ಉಡುಪಿ: 314 ಮಂದಿಗೆ ಕೊರೊನಾ ಪಾಸಿಟಿವ್: ಐದು ಮಂದಿ ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 314 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5919ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 59 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 30 ಮಂದಿ ಸಹಿತ 89 ಮಂದಿ ಕೊರೊನಾ ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 3347 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2512 ಸಕ್ರಿಯ ಕೊರೊನಾ ಸೋಂಕಿತರಿದ್ದು, 1287 ಮಂದಿ […]

ಕುಂದಾಪುರ: ಹೆದ್ದಾರಿಯಲ್ಲಿ ಮಳೆ ನೀರುನಿಂತು ವಾಹನ ಸಂಚಾರಕ್ಕೆ ತೊಂದರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಸ್ಥಳೀಯರ ಆಕ್ರೋಶ

ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ರಾಷ್ಟ್ರೀಯ ಹೆದ್ದಾರಿಯ ಫ್ಲೈಒವರ್ ಬಳಿ ಇಂದು ಸ್ಥಳೀಯರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರನ್ನು ತಡೆದು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಆಗುತ್ತಿರುವ ಸಮಸ್ಯೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಅಸಮರ್ಪಕ ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ಇದರಿಂದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಕಳೆದ ಹತ್ತು ವರ್ಷಗಳಿಗಿಂತಲೂ ಹೆಚ್ಚು ಸಮಯದಿಂದ ಹೆದ್ದಾರಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. […]

ತುಪ್ಪದಿಂದ ಅದೆಷ್ಟು ಲಾಭವಿದೆಯಂತ ನಿಮಗೆ ಗೊತ್ತಿರಲಿ: ಡಾಕ್ಟ್ರು ಹೇಳಿದ ತುಪ್ಪದ ಗುಟ್ಟುಗಳು

ಸಂಸ್ಕೃತದಲ್ಲಿ ಘೃತ ಎಂದು ಕರೆಯಲಾಗುವ ತುಪ್ಪವು ಪವಿತ್ರ ಎಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ತಯಾರಿಸಿದ ಹಸುವಿನ ಹಾಲಿನ ಶುದ್ಧ  ತುಪ್ಪದ ಆರೋಗ್ಯ ಲಾಭವು ಅಪಾರ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಯಾರೂ ಕೂಡ ಸೇವಿಸಬಹುದು ಈ ತುಪ್ಪವನ್ನು.   ತುಪ್ಪದಿಂದ ಏನೇನ್ ಲಾಭ ಇದೆ ಒಮ್ಮೆ ಕೇಳಿ ♦ ತುಪ್ಪವು ನಿಗದಿತ ಪ್ರಮಾಣದಲ್ಲಿ (ಒಂದುವರೆ ಚಮಚ) ಸೇವಿಸಿದರೆ ಜೀರ್ಣಶಕ್ತಿಯನ್ನು ಹೆಚ್ಚಿಸಿ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಮಾಡುತ್ತದೆ. ಆದರೆ ಅತಿ ಹೆಚ್ಚು ಪ್ರಮಾಣದಲ್ಲಿ ಸೇವಿಸಿದರೆ ಅಜೀರ್ಣಕ್ಕೆ ಕಾರಣವಾಗುತ್ತದೆ. ♦ ದೇಹದಲ್ಲಿ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು […]

ಸಿಡಿಲು ಬಡಿದು ಮೃತಪಟ್ಟ ಗೌತಮ್ ಕುಟುಂಬಕ್ಕೆ ಪ್ರಾಕೃತಿಕ ವಿಕೋಪ ನಿಧಿಯಡಿ 5 ಲಕ್ಷ ರೂ. ಪರಿಹಾರ ಮೊತ್ತ ಮಂಜೂರು: ಶಾಸಕ ಕೆ. ರಘುಪತಿ ಭಟ್ ರಿಂದ ಕುಟುಂಬಕ್ಕೆ ವಿತರಣೆ

ಉಡುಪಿ: ಸಿಡಿಲು ಬಡಿದು ಮೃತಪಟ್ಟ ಕೊಡವೂರು ವಾರ್ಡ್ ನಿವಾಸಿ ಗೌತಮ್ ಕುಟುಂಬಕ್ಕೆ ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ 5 ಲಕ್ಷ ರೂ. ಮೊತ್ತದ ಚೆಕ್ ಅನ್ನು ಶಾಸಕ ಕೆ. ರಘುಪತಿ ಭಟ್ ಅವರು ಮೃತ ಗೌತಮ್ ಮನೆಗೆ ತೆರಳಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಎಎಸ್ಪಿ ಜೈಶಂಕರ್, ಮಲ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ತಿಮ್ಮೇಶ್ ಇದ್ದರು.

ಹೆರಿಟೇಜ್ ವಿಲೇಜ್ ಗೆ ಕಂದಾಯ ಸಚಿವರ ಭೇಟಿ

ಉಡುಪಿ ಆಗಸ್ಟ್ 8: ರಾಜ್ಯದ ಕಂದಾಯ ಸಚಿವ ಆಶೋಕ್ ಅವರು ಶನಿವಾರ, ಮಣಿಪಾಲದ ಹೆರಿಟೇಜ್ ವಿಲೇಜ್ ಗೆ ಭೇಟಿ ನೀಡಿ, ಪಾರಂಪರಿಕ ಮನೆಗಳನ್ನು ವೀಕ್ಷಿಸಿದರು. ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,  ಉಡುಪಿ ಶಾಸಕ ರಘುಪತಿ ಭಟ್,  ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತಿತರರು ಉಪಸ್ಥಿತರಿದ್ದರು.