ಹೆಬ್ರಿ ಬಿಜೆಪಿ ಯುವಮೋರ್ಚಾ ಶಕ್ತಿಕೇಂದ್ರದಿಂದ ವಿದ್ಯಾರ್ಥಿನಿ ಸುಮೇದಾಗೆ ಸನ್ಮಾನ

ಹೆಬ್ರಿ: ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ (621) ಪಡೆದ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿನಿಯಾಗಿ ಗಿಲ್ಲಾಳಿ ಸುಮೇದಾ ಆಚಾರ್ಯ ಅವರಿಗೆ ಬಿಜೆಪಿ ಯುವ ಮೋರ್ಚ ಹೆಬ್ರಿ ಶಕ್ತಿ ಕೇಂದ್ರದಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರಾದ ಗುರುದಾಸ ಶೆಣೈ, ಹೆಬ್ರಿ ತಾಲೂಕು ಪಂಚಾಯತ್ ನ ಅಧ್ಯಕ್ಷರಾದ ರಮೇಶ್ ಪೂಜಾರಿ, ಹೆಬ್ರಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರಾದ ಸುಧಾಕರ್ ಹೆಗ್ಡೆ, ಹೆಬ್ರಿ ಪಂಚಾಯತ್ ಅಧ್ಯಕ್ಷರಾದ ಎಚ್. ಕೆ. ಸುಧಾಕರ್, ಕಾರ್ಕಳ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸುಹಾಸ್ ಶೆಟ್ಟಿ, […]
ಕೊರೊನಾ ವಿಪತ್ತು: ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ: ಗೋಶಾಲೆಗಳಿಗೆ 200 ಕೋಟಿ ರೂ. ಪ್ಯಾಕೇಜ್ ನೀಡಲು ಒತ್ತಾಯ

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರು ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ. ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ ಎಂದು ಶ್ರೀಗಳು ಪತ್ರದಲ್ಲಿ ತಿಳಿಸಿದ್ದಾರೆ. ಗೋಶಾಲೆಗಳ ನಿರ್ವಹಣೆ […]