ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ.ಎಸ್. ಧೋನಿ ವಿದಾಯ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ.ಎಸ್. ಧೋನಿ ವಿದಾಯ ಘೋಷಿಸಿದ್ದಾರೆ. ಆ ಮೂಲಕ 16 ವರ್ಷದ ಕ್ರಿಕೆಟ್ ಬದುಕಿಗೆ ಪೂರ್ಣ ವಿರಾಮ ಹಾಕಿದ್ದಾರೆ. ಧೋನಿ 2004 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಈವರೆಗೆ 350 ಏಕದಿನ ಪಂದ್ಯ, 90 ಟೆಸ್ಟ್ ಪಂದ್ಯ, 98 ಟಿ ಟ್ವೆಂಟಿ ಪಂದ್ಯ ಆಡಿದ್ದಾರೆ. ಅವರು ನಾಯಕನಾಗಿ 2007ರಲ್ಲಿ ಚೊಂಚಲ ಟಿ ಟ್ವೆಂಟಿ ವಿಶ್ವಕಪ್, 2011ರ ವಿಶ್ವಕಪ್ ಹಾಗೂ 2013ರಲ್ಲಿ ಚಾಂಪಿಯನ್ ಟ್ರೋಫಿಯನ್ನು ಭಾರತಕ್ಕೆ ಗೆಲ್ಲಿಸಿಕೊಟ್ಟಿದ್ದಾರೆ. 2019ರ ವಿಶ್ವಕಪ್ ನಂತರ […]

ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಯದ್ ನದೀಮ್ ಸಾವು

ಬೆಂಗಳೂರು: ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಗೆ ಮತ್ತೊಂದು ಬಲಿಯಾಗಿದ್ದು, ಪೊಲೀಸ್ ಫೈರಿಂಗ್ ನಲ್ಲಿ ಗುಂಡೇಟು ತಿಂದಿದ್ದ ಸೈಯದ್ ನದೀಮ್ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಇದರೊಂದಿಗೆ ಗಲಭೆಯಲ್ಲಿ ಈವರೆಗೆ ಒಟ್ಟು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಆಗಸ್ಟ್ 11ರಂದು ರಾತ್ರಿ ಡಿಜೆ ಹಳ್ಳಿ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಈತನ ಭುಜಕ್ಕೆ ಗುಂಡೇಟು ಬಿದ್ದಿತ್ತು. ಇದೀಗ ಚಿಕಿತ್ಸೆ ಫಲಿಸದೆ ಈತ ಮೃತಪಟ್ಟಿದ್ದಾನೆ. ಗಲಭೆ ವೇಳೆ ಪೊಲೀಸರ ಫೈರಿಂಗ್ ಗೆ ಮೂವರು […]

ಸಾಮಾಜಿಕ ಸ್ವಾಸ್ಥ್ಯ ಕದಡುವ ವಿಷಯಗಳ ನಿಯಂತ್ರಣಕ್ಕೆ ಶೀಘ್ರ ಜಾಲತಾಣಗಳ ಮುಖ್ಯಸ್ಥರ ಸಭೆ: ಗೃಹ ಸಚಿವ ಬೊಮ್ಮಾಯಿ

ಹಾವೇರಿ: ಕೋಮು ಸಾಮರಸ್ಯ ಸೇರಿದಂತೆ ಸಾಮಾಜಿಕ ಸ್ವಾಸ್ಥ್ಯ ಕದಡುವ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ವಿಷಯಗಳ ಪೂರ್ವ ಪರಿಶೀಲನೆ ಕುರಿತಂತೆ ಚರ್ಚಿಸಲು ಎಲ್ಲ ಜಾಲತಾಣಗಳ ಮುಖ್ಯಸ್ಥರನ್ನು ಕರೆದು ಚರ್ಚಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.  ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಇನ್ಸಟ್ರಾಗ್ರಾಂ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ವಿಷಯಗಳನ್ನು ಪೋಸ್ಟ್ ಮಾಡುವ ಮುನ್ನ ಆಯಾ ಕಂಪನಿಗಳು ಪರಿಶೀಲಿಸಿ ಈ […]

ರೈತರಿಗೆ ಬೆಳೆ ಸಮೀಕ್ಷೆ ಮೊಬೈಲ್ ಆಪ್ ತರಬೇತಿ ನೀಡಿ: ಸಚಿವ ಕೆ. ಗೋಪಾಲಯ್ಯ

ಹಾಸನ: ರೈತರಿಗೆ ಸಹಾಯವಾಗುವಂತೆ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ ಮಾಡಿದ್ದು, ಇದರ ಬಳಕೆ ಬಗ್ಗೆ ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ರೈತರಿಗೆ ತರಬೇತಿ ನೀಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಅವರು ಇಂದು ಹಾಸನ ತಾಲ್ಲೂಕಿನ ಹೂವಿನ ಹಳ್ಳಿ ಕಾವಲಿನ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಕಾರ್ಯವೈಖರಿಯ ಬಗ್ಗೆ ಪರಿಶೀಲನೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ಆಪ್ ಮೂಲಕ […]

ಬಸ್‌ಗಳಲ್ಲಿ ಸೈಕಲ್: ನೂತನ ವ್ಯವಸ್ಥೆಗೆ ಚಿಂತನೆ: ಸಚಿವ ಲಕ್ಷ್ಮಣ ಸವದಿ

ರಾಯಚೂರು: ಸರ್ಕಾರಿ ಬಸ್ಸುಗಳಲ್ಲಿ ಸೈಕಲ್‌ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿಕೊಡಲು ಚಿಂತಿಸಲಾಗಿದೆ. ಆ ನಿಟ್ಟಿನಲ್ಲಿ ಬಸ್‌ಗಳ ಮುಂದೆ ಹಾಗೂ ಹಿಂಭಾಗದಲ್ಲಿ ಸೈಕಲ್ ಅಳವಡಿಸಲು ಅಗತ್ಯವಿರುವ ಸ್ಟ್ಯಾಂಡ್ ಅಳವಡಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ನಗರದ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೪ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿ ಮಾಹಿತಿ ನೀಡಿದರು. ಪ್ರಾಯೋಗಿಕವಾಗಿ ಇದನ್ನು ಮೊದಲು ಬೆಂಗಳೂರಿನಲ್ಲಿ ಕಾರ್ಯರೂಪಕ್ಕೆ ತರಲಾಗುವುದು. ಸೈಕಲ್ ಸಂಚಾರಿಗಳು ಬಸ್ ನಿಲ್ದಾಣಕ್ಕೆ ಬಂದು ಬಸ್‌ಗಳಲ್ಲಿ […]