74ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಪ್ರಧಾನಿಯ ಭಾಷಣದ ಮುಖ್ಯಾಂಶಗಳು

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಇಂದು ನಡೆದ ದೇಶದ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಭಾಷಣದ ಮುಖಾಂಶಗಳು ಈ ಕೆಳಗಿನಂತಿದೆ: * ಭಾರತ ಯುವ ಶಕ್ತಿಯಿಂದ ತುಂಬಿದ ದೇಶ, ‘ಆತ್ಮ ನಿರ್ಭರ’ಕ್ಕೆ ಆತ್ಮವಿಶ್ವಾಸ ಹೊಂದಿರುವ ದೇಶ ಭಾರತ. *ಆತ್ಮ ನಿರ್ಭರ ಭಾರತ’ ಕನಸನ್ನು ಭಾರತ ಸಾಕಾರಗೊಳಿಸುತ್ತದೆ ಎಂಬ ವಿಶ್ವಾಸ ನನಗಿದೆ. ಭಾರತೀಯರ ಸಾಮರ್ಥ್ಯ ಸಾಮರ್ಥ್ಯದ ಬಗ್ಗೆ ನನಗೆ ವಿಶ್ವಾಸವಿದೆ *ಕೃಷಿ ಕ್ಷೇತ್ರದಲ್ಲಿ ನಾವು ‘ಆತ್ಮ […]

ಉಡುಪಿ: ಇಂದು 241 ಮಂದಿಗೆ ಕೊರೊನಾ ಪಾಸಿಟಿವ್: ಇಬ್ಬರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 241 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7738ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 102 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 127 ಮಂದಿ ಸಹಿತ 229 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 5101 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2560 ಸಕ್ರಿಯ ಕೊರೊನಾ ಸೋಂಕಿತರಿದ್ದು, 1383 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ […]

ಮಾಜಿ ರಾಷ್ಟ್ರಪತಿ ಪ್ರಣವ್‌‌ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ: ಚಿಕಿತ್ಸೆ ಮುಂದುವರಿಕೆ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌‌ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ. ಅವರಿಗೆ ವೆಂಟಿಲೇಟರ್‌ ನೆರವಿನಿಂದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆಯ ವೈದ್ಯರು ಶನಿವಾರ ತಿಳಿಸಿದ್ದಾರೆ. ಪ್ರಣವ್‌ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಚಿಕಿತ್ಸೆ ಮುಂದುವರಿಸಲಾಗಿದೆ. ತಜ್ಞರ ತಂಡವು ನಿಯಮಿತವಾಗಿ ಅವರ ಮೇಲ್ವಿಚಾರಣೆ ನಡೆಸುತ್ತಿದೆ’ ಎಂದು ಆಸ್ಪತ್ರೆ ಪ್ರಕಟಣೆ ಹೊರಡಿಸಿದೆ.

ನಿಟ್ಟೆ ಕ್ಯಾಂಪಸ್‌ನಲ್ಲಿ 74ನೇ ಸ್ವಾತಂತ್ರ ದಿನಾಚರಣೆ

ನಿಟ್ಟೆ: ಭಾರತದ ಯುವಜನತೆ ದೇಶದ ಅತ್ಯಂತ ದೊಡ್ಡ ಸಂಪತ್ತು. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸ್ನೇಹ ಮನೋಭಾವವನ್ನು ಜಗತ್ತಿಗೆ ಪಸರಿಸುವುದರ ಮೂಲಕ ದೇಶವನ್ನು ಜಾಗತಿಕ ಮಟ್ಟದಲ್ಲಿ ಇನ್ನೂ ಹೆಚ್ಚು ಪ್ರಸಿದ್ಧವಾಗಿಸಲು ಸಾಧ್ಯವಿದೆ” ಎಂದು ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಭಟ್ ಅಭಿಪ್ರಾಯಪಟ್ಟರು. ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ೭೪ನೇ ಸ್ವಾತಂತ್ರ್ಯೋತ್ಸವ ಸರಳ ಕಾರ್ಯಕ್ರಮದಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ನಿಟ್ಟೆ ಕ್ಯಾಂಪಸ್‌ನ ರಿಜಿಸ್ಟ್ರಾರ್ ಪ್ರೊ.ಯೋಗೀಶ್ ಹೆಗ್ಡೆ, ಶಿಕ್ಷಕವೃಂದ, ಶಿಕ್ಷಕೇತರ ವರ್ಗದವರು ಭಾಗವಹಿಸಿದ್ದರು. ಪ್ರಸ್ತುತ ಕೋವಿಡ್-೧೯ […]

ಶಂಕರಾಚಾರ್ಯರ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮಕೈಗೊಳ್ಳಿ: ವಾಸುದೇವ ಭಟ್ ಆಗ್ರಹ

ಉಡುಪಿ: ದಕ್ಷಿಣ ಭಾರತದ ಪವಿತ್ರ ಪುಣ್ಯಕ್ಷೇತ್ರ ಶೃಂಗೇರಿಯ ಶಂಕರಾಚಾರ್ಯರ ಪ್ರತಿಮೆಯ ಮೇಲೆ ದುಷ್ಕರ್ಮಿಗಳು ಅನ್ಯಧರ್ಮೀಯ ಧ್ವಜವನ್ನು ಹಾರಿಸಿ ಅವಮಾನಿಸಿರುವುದನ್ನು ಹಿಂದೂ ಮುಖಂಡ ವಾಸುದೇವ ಭಟ್ ಪೆರಂಪಳ್ಳಿ ತೀವ್ರವಾಗಿ ಖಂಡಿಸಿದ್ದಾರೆ. ಭಾರತದ ನೆಲದಲ್ಲಿ ಸನಾತನ ಧರ್ಮದ ಸಂವರ್ಧನೆಗೆ ಅಮೂಲ್ಯ ಕೊಡುಗೆ ಕೊಟ್ಟ ಧೀಮಂತರಲ್ಲಿ ಆಚಾರ್ಯ ಶಂಕರರು ಪ್ರಮುಖರಾಗಿದ್ದಾರೆ. ಅವರನ್ನು ಈ ನೆಲ ಸಾರ್ವಕಾಲಿಕ ಮಾನ್ಯರೆಂದೇ ಪರಿಗಣಿಸಿದೆ. ಅವರ ಸ್ಮಾರಕಕ್ಕೆ ಅವಮಾನ ಮಾಡಿರುವುದು ರಾಷ್ಟ್ರದ್ರೋಹದ ಕೆಲಸ. ಇಂಥ ಹೀನ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸಬೇಕು […]