ಉಡುಪಿ: ಇಂದು 263 ಮಂದಿಗೆ ಕೊರೊನಾ ಪಾಸಿಟಿವ್; ಉಡುಪಿಯ 35 ವರ್ಷದ ಯುವಕ ಸಹಿತ ಮೂವರು ಕೊರೊನಾಗೆ ಬಲಿ
ಉಡುಪಿ: ಜಿಲ್ಲೆಯಲ್ಲಿ ಇಂದು 263 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6773 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 116 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 82 ಮಂದಿ ಸಹಿತ 198 ಮಂದಿ ಕೊರೊನಾ ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 3966 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2738 ಸಕ್ರಿಯ ಕೊರೊನಾ ಸೋಂಕಿತರಿದ್ದು, 1448 […]
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ: ಧಾರ್ಮಿಕ ದತ್ತಿ ಇಲಾಖೆಯ ಪ್ರಕಟಣೆ ತಿಳಿಸಿದೆ
ಉಡುಪಿ: ಕೋವಿಡ್ 19 ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಗಣೇಶನ ವಿಗ್ರಹವಿಟ್ಟು ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಅಧಿಕಾರವನ್ನು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ಭಕ್ತಾಧಿಗಳು ಸಾರ್ವಜನಿಕ ಸ್ಥಳದಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ. ಆದ್ದರಿಂದ ಸಾರ್ವಜನಿಕವಾಗಿ ಸಭೆ, ಸಮಾರಂಭಗಳನ್ನು ಆಚರಿಸಲು ಕೇಂದ್ರ, ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಜಾರಿಗೊಳಿಸಿರುವ ಆದೇಶಗಳನ್ನು ಪರಿಶೀಲನೆ ನಡೆಸಿ, ಸಾರ್ವಜನಿಕ […]
ಸಾರ್ವಜನಿಕ ಆಸ್ತಿಪಾಸ್ತಿಗೆ ಆದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು: ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಆದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಲಭೆ, ಪ್ರತಿಭಟನೆ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಆಗುವ ನಷ್ಟವನ್ನು ಮಾಡುವವರಿಂದಲೇ ಭರಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರಂತೆ ಕರ್ನಾಟಕ ಸರ್ಕಾರವೂ ಕಾರ್ಯನಿರ್ವಹಿಸಲಿದೆ’ ಎಂದರು. ನಿನ್ನೆಯ ಗಲಭೆ ವೇಳೆ ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿದವರನ್ನು ಸಿಸಿಟಿವಿ ಫೂಟೇಜ್ ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳ […]
ಬೆಂಗಳೂರಿನ ಕೆ.ಜಿ.ಹಳ್ಳಿ ಗಲಭೆ; ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು: ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಆಗ್ರಹ.
ಉಡುಪಿ: ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ನೀಚ ಕೃತ್ಯವನ್ನು ಖಂಡಿಸುತ್ತೇನೆ. ಬೆಂಗಳೂರಿನ ಕಾವಲ್ ಸಂದ್ರ ಪೊಲೀಸ್ ವಸತಿಗೃಹದ ಗೇಟ್ ಮುರಿದು ಪೊಲೀಸರ ಮನೆಗಳಿಗೆ ನುಗ್ಗಿ ಮಕ್ಕಳ, ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಕಾಪು ಮಂಡಲದ ಬಿ.ಜೆ.ಪಿ ಯುವ ಮೋರ್ಚಾ ಪಿತ್ರೋಡಿ ಅಧ್ಯಕ್ಷ ಸಚಿನ್ ಸುವರ್ಣ ಆಗ್ರಹಿಸಿದ್ದಾರೆ. ಕೈಯಲ್ಲಿ ಮಾರಕಾಯುಧಗಳನ್ನು ಹಿಡಿದು ಬಂದ ಮತಾಂಧ ಉಗ್ರರು ಪೊಲೀಸರ ವಾಹನಗಳನ್ನು ಪುಡಿ ಮಾಡಿ, ಬೆಂಕಿ ಹಚ್ಚಿ, […]
ಪತ್ರಕರ್ತರ ಮೇಲೆ ಹಲ್ಲೆ: ಉಡುಪಿ ಪತ್ರಕರ್ತರ ಸಂಘದಿಂದ ಖಂಡನೆ
ಉಡುಪಿ: ಬೆಂಗಳೂರಿನ ದೇವರ ಜೀವನ ಹಳ್ಳಿ (ಡಿ ಜಿ ಹಳ್ಳಿ) ಪ್ರಕರಣದಲ್ಲಿ ವರದಿ ಮಾಡಲು ತೆರಳಿದ್ದ ಸುವರ್ಣ ನ್ಯೂಸ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ, ವಾಹನ ಜಖಂ ಮಾಡಿರುವುದನ್ನು ಉಡುಪಿ ಪತ್ರಕರ್ತರ ಸಂಘ ಖಂಡಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಹಲ್ಲೆಕೋರರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಸರಕಾರವನ್ನು ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.