ಸೆಪ್ಟೆಂಬರ್ 21ರಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ಸೆಪ್ಟೆಂಬರ್ 21ರಿಂದ 30ರ ವರೆಗೆ ಮಳೆಗಾಲದ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಸಚಿವ ಸಂಪುಟ ಬಳಿಕ ಮಾತನಾಡಿದ ಅವರು, ಅಧಿವೇಶ ಎಲ್ಲಿ ನಡೆಸಬೇಕೆಂಬ ನಿರ್ಧಾರ ಆಗಿಲ್ಲ. ಸ್ವೀಕರ್ ಜತೆಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ಅಧಿವೇಶನವನ್ನು ಎರಡು ದಿನ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದೇಶದಾದ್ಯಂತ ವಿಧ್ವಂಸಕ ಕೃತ್ಯ ನಡೆಸಲು ಉಗ್ರರ ಸಂಚು: ಬಂಧಿತ ಶಂಕಿತ ಉಗ್ರ ಅಬ್ದುರ್ ರೆಹಮಾನ್ ನಿಂದ ಸ್ಫೋಟಕ ಸಂಗತಿ ಬಹಿರಂಗ

ಬೆಂಗಳೂರು: ದೇಶದಾದ್ಯಂತ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಸಂಗತಿ ಈಗ ಬಂಧಿತ ಶಂಕಿತ ಉಗ್ರ ಅಬ್ದುರ್ ರೆಹಮಾನ್ ನಿಂದ ಹೊರಬಿದ್ದಿದೆ. ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎಂಬ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ಶಾಸ್ತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ರೆಹಮಾನ್ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದರು. ಇದೀಗ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಭಯಾನಕ ಸಂಗತಿಗಳು ಬೆಳಕಿಗೆ ಬಂದಿದೆ. ದೇಶದಾದ್ಯಂತ ವಿಧ್ವಂಸಕ […]
ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳಿಗೆ ನಿಷೇಧದ ತೂಗುಗತ್ತಿ: ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ‘ಡಿ.ಜೆ.ಹಳ್ಳಿ ಗಲಭೆ ಸೇರಿದಂತೆ ಹಲವು ಗಲಭೆಗಳು ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿವೆ ಎಂಬ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕೆಂಬ ವಿಷಯ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲುದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಎಸ್‌ಡಿಪಿಐ ಕೆಲವು ಪ್ರಮುಖರನ್ನು ಬಂಧಿಸಲಾಗಿದೆ. ಈ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಚಿವರು, ಬಿಜೆಪಿ ಶಾಸಕರು ಹಾಗೂ ಹಿಂದೂ ಸಂಘಟನೆಗಳು ಒತ್ತಡ ಹಾಕಿವೆ. ಆದರೆ, ಸಚಿವ ಸಂಪುಟ ಸಭೆಯ […]
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ: ಪ್ರಧಾನಿ ಮೋದಿ ಅವರಿಂದ ಗೌರವ ಸಲ್ಲಿಕೆ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 76ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಗೌರವ ಸಲ್ಲಿಸಿದರು. ಜನ್ಮ ದಿನಾಚರಣೆಯಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಗೌರವ ಸಲ್ಲಿಸಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ತಂದೆಗೆ ಜನ್ಮದಿನಾಚರಣೆಯ ಗೌರವ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜೀವ್ ಗಾಂಧಿ ಅವರು ಕಾಲಕ್ಕಿಂತ ಬಹಳ ಮುಂದಿರುವ ಪ್ರಚಂಡ ದೃಷ್ಟಿ ಹೊಂದಿದ್ದ ವ್ಯಕ್ತಿ. ಆದರೆ […]
ಮೈಸೂರು: ಕಾಡುಗಳ್ಳ ವೀರಪ್ಪನ್ ಸಹಚರ ಬಿಲ್ವೇಂದ್ರನ್ ಸಾವು

ಮೈಸೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲ್ವೇಂದ್ರನ್ (70) ಕೆ.ಆರ್. ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಸಾವನ್ನಾಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತ ಕಳೆದ 25 ವರ್ಷಗಳಿಂದ ಮೈಸೂರಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಹತ್ತು ದಿನಗಳ ಹಿಂದೆ ಜೈಲಿನಲ್ಲಿ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದ ಈತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22 ಮಂದಿ ಸಾವಿಗೆ […]