ದ್ವಿತೀಯ ಪಿಯು ಪೂರಕ ಪರೀಕ್ಷೆಯ ವೇಳಾಪಟ್ಟಿ ಬದಲು: ಪರಿಷ್ಕೃತ ವೇಳಾಪಟ್ಟಿಯಂತೆ ಸೆ. 7ರಿಂದ 19ರ ವರೆಗೆ ಪರೀಕ್ಷೆ
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಬದಲಾಗಿದೆ. ಸೆಪ್ಟಂಬರ್ 7 ರಿಂದ 18ರ ವರೆಗೆ ನಿಗದಿಯಾಗಿದ್ದ ಪರೀಕ್ಷೆಯ ವೇಳಾಪಟ್ಟಿ ತಾಂತ್ರಿಕ ಕಾರಣದಿಂದ ಬದಲಾಗಿದ್ದು, ನೂತನ ವೇಳಾಪಟ್ಟಿಯ ಪ್ರಕಾರ ಸೆಪ್ಟಂಬರ್ 07ರಿಂದ 19ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಎಂ. ಕನಗವಲ್ಲಿ ಮಾಹಿತಿ ನೀಡಿದ್ದಾರೆ. ಪರಿಷ್ಕೃತ ವೇಳಾಪಟ್ಟಿ ವಿವರ ಈ ಕೆಳಗಿನಂತಿದೆ: ಬೆಳಿಗ್ಗೆಯ ಪರೀಕ್ಷೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಹಾಗೂ ಮಧ್ಯಾಹ್ನದ ಪರೀಕ್ಷೆ 2.15ರಿಂದ ಸಂಜೆ 5.30ರ ವರೆಗೆ […]
ಆಗಸ್ಟ್ 21ರಂದು ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು: ಸಿಇಟಿ ಪರೀಕ್ಷೆಯ ಫಲಿತಾಂಶ ನಾಳೆಯ (ಆ.20) ಬದಲಾಗಿ ಆಗಸ್ಟ್ 21ರಂದು ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ನಾಳೆ ಪ್ರಕಟಗೊಳ್ಳಬೇಕಿದ್ದ ಸಿಇಟಿ ಫಲಿತಾಂಶವನ್ನು ತಾಂತ್ರಿಕ ಕಾರಣದಿಂದ ಒಂದು ದಿನ ಮುಂದೂಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಹೆಬ್ರಿಯ ವ್ಯಕ್ತಿಯ ಬಂಧನ
ಮಂಗಳೂರು: ಮಂಗಳೂರಿನ ಬಜ್ಪೆ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ವಿಮಾನ ನಿಲ್ದಾಣದ ಹಿಂದಿನ ನಿರ್ದೇಶಕರಾಗಿದ್ದ ವಾಸುದೇವ್ ರಾವ್ ಅವರ ಮೊಬೈಲ್ಗೆ ವ್ಯಕ್ತಿಯೊಬ್ಬ ಕರೆ ಮಾಡಿ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದನು. ತಕ್ಷಣವೇ ಅವರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿದೆ. ವಿಮಾನ ನಿಲ್ದಾಣಕ್ಕೆ ಯಾವುದೇ ನೇರ ಬೆದರಿಕೆ ಕರೆ ಬಂದಿಲ್ಲ.ಆದರೆ ಮಾಜಿ ನಿರ್ದೇಶಕರ […]
ದ.ಕ. ಜಿಲ್ಲೆ: ಇಂದು 234 ಮಂದಿಗೆ ಕೊರೊನಾ ಪಾಸಿಟಿವ್: 4 ಮಂದಿ ಬಲಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 234 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 4 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಕೊರೊನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 290ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳ ಪೈಕಿ ILI ಪ್ರಕರಣದಿಂದ 104, ಸಂಪರ್ಕವೇ ಪತ್ತೆಯಾಗದ 76, ಪ್ರಾಥಮಿಕ ಸಂಪರ್ಕದಿಂದ 35, SARI ಪ್ರಕರಣದಿಂದ 18, ಹೊರ ರಾಜ್ಯದಿಂದ ಬಂದ ಓರ್ವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇಂದು ಜಿಲ್ಲೆಯಲ್ಲಿ 115 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 9,535 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಒಟ್ಟು […]
ಉಡುಪಿ: ಇಂದು 375 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇಂದು 375 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9041 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 111 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 70 ಮಂದಿ ಸಹಿತ 181 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ 6132 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2831 ಸಕ್ರಿಯ ಕೊರೊನಾ ಸೋಂಕಿತರಿದ್ದು, 1303 ಮಂದಿ ಸೋಂಕಿತರು […]