ಬೆಂಗಳೂರಿನಲ್ಲಿ‌ ಶಂಕಿತ ಐಸಿಸ್ ಉಗ್ರನ ಬಂಧನ: ಖಾಸಗಿ ಆಸ್ಪತ್ರೆಯ ನೇತ್ರ ತಜ್ಞ ಬಂಧಿತ..!

ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುರ್ ರೆಹಮಾನ್ ಬಂಧಿತ. ಈತ ಬೆಂಗಳೂರಿನ ನಿವಾಸಿಯಾಗಿದ್ದು, ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್‍ಐಎ ವಶಪಡಿಸಿಕೊಂಡಿದೆ. ಸ್ಪೋಟಕ ಮಾಹಿತಿ ಲಭ್ಯ: ಬಂಧಿತ ಅಬ್ದುರ್ ರೆಹಮಾನ್ ವಿಚಾರಣೆ ವೇಳೆ ಹಲವು ವಿಷಯಳನ್ನು ಬಾಯಿ ಬಿಟ್ಟಿದ್ದಾನೆ.‌ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದು, ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ […]

ಕುದುರೆಮುಖ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯನ್ನು ರಾಷ್ಟ್ರೀಯ ಉದ್ಯಾನವನದ ಹೊರಗೆ ಕನಿಷ್ಠ ಪ್ರದೇಶಕ್ಕೆ ಮಿತಿಗೊಳಿಸಿ ನಿರ್ವಹಣೆ

ಕಾರ್ಕಳ:ಕುದುರೆಮುಖ ಪರಿಸರ ಸೂಕ್ಷ್ಮ ವಲಯದ ಗಡಿಯನ್ನು ಹಿಂದಿನ ಕರಡು ಹಂತದ 10 ಕಿ.ಮೀ. ರೇಖೆಯ ಬದಲಾಗಿ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ಕೇವಲ 1 ಕಿ.ಮೀ ಮಾಡಲಾಗಿರುತ್ತದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪಸಂರಕ್ಷಣಾಧಿಕಾರಿ ಕಾರ್ಕಳ ಇವರು ತಿಳಿಸಿದ್ದಾರೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸುತ್ತಾ ಪರಿಸರ ಸೂಕ್ಷ್ಮ ವಲಯವನ್ನು ಪರಿಸರ ಸಂರಕ್ಷಣಾ ಕಾಯ್ದೆ 1986 ರ ಸೆಕ್ಷನ್ 3 ರಂತೆ ಭಾರತ ಸರ್ಕಾರದ ಅರಣ್ಯ ಪರಿಸರ ಸಚಿವಾಲಯವು ಜುಲೈ 2 ರಂದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಪರಿಸರ ಸೂಕ್ಷ್ಮ […]

ಕಾರ್ಕಳ ತಾಲೂಕು ಆಸ್ಪತ್ರೆಯ ಹೊರಗುತ್ತಿಗೆ ನೌಕರರಿಗೆ ಮೂರು ತಿಂಗಳಿಂದ ಸಂಬಳ ಇಲ್ಲ: ನೌಕರರಿಂದ ಕರ್ತವ್ಯ ಮೊಟಕು

ಕಾರ್ಕಳ: ತಾಲೂಕು ಆಸ್ಪತ್ರೆಯ ಲ್ಲಿ ಹೊರಗುತ್ತಿಗೆ ನೌಕರರಿಗೆ ದುಡಿಯುತ್ತಿರುವ ಡಿ ಗುಂಪಿನ ಕಾರ್ಮಿಕರಿಗೆ ಕಳೆದ ಮೂರು ತಿಂಗಳುಗಳಿಂದ ಮಾಸಿಕ ವೇತನ ಪಾವತಿಯಾಗದೆ ವಿರುವುದರಿಂದ ಕರ್ತವ್ಯವನ್ನು ಮೊಟಕುಗೊಳಿಸಿದ್ದಾರೆ. ಇದೆ ಆಸ್ಪತ್ರೆ ಯಲ್ಲಿ ಹತ್ತು ಮಂದಿ ಕಾರ್ಮಿಕರು ಉಡುಪಿ ಯ ಗುತ್ತಿಗೆದಾರರೊಬ್ಬರ ಸಂಸ್ಥೆ ಯಲ್ಲಿ ಡಿ ಗ್ರುಪ್ ನೌಕರರಾಗಿ ಕಳೆದ ಕೆಲವು ವರ್ಷ ಗಳಿಂದ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ. 2020 ಮೇ ಜೂನ್‌ ಜುಲೈ ತಿಂಗಳುಗಳ ವೇತನವು ಇವರ ಖಾತೆಗೆ ಇನ್ನೂ ಕೂಡ ಜಮೆಯಾಗಿಲ್ಲ. ಪರಿಣಾಮವಾಗಿ ಈ ಕಾರ್ಮಿಕ ಕುಟುಂಬಗಳು […]

ಉಡುಪಿ: ಇಂದು 421 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 421 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8666 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 177 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 144 ಮಂದಿ ಸಹಿತ 321 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 5951 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2637 ಸಕ್ರಿಯ ಕೊರೊನಾ ಸೋಂಕಿತರಿದ್ದು, 1321 ಮಂದಿ ಸೋಂಕಿತರು […]

ಬೆಂಗಳೂರಿನ ಡಿ.ಜೆ. ಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಕೈವಾಡವಿದೆ: ಮಾಜಿ ಸಚಿವ ರೋಷನ್ ಬೇಗ್ ಆರೋಪ

ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್ ಕೈವಾಡ ಇದೆ ಎಂದು ಮಾಜಿ ಸಚಿವ ರೋಷನ್ ಬೇಗ್ ಆರೋಪಿಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಗಲಭೆಯಲ್ಲಿ ಕೆಲವರು ಅಮಾಯಕರು ಇರಬಹುದು. ಅವರನ್ನು ಬಿಡಿ ಎಂದು ನಾನೇ ಹೇಳಿದ್ದೇನೆ. ಆದರೆ, ಗೋರಿಪಾಳ್ಯದಿಂದ ಮೌಲಾನಾಗಳು ಯಾಕೆ ಇಲ್ಲಿಗೆ ಬರಬೇಕಿತ್ತು. ಟಿಪ್ಪು ನಗರದಿಂದ ಡಿ.ಜೆ ಹಳ್ಳಿಗೆ ಯಾಕೆ ಬರಬೇಕಿತ್ತು ಎಂದು ಅವರು ಪ್ರಶ್ನಿಸಿದ್ದಾರೆ. ಜಮೀರ್ ಬಗ್ಗೆ […]