ಕೇರಳಕ್ಕೆ ಪಡಿತರ ಅಕ್ಕಿ ಸಾಗಿಸುತ್ತಿದ್ದ ಐವರು ಚೋರರ ಬಂಧನ: 55 ಟನ್ ಅಕ್ಕಿ ವಶ
ಉಡುಪಿ: ಕೇರಳಕ್ಕೆ ಕರ್ನಾಟಕದ ಉಚಿತ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಐವರು ಚೋರರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ ಹಾಗೂ ನಿಯಾಸ್ ಎಂದು ಗುರುತಿಸಲಾಗಿದೆ. ಬಂಧಿತರು ಕುಂದಾಪುರ ಮೂಡು ಗೋಪಾಡಿ ಮತ್ತು ಕೇರಳ ಮೂಲದವರೆಂದು ತಿಳಿದುಬಂದಿದೆ. ಮಿಂಚಿನ ಕಾರ್ಯಾಚರಣೆ ನಡೆಸಿದ ಡಿಸಿಐಬಿ ಪೊಲೀಸರು, ಆರೋಪಿಗಳು ಕುಂದಾಪುರ ತಾಲೂಕಿನ ಕೋಟೇಶ್ವರದ ಅಕ್ರಮ ಅಕ್ಕಿ ದಾಸ್ತಾನು ಗೋಡಾನ್ ನಲ್ಲಿ ಸಂಗ್ರಹಿಸಿ ಇಟ್ಟಿದ್ದ 55 ಟನ್ ಕಿಲೋ ಅಕ್ಕಿಯನ್ನು ವಶಕ್ಕೆ […]
ನಿವೃತ್ತ ಪ್ರಾಚಾರ್ಯ ಪ್ರೊ. ಕೆ. ರಾಮದಾಸ್ ಭಟ್ ನಿಧನ
ಉಡುಪಿ: ಇಲ್ಲಿನ ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಕೆ. ರಾಮದಾಸ್ ಭಟ್ (90) ವಯೋಸಹಜ ಅನಾರೋಗ್ಯದಿಂದ ಬೆಳಗಾವಿಯ ಪುತ್ರನ ಮನೆಯಲ್ಲಿ ಬುಧವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ . ಗಣ್ಯರ ಸಂತಾಪ: ರಾಮದಾಸ್ ಭಟ್ ರ ನಿಧನಕ್ಕೆ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ , ಶಾಸಕ ಕೆ. ರಘುಪತಿ ಭಟ್ , ಮಾಜಿ ರಾಜ್ಯಪಾಲ ಪಿ.ಬಿ. ಆಚಾರ್ಯ, ಪ್ರೊ. ಹೆರಂಜೆ ಕೃಷ್ಣ ಭಟ್ , ಪ್ರೊ. ಎಂ.ಎಲ್. ಸಾಮಗ […]
ಕಾಂಗ್ರೆಸ್ ನೀಚ ರಾಜಕಾರಣ ಮಾಡುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಕಲಬುರಗಿ: ಕಾಂಗ್ರೆಸ್ ಬೆಂಕಿ ಹಚ್ಚುವುದರಲ್ಲಿ ನಿಸ್ಸೀಮರು, ತನ್ನ ನೀಚ ರಾಜಕಾರಣವನ್ನು ಮುಂದುವರಿಸುತ್ತಿದೆ. ಅಧಿಕಾರ ಇಲ್ಲದ ರಾಜ್ಯಗಳಲ್ಲಿ ಬೆಂಕಿಹಚ್ಚಿ ಗಲಭೆ ಎಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಕಲಬುರಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ-ಡಿಕೆಶಿ ನಡುವಿನ ಗೊಂದಲದಿಂದಲೇ ಕೆ ಜಿ ಹಳ್ಳಿ , ಡಿ ಜೆ ಹಳ್ಳಿ ಗಲಭೆ ನಡೆದಿದೆ. ಅವರಿಗೆ ರಾಷ್ಟೀಯ ಅಧ್ಯಕ್ಷರನ್ನು ನೇಮಕ ಮಾಡಲು ಆಗುತ್ತಿಲ್ಲಾ. ವಿನಾಕಾರಣ ಗೊಂದಲ ಸೃಷ್ಟಿಸಿ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು […]
ಡ್ರಗ್ಸ್ ನಶೆಯಲ್ಲಿ ತೇಲುತ್ತಿದೆ ಸ್ಯಾಂಡಲ್ ವುಡ್?.
ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದ್ದ ಜಾಲವೊಂದನ್ನು ಎನ್ ಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಸ್ಯಾಂಡಲ್ ವುಡ್ ಸಿನಿಮಾ ನಟ ನಟಿಯರು ಇವರ ಖಾಯಂ ಗ್ರಾಹಕರು ಎಂಬ ಮಾಹಿತಿ ಸಂಚಲನ ಮೂಡಿಸಿದೆ. ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ ಮೇಲೆ ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ (ಎನ್ಸಿಬಿ) ಅಧಿಕಾರಿಗಳು ಆಗಸ್ಟ್ 21ರಂದು ದಾಳಿ ಮಾಡಿದ್ದು, ‘ಡ್ರಗ್ಸ್’ ಜಾಲ ಕಿಂಗ್ಪಿನ್ ಆಗಿದ್ದ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ. ಅವರಿಂದ 145 ಡ್ರಗ್ಸ್ ಮಾತ್ರೆಗಳು ಹಾಗೂ ₹ 2.20 ಲಕ್ಷ ನಗದನ್ನು ಜಪ್ತಿ […]
ಉಡುಪಿಯಲ್ಲಿ ಇಂದು 214 ಮಂದಿ ಕೊರೊನಾದಿಂದ ಗುಣಮುಖ
ಉಡುಪಿ: ಜಿಲ್ಲೆಯಲ್ಲಿ ಇಂದು 214 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 35 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 179 ಮಂದಿ ಸಹಿತ 214 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 8197 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 209 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10913ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ […]