ನವಿಲುಗಳಿಗೆ ಆಹಾರ ನೀಡಿದ ಪ್ರಧಾನಿ ಮೋದಿ: ಭಾರೀ ವೈರಲ್ ಆದ ವೀಡಿಯೋ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ನವಿಲುಗಳಿಗೆ ಆಹಾರ ನೀಡಿದ ವಿಡಿಯೋವೊಂದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ. ಭಾನುವಾರ ಬೆಳಗ್ಗೆ ಪ್ರಧಾನಿ ಮೋದಿ ಅವರು ಎಂದಿನಂತೆ ವ್ಯಾಯಾಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ವಿಡಿಯೋವನ್ನು ಚಿತ್ರಿಕರಿಸಲಾಗಿದೆ. ಪ್ರಧಾನಿ ಮೋದಿ ನಿವಾಸದಲ್ಲಿ ವಿವಿಧ ಪಕ್ಷಿಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದಲ್ಲದೇ ಅಪಾರ ಜನಮೆಚ್ಚುಗೆ ಪಡೆದಿದೆ. ಸಮಾಜಿಕ ಜಾಲಾತಾಣದಲ್ಲಿ ನವಿಲುಗಳಿಗೆ ಆಹಾರ ನೀಡುವ ವಿಡಿಯೋ ಪೋಸ್ಟ್ ಮಾಡಲಾಗಿದ್ದು ‘ಅಮೂಲ್ಯ ಕ್ಷಣಗಳು’ […]
ಜಿಲ್ಲಾ ಮಲೆಕುಡಿಯ ಸಂಘ: ಈದು ಗ್ರಾಮ ಸಮಿತಿ ಅಧ್ಯಕ್ಷರಾಗಿ ಸದಾನಂದ ಗೌಡ ಕೇರ, ಪ್ರ. ಕಾರ್ಯದರ್ಶಿಯಾಗಿ ಸಂತೋಷ್ ಗೌಡ
ಕಾರ್ಕಳ: ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಗ್ರಾಮ ಸಮಿತಿ ಈದು ಇದರ ಮಾಸಿಕ ಸಭೆಯು ಆ. 23ರಂದು ಈದು ಮಲ್ಲಂಜ ಅಂಗನವಾಡಿ ಕೇಂದ್ರದ ವಠಾರದಲ್ಲಿ ಜರಗಿತು. ಮಲೆಕುಡಿಯ ಸಂಘ ಕಾರ್ಕಳ ತಾಲೂಕು ಸಮಿತಿಯ ಅಧ್ಯಕ್ಷ ಪ್ರಶಾಂತ್ ಹೆರ್ಮುಂಡೆ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಸಮಿತಿಯನ್ನು ಪುನಾರಚಿಸಲಾಯಿತು. ಅಧ್ಯಕ್ಷರಾಗಿ ಸದಾನಂದ ಗೌಡ ಕೇರ, ಉಪಾಧ್ಯಕ್ಷರಾಗಿ ಜಾನಕಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಗೌಡ ತಾರೆದಿಡ್ಡು, ಸಹ ಕಾರ್ಯದರ್ಶಿಯಾಗಿ ಲೀಲಾವತಿ ಬಾರೆ, ಕೋಶಾಧಿಕಾರಿಯಾಗಿ ಕುಮಾರಿ ವಿಜಯ ಮಠದಮನೆ, ಸಂಘಟನಾ ಕಾರ್ಯದರ್ಶಿಗಳಾಗಿ ಸುಕೇಶ್ ಗೌಡ […]
ದಕ್ಷಿಣ ಕನ್ನಡದಲ್ಲಿ ಇಂದು 164 ಮಂದಿ ಕೊರೊನಾದಿಂದ ಗುಣಮುಖ: ಐವರು ಕೊರೊನಾಗೆ ಬಲಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 164 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7668 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಇಂದು 193 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10330ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 2352 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಐವರು ಕೊರೊನಾಗೆ ಬಲಿ: ಜಿಲ್ಲೆಯಲ್ಲಿ ಇಂದು ಐವರು ಕೊರೊನಾದಿಂದ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ […]
ಗಾಂಧಿ ಪರಿವಾರದ ಹೊರಗಿನವರಿಗೆ ಕಾಂಗ್ರೆಸ್ ನಾಯಕತ್ವ: ನಾಳೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ ಸಾಧ್ಯತೆ
ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ನಾಯಕತ್ವ ಬದಲಾವಣೆಯ ಕೂಗು ಜೋರಾಗಿ ಕೇಳಿಬರುತ್ತಿದೆ. ಈ ನಡುವೆ ಕಾಂಗ್ರೆಸ್‌ನ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪಕ್ಷದ 23 ನಾಯಕರು ಪತ್ರ ಬರೆದು ನಾಯಕತ್ವದ ಬಿಕ್ಕಟ್ಟು ಹಾಗೂ ಆಂತರಿಕ ಚುನಾವಣೆಗೆ ಆಗ್ರಹಿಸಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಮನೀಶ್ ತಿವಾರಿ, ಮಿಲಿಂದ್ ದೇವ್ರಾ, ಜಿತಿನ್ ಪ್ರಸಾದ್ ಸೇರಿದಂತೆ 23 ನಾಯಕರು ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆಗೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತಂತೆ […]
ರಕ್ಷಾ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥ ಆಸ್ಪತ್ರೆಯ ವಿರುದ್ಧ ಕ್ರಮ ಜರುಗಿಸಿ: ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಆಗ್ರಹ
ಉಡುಪಿ: ರಕ್ಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥ ಖಾಸಗಿ ಆಸ್ಪತ್ರೆಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಮೃತ ರಕ್ಷಾ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಒತ್ತಾಯಿಸಿದ್ದಾರೆ. ಖಾಸಗಿ ಆಸ್ಪತ್ರೆಗಳು ತಮ್ಮ ವೈಫಲ್ಯತೆಯನ್ನು ಮುಚ್ಚಿಹಾಕಲು ಕೊರೊನಾ ಹೆಸರಿನಲ್ಲಿ ಜನರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಮೃತದೇಹಗಳನ್ನು ಹಸ್ತಾಂತರ ಮಾಡುವಾಗಲೂ ಎಡವಟ್ಟುಗಳನ್ನು ಮಾಡುತ್ತಿದೆ. ಖಾಸಗಿ ಆಸ್ಪತ್ರೆಗಳು ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಇದರ ಪರಿಣಾಮವನ್ನು ಎದುರಿಸಬೇಕಾಗಬಹುದು […]