ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯ: ಗೃಹ ಸಚಿವ ಬೊಮ್ಮಾಯಿ

ಉಡುಪಿ: ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಫೇಸ್ ಬುಕ್ ಪೋಸ್ಟ್, ಚರ್ಚೆ ಮೂಲಕ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಇದರಲ್ಲಿ ಸಮಾಜ ಘಾತುಕಶಕ್ತಿಗಳ ಷಡ್ಯಂತ್ರ, ಕುಮ್ಮಕ್ಕು ಕಂಡುಬಂದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಘಟನೆ ಸಂಪೂರ್ಣ ನಿಯಂತ್ರಣದಲ್ಲಿದೆ. ಸ್ಥಳದಲ್ಲಿ ಶಾಂತಿ ಕಾಪಾಡಲು ಕ್ರಮಕೈಗೊಳ್ಳಲಾಗಿದೆ ಎಂದರು. *ಮೂರು ಸಿಆರ್ ಪಿಎಫ್ ಪಡೆ ನಿಯೋಜನೆ* ಘಟನೆ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ […]
ಡಿ.ಜೆ.ಹಳ್ಳಿ ಗಲಭೆ: ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ

ಬೆಂಗಳೂರು: ಡಿ.ಜೆ.ಹಳ್ಳಿಯಲ್ಲಿ ಶಾಸಕನ ಮನೆ ಹಾಗೂ ಪೊಲೀಸ್ ಠಾಣೆಗೆ ದಾಳಿ ನಡೆಸಿದ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಅವರು,’ ಕಿಡಿಗೇಡಿಗಳು ಕೈ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ […]
ಕೆ.ಜಿ.ಹಳ್ಳಿ ಗಲಭೆ: ದುಷ್ಕರ್ಮಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರ ಸೂಚನೆ

ಉಡುಪಿ: ಬೆಂಗಳೂರಿನ ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ಗಲಭೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಚಿವರು, ಗಲಭೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಕಾನೂನು ಕೈಗೆತ್ತಿಕೊಂಡವರು ಎಷ್ಟೆ ದೊಡ್ಡವರಾದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚಿಸಲಾಗಿದೆ. […]
ಕೆ.ಜಿ. ಹಳ್ಳಿ ಗಲಭೆ: 110 ಮಂದಿ ಆರೋಪಿಗಳ ಬಂಧನ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ನಿನ್ನೆ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್( ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಂಗಿ ಮಗ)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ‘ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ […]
ಪೈಗಂಬರ್ ಬಗ್ಗೆ ಅವಹೇಳನ: ಕೈ ಶಾಸಕನ ಮನೆಗೆ ಬೆಂಕಿ: ಪೊಲೀಸರ ಗುಂಡಿಗೆ ಮೂವರು ಗಲಭೆಕೋರರು ಬಲಿ

ಬೆಂಗಳೂರು: ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ 500ಕ್ಕೂ ಅಧಿಕ ದುಷ್ಕರ್ಮಿಗಳ ಗುಪೊಂದು ಪುಲಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಲ್ಲು ತೂರಾಟ ನಡೆಸಿ ಬೆಂಕಿಹಚ್ಚಿದ ಘಟನೆ ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿ ನಡೆದಿದೆ. ಶಾಸಕನ ತಂಗಿ ಮಗ ಮಹಮ್ಮದ್ ಪೈಗಂಬರ್ ರ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಈ ದಾಂಧಲೆ ನಡೆಸಿದ್ದಾರೆ. ರಸ್ತೆಯಲ್ಲಿರುವ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ […]