ಮಲೆಕುಡಿಯ ಸಂಘದ ಕಟ್ಟಡಕ್ಕೆ 2 ಕೋ.ರೂ. ಅನುದಾನ ಬಿಡುಗಡೆ: ವಿ. ಸುನಿಲ್ ಕುಮಾರ್

ಕಾರ್ಕಳ: ಮಲೆಕುಡಿಯ ಸಂಘದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ನಡೆಸಲು ಕಾರ್ಕಳ ತಾಲೂಕಿನ ಮಾಳದಲ್ಲಿ ನಿರ್ಮಾಣ ಆಗಲಿರುವ ಜಿಲ್ಲಾ ಮಲೆಕುಡಿಯ ಸಂಘದ ಕಟ್ಟಡಕ್ಕೆ ಸರಕಾರದ ವತಿಯಿಂದ 2ಕೋ. ರೂ. ಅನುದಾನ ಬಿಡುಗಡೆಗೊಂಡಿದ್ದು, ಮಂಜೂರು ಆದೇಶ ಪ್ರತಿಯನ್ನು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಮಂಜಪ್ಪ ಗೌಡ ಶಾಸಕ ವಿ. ಸುನಿಲ್ ಕುಮಾರ್ ಅವರು ಸಂಘದ ಸಮಾಲೋಚನಾ ಸಭೆಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭ ಶಾಸಕರಾದ ವಿ.ಸುನಿಲ್ ಕುಮಾರ್ ಮಾತನಾಡಿ, ಮಲೆಕುಡಿಯ ಜನಾಂಗದ ಹತ್ತಾರು ಸಮಸ್ಯೆಗಳು ನನ್ನ ಬಳಿ ಬಂದಿದ್ದು, […]
ಬ್ರಹ್ಮಾವರ: ಬೇಕರಿ ಓವನ್ ಸ್ಪೋಟ: ಮಾಲೀಕ ಸಾವು

ಬ್ರಹ್ಮಾವರ: ಇಲ್ಲಿನ ಮಾಬುಕಳದ ಬೇಕರಿಯೊಂದರ ಓವನ್ ಸ್ಪೋಟಗೊಂಡ ಪರಿಣಾಮ ಬೇಕರಿ ಮಾಲೀಕ ರಾಬರ್ಟ್ ಪುಟಾರ್ಡೊ ಸ್ಥಳದಲ್ಲೇ ಮೃತಟ್ಟಿದ್ದಾರೆ. ದೊಡ್ಡ ಗಾತ್ರದ ಓವನ್ ಸ್ಪೋಟಗೊಂಡಿರುವುದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಕೋವಿಡ್ ವರದಿ ನೆಗೆಟಿವ್: ನಾಳೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ನಾಳೆ (ಆ.11) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಅವರು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸಿಎಂ ಆಸ್ಪತ್ರೆಗೆ ದಾಖಲಾಗಿ ನಾಳೆಗೆ ಹತ್ತು ದಿನಗಳು ಆಗಲಿದೆ. ಇದೀಗ ಸಿಎಂ ಸಂಪೂರ್ಣ ಗುಣಮುಖರಾಗಿದ್ದು, ಇಂದು ಬೆಳಿಗ್ಗೆ ಬಂದ ಕೊರೊನಾ ವರದಿಯಲ್ಲಿ ನೆಗೆಟಿವ್ ಬಂದಿದೆ. ಹಾಗಾಗಿ ನಾಳೆ ಸಿಎಂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.