ಮನೆಯಲ್ಲೇ ಅರಿಶಿನ ಗಣೇಶ ತಯಾರಿಸಿದ ಬೆಳ್ತಂಗಡಿ ಎಸ್ ಡಿಎಂನ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ “ಶ್ರೀ ಮಂಜುನಾಥ” ದಳದ ಸ್ಕೌಟ್ ಗೈಡ್ ವಿದ್ಯಾರ್ಥಿಗಳಾದ ಮಾಸ್ಟರ್ ಚಿನ್ಮಯಿ, ನಿಧಿ ಸಾಲಿಯಾನ್, ಆಷಿತ್ ಕಾಮತ್ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಆದೇಶದಂತೆ ಕರ್ನಾಟಕ ರಾಜ್ಯ ಮಾಲ್ಯಿನ್ಯ ನಿಯಂತ್ರಣ ಮಂಡಳಿಯ ಅರಿಶಿನ ಗಣೇಶ ಅಭಿಯಾನದಲ್ಲಿ ಭಾಗವಹಿಸಿ ಮನೆಯಲ್ಲಿ ಅರಿಶಿನ ಗಣೇಶ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು ಮನೆಯಲ್ಲೇ ಇದ್ದು ರಾಜ್ಯ […]

ತಾರಾನಾಥ್ ಮೇಸ್ತ ಅವರ ‘ಅವಧೂತ ಲೀಲಾಮೃತ’ ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀಜಿ ಕೃತಿ ಲೋಕಾರ್ಪಣೆ

ಬ್ರಹ್ಮಾವರ: ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಬ್ರಹ್ಮಾವರದ ಅಪ್ಪ ಅಮ್ಮ ಅನಾಥಾಲಯದ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಸರಳಾ ಕಾರ್ಯಕ್ರಮದಲ್ಲಿ ತಾರಾನಾಥ್ ಮೇಸ್ತ ಶಿರೂರು ಅವರ “ಅವಧೂತ ಲೀಲಾಮೃತ” ಶ್ರೀಸದ್ಗುರು ನಿತ್ಯಾನಂದ ಸ್ವಾಮೀಜಿ ಕೃತಿ ಲೋಕಾರ್ಪಣೆಗೊಂಡಿತು. ಸಮಾಜಸೇವಕ ನಿತ್ಯಾನಂದ ಒಳಕಾಡು ಕೃತಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿ, ನಿತ್ಯಾನಂದ ಸ್ವಾಮೀಜಿಗಳ ಕುರಿತ ಅವಧೂತ ಲೀಲಾಮೃತ ಕೃತಿ ಎಲ್ಲರೂ ಓದಲೇಬೇಕಾದ ಅಮೂಲ್ಯ ಆಧ್ಯಾತ್ಮಿಕ ಗ್ರಂಥ. ಕಳೆದ ಅರವತ್ತು ವರ್ಷಗಳ ಹಿಂದೆ ಬಹಳಷ್ಟು ಕರಾವಳಿಗರು ಬದುಕು ಕಟ್ಟಿಕೊಳ್ಳಲು ಮುಂಬೈಗೆ ತೆರಳಿದ್ದರು. ಅಲ್ಲಿ […]

ದಕ್ಷಿಣ ಕನ್ನಡದಲ್ಲಿ ಇಂದು 187 ಮಂದಿ ಕೊರೊನಾದಿಂದ ಗುಣಮುಖ: 176 ಕೊರೊನಾ ಪಾಸಿಟಿವ್, ಆರು ಮಂದಿ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಪಾಸಿಟಿವ್ ಪ್ರಕರಣಗಳಿಗಿಂತ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. 187 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7120 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಂದು 177 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ 9707ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 2291 ಸಕ್ರಿಯ ಕೊರೊನಾ ಪ್ರಕರಣಗಳಿವೆ. *ಆರು ಮಂದಿ ಕೊರೊನಾಗೆ ಬಲಿ* ಜಿಲ್ಲೆಯಲ್ಲಿ ಇಂದು ಆರು ಮಂದಿ ಕೊರೊನಾದಿಂದ ಮೃತಪಟ್ಟಿದ್ದು, […]

ಉಡುಪಿಯಲ್ಲಿ ಇಂದು 360 ಮಂದಿ ಕೊರೊನಾದಿಂದ ಗುಣಮುಖ: ಇಬ್ಬರು ಮಹಿಳೆಯರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 184 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 176 ಮಂದಿ ಸಹಿತ 360 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 6492 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಇಂದು 349 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9390 ಕ್ಕೆ ಏರಿಕೆಯಾಗಿದೆ. […]

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಭೂ ಸುಧಾರಣೆ ಕಾಯ್ದೆ, ಕಾರ್ಮಿಕರ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ರಾಜ್ಯ ಬಿಜೆಪಿ ಸರ್ಕಾರ‌ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ‘ಜನಧ್ವನಿ ಅಭಿಯಾನ’ದ ಮೂಲಕ ಇಂದು ಕಾಂಗ್ರೆಸ್ ಕಾರ್ಯಕರ್ತರು ಉಡುಪಿ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರವು ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ಗೊಳಿಸಿದೆ. ಆ ಮೂಲಕ ರೈತರು ಹಾಗೂ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವ ಕೆಲಸ […]