ಉಡುಪಿ: ಇಂದು 270 ಮಂದಿಗೆ ಕೊರೊನಾ ಪಾಸಿಟಿವ್; ಓರ್ವ ಮಹಿಳೆ ಕೊರೊನಾಗೆ ಬಲಿ
ಉಡುಪಿ: ಜಿಲ್ಲೆಯಲ್ಲಿ ಇಂದು 270 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8245 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 85 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 184 ಮಂದಿ ಸಹಿತ 269 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 5630 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2537 ಸಕ್ರಿಯ ಕೊರೊನಾ ಸೋಂಕಿತರಿದ್ದು, 1372 ಮಂದಿ ಸೋಂಕಿತರು […]
ಕಾರ್ಕಳದಲ್ಲಿ ಕೋವಿಡ್ ಸಹಾಯವಾಣಿ ಆರಂಭ: ಮಾಹಿತಿ ಮತ್ತು ಸಂದೇಹಕ್ಕಾಗಿ ಸಾರ್ವಜನಿಕರು ಕರೆ ಮಾಡಿ
ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಕೋವಿಡ್ ಸಹಾಯವಾಣಿ ದಿನಾಂಕ: ಆ.ರಂದು ಆರಂಭಗೊಂಡಿದ್ದು, ಸಾರ್ವಜನಿಕರು ಕೋವಿಡ್ ಸಂಬಂಧಿತ ಮಾಹಿತಿ/ ವಿಚಾರಣೆಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳು ಮತ್ತು ಇ-ಮೇಲ್ ಗಳನ್ನು ಬಳಸಬಹುದು.ಈ ಕೇಂದ್ರವು 24*7 ಅವಧಿಯ ಸೇವೆಯನ್ನು ಒದಗಿಸುತ್ತದೆ. ಸಾರ್ವಜನಿಕರು ಈ ದೂರವಾಣಿಗೆ ಕರೆ ಮಾಡಬಹುದು. ದೂರವಾಣಿ:7676227624, 7411323408 ಇ-ಮೇಲ್ –[email protected]
ಬ್ಯಾಂಕ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ತರಬೇತಿ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು 90 ಸಾವಿರ ಅಧಿಕಾರಿ ಮತ್ತು ಗುಮಾಸ್ತ ಹುದ್ದೆಗಳಿಗೆ ನೇಮಕ ಮಾಡಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನದ ತರಬೇತಿಯನ್ನು ಆನ್‌ಲೈನ್‌ನಲ್ಲಿ ಆಯೋಜಿಸಲಾಗಿದೆ. ಆಸಕ್ತರು ಆಗಸ್ಟ್ 25 ರೊಳಗೆ ಬೆಳ್ಳಿಗೆ 10 ಗಂಟೆಯಿAದ ಸಂಜೆ 4 ವರೆಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ
ಉಡುಪಿ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮಣಿಪಾಲದಲ್ಲಿ ಪ್ರಸ್ತುತ ಸಾಲಿನ ಐ.ಟಿ.ಐ ಪ್ರವೇಶಾತಿಗೆ ಸರಕಾರಿ ಕೈಗಾರಿಕಾ ಸಂಸ್ಥೆಯಿAದ 2020 ರ ಸಾಲಿನ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್‌ಸೈಟ್ www.emptrg.kar.nic.in ಮೂಲಕ ಆಗಸ್ಟ್ 17ರಿಂದ 31ರವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ.ಕೈ.ತ.ಸಂಸ್ಥೆ, ಪ್ರಗತಿನಗರ ಮಣಿಪಾಲ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 9448409355& 9740541554 ಗೆ ಸಂಪರ್ಕಿಸಲು ಸರಕಾರಿ ಕೈಗಾರಿಕಾ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕೋವಿಡ್ -19 ಜಾಗೃತಿಯ ಅಭಿಯಾನಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
ಉಡುಪಿ: ಸೇಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಉಡುಪಿ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ -19 ಜಾಗೃತಿಯ ಅಭಿಯಾನ ವಾಹನಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ, ಶಾಖೆಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಭಂಡಾರಿ, ಉಡುಪಿ ಶಾಖೆಯ ವ್ಯವಸ್ಥಾಪಕ ಜೀವನ್ ಡಿಸೋಜ, ಕಲ್ಯಾಣಪುರ ಶಾಖಾ ವ್ಯವಸ್ಥಾಪಕ ರೋಹಿತ್ ರೊಡ್ರಿಗಸ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.