ಉಡುಪಿ ಜಿಲ್ಲೆಯ ವಿವಿದೆಡೆ ಕಣ್ಮನ ಸೆಳೆದ ಗಣೇಶನ ಚಿತ್ರಗಳು ಇಲ್ಲಿದೆ

ಉಡುಪಿ:ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ಸರಳ ಮತ್ತು ಸುಂದರವಾಗಿ ನಡೆಯಿತು. ಸಾರ್ವಜನಿಕ ಗಣೇಶೋತ್ಸವ ಸಮಾರಂಭಗಳಲ್ಲಿ ಕೋವಿಡ್ ಕಾರಣದಿಂದ ಗೌಜಿ ಗದ್ದಲಗಳು ಕಡಿಮೆಯಿದ್ದರೂ ಗಣೇಶನ ಚೆಂದದ ವಿಗ್ರಹಗಳು ಭಕ್ತರನ್ನು ಸೆಳೆದವು. ಆ ವಿಗ್ರಹಗಳ ಚಿತ್ರಗಳು ಇಲ್ಲಿವೆ ನೋಡಿ. 1.ವಿಘ್ನನಿವಾರಕ ಶ್ರೀ ಗಣೇಶ ಹಿರ್ಗಾನ ಕಾರ್ಕಳ. 2. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಈದು ಇವರ ವತಿಯಿಂದ ಶ್ರೀ ಮೂಜಿಲ್ನಾಯ ದೈವಸ್ಥಾನ ಈದು   8. ಸಾರ್ವಜನಿಕ ಗಣೇಶೋತ್ಸವ ಸಮಿತಿ ಗುಡ್ಡೆಅಂಗಡಿ ಇದರ ವತಿಯಿಂದ ಅಲೆವೂರು ಗುಡ್ಡೆಅಂಗಡಿಯ ಗಣೇಶ ಮಂದಿರದಲ್ಲಿ ಪ್ರತಿಷ್ಠಾಪಿಸಿದ […]

ದಕ್ಷಿಣ ಕನ್ನಡದಲ್ಲಿ ಇಂದು 320 ಮಂದಿ ಕೊರೊನಾದಿಂದ ಗುಣಮುಖ: ನಾಲ್ವರು ಕೊರೊನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 320 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7504 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಇಂದು 228 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10137ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 2328 ಸಕ್ರಿಯ ಕೊರೊನಾ ಪ್ರಕರಣಗಳಿವೆ. ನಾಲ್ವರು ಕೊರೊನಾಗೆ ಬಲಿ: ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾದಿಂದ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 303ಕ್ಕೆ ಏರಿಕೆಯಾಗಿದೆ […]

ಉಡುಪಿಯಲ್ಲಿ ಹತ್ತು ಸಾವಿರದ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ಇಂದು 348 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 348 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10016 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 51 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 184 ಮಂದಿ ಸಹಿತ 235 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7092 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2842 ಸಕ್ರಿಯ ಕೊರೊನಾ ಸೋಂಕಿತರಿದ್ದು, 1175 […]

ಉಡುಪಿ ಬಿಜೆಪಿ ಮುಖಂಡನ ಪತ್ನಿಯ ಸಾವು ಪ್ರಕರಣ: ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಪ್ರತಿಭಟನೆ

ಉಡುಪಿ: ಉಡುಪಿ ಇಂದಿರಾ ನಗರದ ನಿವಾಸಿ, ಬಿಜೆಪಿ ಯುವ ಮೋರ್ಚಾದ ಉಡುಪಿ ನಗರ ಉಪಾಧ್ಯಕ್ಷ ಶಿವಪ್ರಸಾದ್ ಅವರ ಪತ್ನಿ ರಕ್ಷಾ (26) ಎಂಬುವವರು ಶುಕ್ರವಾರ ಮೃತಪಟ್ಟಿದ್ದು, ಅವರ ಸಾವಿಗೆ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಉಡುಪಿ ಜಿಲ್ಲಾಸ್ಪತ್ರೆಯ ಶವಗಾರದ ಮುಂದೆ ಇಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು. ಮೃತ ರಕ್ಷಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆದರೆ ಕುಟುಂಬಸ್ಥರು ಪಾಸಿಟಿವ್ ವರದಿ ಬಂದಿದ್ದರೂ ಮೃತ […]

ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಬಗ್ಗೆ ಬಹಿರಂಗ ಹೇಳಿಕೆ ನೀಡಬೇಡಿ: ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಹಾಗೂ ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ಯಾರು ಬಹಿರಂಗ ಹೇಳಿಕೆ ನೀಡಬಾರದು ಎಂದು ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಯಾರಿಗೆ ಯಾವ ಹುದ್ದೆ ನೀಡಬೇಕು ಎಂದು ಗೊತ್ತಿದೆ. ಹಾಗಾಗಿ ಸಚಿವ ಸಂಪುಟ ಸೇರ್ಪಡೆ ಸಂಬಂಧ ಯಾರು ದೆಹಲಿಗೆ ಬರಬಾರದು ಎಂದು ಎಚ್ಚರಿಕೆ ನೀಡಿದೆ.