ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಗೆ ಕೊರೊನಾ ಪಾಸಿಟಿವ್
ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಶಾಸಕರಿಗೆ ಯಾವುದೇ ಕೊರೊನಾ ಲಕ್ಷಣ ಕಂಡುಬಂದಿಲ್ಲ. ಹಾಗಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶಾಸಕರು ಸ್ವಯಂ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಮುಂಜಾಗೃತಾ ಕ್ರಮವಾಗಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.
ಎಸ್ ಡಿಪಿಐ ಉಗ್ರಸಂಘಟನೆಯನ್ನು ಕೂಡಲೇ ನಿಷೇಧಿಸಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಆಗ್ರಹ
ಉಡುಪಿ: ಎಸ್ ಡಿಪಿಐ ಒಂದು ಉಗ್ರ ಸಂಘಟನೆಯಾಗಿದ್ದು, ದೇಶದಾದ್ಯಂತ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪ್ರೇರೇಪಿಸುವುದು ಮತ್ತು ಅವರಿಗೆ ರಕ್ಷಣೆ ಕೊಡುವ ಕೆಲಸ ಮಾಡುತ್ತಿದೆ. ಇದು ಈಗಾಗಲೇ ಹಲವಾರು ಘಟನೆಗಳಲ್ಲಿ ಬಹಿರಂಗಗೊಂಡಿದ್ದು, ಈಗ ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ನಡೆದ ಗಲಭೆಯಲ್ಲಿ ಮತ್ತೆ ಸಾಬೀತಾಗಿದೆ. ಹಾಗಾಗಿ ಈ ಸಂಘಟನೆಯನ್ನು ಕೂಡಲೇ ದೇಶಾದ್ಯಂತ ನಿಷೇಧ ಮಾಡಬೇಕು ಎಂದು ಶ್ರೀರಾಮಸೇನೆ ಉಡುಪಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಒತ್ತಾಯಿಸಿದ್ದಾರೆ. ಹಾಗೆಯೇ ಎಸ್ ಡಿಪಿಐ ಸಂಘಟನೆ ಶೃಂಗೇರಿ ಶಂಕರಾಚಾರ್ಯರ ವೃತ್ತದ ಜಗದ್ಗುರು ಶಂಕರಾಚಾರ್ಯರ ಪ್ರತಿಮೆ […]
ಉಡುಪಿ ತಾಪಂ: ನೂತನ ಅಧ್ಯಕ್ಷರಾಗಿ ಸಂಧ್ಯಾ ಕಾಮತ್, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಬೈಲಕೆರೆ ಅವಿರೋಧವಾಗಿ ಆಯ್ಕೆ
ಉಡುಪಿ: ಉಡುಪಿ ತಾಲ್ಲೂಕು ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಂಧ್ಯಾ ಕಾಮತ್ ಹಾಗೂ ಉಪಾಧ್ಯಕ್ಷರಾಗಿ ಶರತ್ ಕುಮಾರ್ ಬೈಲಕೆರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಕುಂದಾಪುರ ಸಹಾಯಕ ಕಮಿಷನರ್ ರಾಜು ಅಧಿಕೃತವಾಗಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಉಡುಪಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ರಾಜ್ ಹಾಗೂ ಅವಿಭಜಿತ ಉಡುಪಿ , ಕಾಪು ಮತ್ತು ಬ್ರಹ್ಮಾವರ ತಾಲ್ಲೂಕು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು ಗಲಭೆ ಪೂರ್ವಯೋಜಿತ ಕೃತ್ಯ: ಎಸ್ ಡಿಪಿಐ, ಕೆಎಫ್ ಡಿ ಸಂಘಟನೆ ನಿಷೇಧಿಸಬೇಕು: ನಳಿನ್
ಕೊಪ್ಪಳ: ಬೆಂಗಳೂರಿನ ಡಿಜೆ ಹಳ್ಳಿಯ ಗಲಭೆ ಪೂರ್ವ ಯೋಜಿತ ಕೃತ್ಯ. ಈ ಗಲಭೆಯಲ್ಲಿ ಎಸ್ಡಿಪಿಐ, ಕೆಎಫ್ಡಿ ಸಂಘಟನೆಯ ಕೈವಾಡ ಇದೆ ಎನ್ನುವ ಮಾತುಗಳಿದ್ದು, ಇವುಗಳನ್ನು ನಿಷೇಧ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ವಿರೋಧವಿದೆ. ಅಂತವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುತ್ತದೆ. ಆದರೆ ಗಲಭೆ, ಸಾವರ್ಜನಿಕ ಆಸ್ತಿಪಾಸ್ತಿ ಹಾನಿ ಸರಿಯ? ಏಕಾಏಕಿ ಜನರು ಹೇಗೆ ಸೇರಿದರು, ಪೆಟ್ರೋಲ್ ಬಾಂಬ್ಗಳು, […]
ಎಸ್ಸೆಸ್ಸೆಲ್ಸಿ ಪರೀಕ್ಷೆ: ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸತತ 6ನೇ ಬಾರಿಗೆ ಶೇ. 100 ಫಲಿತಾಂಶ ದಾಖಲು
ಬೈಂದೂರು: ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ 2019-2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ 6ನೇ ಬಾರಿಗೆ ಶೇ. 100 ಫಲಿತಾಂಶ ದಾಖಲಿಸಿದೆ. ಐದು ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕುಮಾರಿ ಪ್ರಗತಿ 609 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ, ಕೃಷ್ಣರಾಜ್ ದೊಂಬೆ 598 ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ರಿತೇಶ್ 559 ಅಂಕ ಗಳಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ […]