ಪೋಷಕರು ಮೊಬೈಲ್ ನಲ್ಲಿ ಪಬ್ಜಿ ಗೇಮ್ ಆಡಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 9ನೇ ತರಗತಿ‌ ವಿದ್ಯಾರ್ಥಿ  

ಹೈದರಾಬಾದ್: ಪೋಷಕರು ಮೊಬೈಲ್ ನಲ್ಲಿ ಪಬ್ಜಿ ಗೇಮ್ ಆಡಬೇಡ ಎಂದಿದ್ದಕ್ಕೆ 9ನೇ ತರಗತಿ‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ತಿರುಮಲನಗರದಲ್ಲಿ ನಡೆದಿದೆ. ಆನ್ ಲೈನ್ ತರಗತಿ ಹಿನ್ನೆಲೆಯಲ್ಲಿ ಪೋಷಕರು 9ನೇ ತರಗತಿಯ ಮಗನಿಗೆ ಮೊಬೈಲ್ ಕೊಡಿಸಿದ್ದರು. ಆದರೆ ಆತ ದಿನವಿಡೀ ಮೊಬೈಲ್ ನಲ್ಲಿ ಪಬ್ಜಿ ಗೇಮ್ ಆಡುತ್ತಿದ್ದನು. ಇದನ್ನು ಪ್ರಶ್ನಿಸಿ ತಾಯಿ ಬುದ್ಧಿವಾದ ಹೇಳಿದಕ್ಕೆ ಬೇಸರಗೊಂಡ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ 4 ದಿನ ಭಾರೀ ಮಳೆಯಾಗುವ ಮುನ್ಸೂಚನೆ: ಯಲ್ಲೋ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಕುಂದಾಪುರ: ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ನಾಲ್ವರು ಮೀನುಗಾರರು ಸಾವು

ಕುಂದಾಪುರ: ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿ ಬಿದ್ದ ಪರಿಣಾಮ ನಾಲ್ಕು ಮಂದಿ ಮೀನುಗಾರರು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ದೋಣಿಯಲ್ಲಿ ಒಟ್ಟು 9 ಮಂದಿ ಮೀನುಗಾರಿಕೆಗೆ ತೆರಳಿದ್ದು, ದೈತ್ಯ ಸಮುದ್ರದ ಅಲೆಗಳಿಗೆ ಸಿಲುಕಿಕೊಂಡ ದೋಣಿ ಏಕಾಏಕಿಯಾಗಿ ಮಗುಚಿ ಬಿದ್ದಿದೆ. ಇದರ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಉಳಿದವರನ್ನು ರಕ್ಷಣೆ ಮಾಡಲಾಗಿದ್ದು,  ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಉಡುಪಿ: ಇಂದು 237 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 237 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7975ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 106 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 154 ಮಂದಿ ಸಹಿತ 260 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 5361 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2537ಸಕ್ರಿಯ ಕೊರೊನಾ ಸೋಂಕಿತರಿದ್ದು, 1398 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ದೊಡ್ಡೋಣಿ ಕೋಟೇಶ್ವರ ಧ್ವಜಾರೋಹಣ ಹಾಗೂ ಸಸಿ ವಿತರಣಾ ಕಾರ್ಯಕ್ರಮ

ಕೋಟ: ದೊಡ್ಡೋಣಿಯ ಅಂಗನವಾಡಿ ಕೇಂದ್ರದಲ್ಲಿ 74ನೇ ಸ್ವಾತಂತ್ರ್ಯೊತ್ಸವದ ಧ್ವಜಾರೋಹಣ ಹಾಗೂ ಸಸಿ ವಿತರಣಾ ಕಾರ್ಯಕ್ರಮ ನೆರವೇರಿತು ಮುಖ್ಯ ಅತಿಥಿಗಳಾಗಿ ಮಿತ್ರ ಕ್ಲಿನಿಕ್ ಕೋಟೇಶ್ವರದ ರಾಜೇಶ್ ಕುಮಾರ್ ಶೆಟ್ಟಿ, ಸಂಘದ ಗೌರವ ಅಧ್ಯಕ್ಷರಾದ ಉಮೇಶ್ ಎಮ್ ಕುಮಾರ ರಾಘವೇಂದ್ರ ಪೂಜಾರಿ ಅಧ್ಯಕ್ಷರು ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ದೊಡ್ಡೋಣಿ. ಪಂಚಾಯತ್ ಸದಸ್ಯರಾದ ರವೀಂದ್ರ ದೊಡ್ಮನೆ,ಮಾಜಿ ಯೋಧರಾದ ರಾಮಚಂದ್ರ ಗಾಣಿಗ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂಘದ ಪದಾಧಿಕಾರಿಗಳು,ಸದಸ್ಯರು ಹಾಗೂ ಊರ ಗ್ರಾಮಸ್ಥರು ಪಾಲ್ಗೊಂಡಿದ್ದರು.