿಡಗಳಲ್ಲಿ ಅಧಿಕ ಹಾನಿಯನ್ನುಂಟು ಮಾಡುತ್ತದೆ. ಮುಂಗಾರಿನ ಸಮಯದಲ್ಲಿ (ಜೂನ್-ಅಗಸ್ಟ್) […]
ಮಣಿಪಾಲ:ರೋಟರಿ ಕ್ಲಬ್ ಪದಗ್ರಹಣ ಸಮಾರಂಭ
ಮಣಿಪಾಲ:ರೋಟರಿ ಕ್ಲಬ್ ಮಣಿಪಾಲದ 2020 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾ ಗವರ್ನರ್ ಡಾ.ಗೌರಿ ಅವರ ಮಾರ್ಗದರ್ಶನದಲ್ಲಿ ಜು.15 ರಂದು ಜರಗಿತು.ನೂತನ ಅಧ್ಯಕ್ಷರಾಗಿ ಡಾ.ರವೀಂದ್ರ ನಾಯಕ್, ಕಾರ್ಯದರ್ಶಿಯಾಗಿ ಜ್ಯೋತಿ ಆರ್ ನಾಯಕ್, ಖಜಾಂಚಿಯಾಗಿ ಗೋಪಾಲ ಗಾಣಿಗ ಪದಗ್ರಹಣ ಸ್ವೀಕರಿಸಿದರು. ನೂತನವಾಗಿ ಆಯ್ಕೆಯಾದವರಿಗೆ ಪದಗ್ರಹಣ ಭೋಧಿಸಲಾಯಿತು. ಗವರ್ನರ್ ಆನಂದ ಉದ್ಯಾವರ, ಸಂತೆಕಟ್ಟೆ ರಾಮದಾಸ ನಾಯ್ಕ್, ಪೆರ್ಡೂರು ಸಮನ್ವಯ ಅಧಿಕಾರಿ ರಾಜೇಶ್ ಡಿ, ಸ್ಥಾಪಕಾಧ್ಯಕ್ಷ ಸೇಸಪ್ಪ ರೈ, ಹಿಂದಿ ಅಧ್ಯಕ್ಷರುಗಳಾದ ಸಚ್ಚಿದನಂದ ನಾಯಕ್, ಡಾ.ನಯನಾಭಿರಾಮ ಉಡುಪ, ಡಾ.ಕೆಂಪರಾಜ್, ನಿಕಟಪೂರ್ವ […]
ನೆರೆ ಪರಿಹಾರ ಕಾರ್ಯಗಳಿಗೆ 50 ಕೋಟಿ ರೂ. ಬಿಡುಗಡೆ: ಸಿಎಂ ಯಡಿಯೂರಪ್ಪ
ಉಡುಪಿ: ರಾಜ್ಯದ ನೆರೆ ಪೀಡಿತ ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು 50 ಕೋಟಿ ರೂ. ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿದ ಅವರು, ಪ್ರವಾಹ ಸ್ಥಿತಿ ಇರುವ ಪ್ರದೇಶಗಳಲ್ಲಿ ತಕ್ಷಣ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೇಳಿದ್ದೇನೆ. ಅಗತ್ಯಬಿದ್ದರೆ ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಹಣ ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ […]