ಸೆ. 1ರಿಂದ ಪದವಿ ಕಾಲೇಜುಗಳ ಆನ್ ಲೈನ್ ತರಗತಿ ಆರಂಭ

ಬೆಂಗಳೂರು: ಯುಜಿಸಿ ಸೂಚನೆಯ ಮೇರೆಗೆ ಸೆಪ್ಟೆಂಬರ್ 1ರಿಂದ ಪದವಿ ಕಾಲೇಜುಗಳ ಆನ್ ಲೈನ್ ತರಗತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 1 ರಿಂದ ಕೊರೊನಾ ಮುಂಜಾಗೃತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳ ರೆಗ್ಯುಲರ್ ತರಗತಿಗಳು ಆರಂಭವಾಗಲಿದೆ ಎಂದು ತಿಳಿಸಿದೆ.

ತಲಕಾವೇರಿ ಗುಡ್ಡ ಕುಸಿತ ದುರಂತ: ಅರ್ಚಕ ನಾರಾಯಣ್ ಆಚಾರ್ಯ ಮಕ್ಕಳಿಗೆ ಪರಿಹಾರದ ಹಣ ಪಡೆಯಲು ಮತಾಂತರ ಅಡ್ಡಿ

ಮಡಿಕೇರಿ: ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ್ ಆಚಾರ್ಯ ಮಕ್ಕಳಿಬ್ಬರಿಗೆ ಇದೀಗ ಪರಿಹಾರದ ಹಣ ಪಡೆಯಲು ಮತಾಂತರ ಅಡ್ಡಿಯಾಗಿದ್ದು, ಪುತ್ರಿಯರಿಬ್ಬರೂ ಅನ್ಯಧರ್ಮಕ್ಕೆ ಮತಾಂತರ ಆಗಿರುವುದೇ ಈ ಸಮಸ್ಯೆ ಕಾರಣ. ಆಗಸ್ಟ್ 5 ರಂದು ಬ್ರಹ್ಮಗಿರಿ ಬೆಟ್ಟದ ಸಾಲಿನ ಗಜಗಿರಿ ಬೆಟ್ಟ ಕುಸಿದು ನಾರಾಯಣ ಆಚಾರ್ಯ, ಶಾಂತ ಆಚಾರ್ಯ, ಆನಂದ ತೀರ್ಥ ಸ್ವಾಮಿಜಿ, ರವಿ ಕಿರಣ್ ಮತ್ತು ಶ್ರೀನಿವಾಸ್ ಅವರು ಭೂ ಸಮಾಧಿಯಾಗಿದ್ದರು. ಈ ಪೈಕಿ ಶಾಂತ ಆಚಾರ್ಯ ಮತ್ತು ಶ್ರೀನಿವಾಸ್ ಭಟ್ ಅವರ ಮೃತ ದೇಹಗಳು ಪತ್ತೆ […]

ಆ. 26ರಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಉಡುಪಿ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಾಳೆ (ಆ.26)ರಂದು ಮಧ್ಯಾಹ್ನ 3 ಗಂಟೆಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನ ನಡೆಯಲಿದೆ. ಭಾರತೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲಕೃಷ್ಣ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪರಾಜ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸುವರು ಎಂದು ಯುವ ಕಾಂಗ್ರೆಸ್ […]

ದಕ್ಷಿಣ ಕನ್ನಡದಲ್ಲಿ ಇಂದು 218 ಮಂದಿ ಕೊರೊನಾದಿಂದ ಗುಣಮುಖ; ಮೂವರು ಕೊರೊನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 218 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 8127 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಇಂದು 247 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10778ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 2332 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಮೂವರು ಕೊರೊನಾಗೆ ಬಲಿ ಜಿಲ್ಲೆಯಲ್ಲಿ ಇಂದು ಮೂವರು ಕೊರೊನಾದಿಂದ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 317ಕ್ಕೆ ಏರಿಕೆಯಾಗಿದೆ […]

ಉಡುಪಿಯಲ್ಲಿ ಇಂದು 180 ಮಂದಿ ಕೊರೊನಾದಿಂದ ಗುಣಮುಖ: ಇಬ್ಬರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 180 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 50 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 130 ಮಂದಿ ಸಹಿತ 180 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7737 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 217 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10453 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ […]