ಉಡುಪಿ: ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ವಿರೋಧಿಸಿ ಜೆಡಿಎಸ್ ನಿಂದ ಪ್ರತಿಭಟನೆ
ಉಡುಪಿ: ರಾಜ್ಯ ಸರ್ಕಾರವು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ಸುಗ್ರೀವಾಜ್ಞೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಜನರಿಗೆ ಮಾರಕವಾಗಲಿದೆ. ರೈತರು ತಮ್ಮ ಭೂಮಿಯ ಹಕ್ಕು ಕಳೆದುಕೊಂಡರೆ, ಕಾರ್ಮಿಕರು ತಮ್ಮ ಕಾರ್ಮಿಕ ಹಕ್ಕುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ […]
ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಗೆ ಅಗ್ರಮಾನ್ಯ ಶ್ರೇಯಾಂಕ: 2020-21ನೇ ಸಾಲಿನ ದಾಖಲಾತಿ ಆರಂಭ
ಬ್ರಹ್ಮಾವರ: ಗ್ರಾಮೀಣ ಪ್ರದೇಶದ ಯುವಕರಿಗೆ ಕೌಶಲ್ಯಾಧಾರಿತ ವೃತ್ತಿ ತರಬೇತಿಯನ್ನು ನೀಡುತ್ತಿರುವ ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಗೆ ಜಿಲ್ಲೆಯಲ್ಲೇ ಅಗ್ರಮಾನ್ಯ ಗ್ರೇಡಿಂಗ್ ಲಭಿಸಿದೆ. ಕೇಂದ್ರ ಸರ್ಕಾರದ ಡಿಜಿಟಿ ಇಲಾಖೆಯಿಂದ ನಡೆಸಿದ 2019-20ರ ಗ್ರೇಡಿಂಗ್ ಪರಿವೀಕ್ಷಣೆಯಲ್ಲಿ ಸಂಸ್ಥೆಯು ಉಡುಪಿ ಜಿಲ್ಲೆಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಅಧೀನದಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಮಟ್ಟದ ಕೌಶಲ ತರಬೇತಿಯನ್ನು ರಾಜ್ಯ ಸರಕಾರದ ಕೌಶಲ ತರಬೇತಿ ಮತ್ತು ಉದ್ಯೋಗ ಇಲಾಖೆಯ ಅಧೀನದಲ್ಲಿ ಕಾರ್ಯ […]
ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ: ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಷರತ್ತು ಬದ್ಧ ಅನುಮತಿ ನೀಡಿದೆ. ಆಚರಣೆಗೆ ಸಂಬಂಧಿಸಿ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮಾರ್ಗಸೂಚಿಯ ವಿವರ: ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಜನರ ಕೂಡುವಿಕೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸುವವರು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಬೇಕು. […]
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ: ಇಂದು ಜೆಡಿಎಸ್ ನಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ
ಉಡುಪಿ: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಮೂಲಕ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಇಂದು (ಆಗಸ್ಟ್ 18) ಬೆಳಿಗ್ಗೆ 11.15ಕ್ಕೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.