ಅನ್ ಲಾಕ್ 4.0 ಮಾರ್ಗಸೂಚಿ ಪ್ರಕಟ: ಸೆ. 7ರಿಂದ ಮೆಟ್ರೋ ಆರಂಭ, ಶಾಲಾ ಕಾಲೇಜುಗಳಿಗಿಲ್ಲ ಅನುಮತಿ

ನವದೆಹಲಿ: ಕೇಂದ್ರ ಸರ್ಕಾರ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿದೆ. ಉಳಿದಂತೆ ಶಾಲಾ ಕಾಲೇಜು, ಚಿತ್ರಮಂದಿರ, ಈಜುಕೊಳ, ಮನೋರಂಜನಾ ಪಾರ್ಕ್ ಗಳಿಗೆ ವಿಧಿಸಿರುವ ನಿರ್ಬಂಧವನ್ನು ಮುಂದುವರಿಸಿದೆ. ಹೊಸ ಮಾರ್ಗಸೂಚಿಯಂತೆ ಸೆ.​​ 7ರಿಂದ ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಆದರೆ, ಸೆಪ್ಬೆಂಬರ್‌ ತಿಂಗಳ ಅಂತ್ಯದವರೆಗೂ ಶಾಲಾ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಗಸೂಚಿಯ ಪ್ರಮುಖ ಅಂಶಗಳು: * ಸೆಪ್ಟೆಂಬರ್‌ […]

ಕೇಂದ್ರದಿಂದ ಅನ್ ಲಾಕ್‌4.0 ಘೋಷಣೆ:ಯಾವುದಕ್ಕೆಲ್ಲಾ ಅನುಮತಿ?

ನವದೆಹಲಿ: ಕೇಂದ್ರದಿಂದ ಅನ್ ಲಾಕ್ 4.0 ಬಿಡುಗಡೆಯಾಗಿದ್ದು, ಸೆ.7 ರಿಂದ ದೇಶಾದ್ಯಂತ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಸೆಪ್ಟೆಂಬರ್​​ 1ರಿಂದ ಈ ನಿಯಮ ಜಾರಿಗೊಳ್ಳಲಿದೆ, ಸೆಪ್ಟೆಂಬರ್​​ 7ರಿಂದ ದೇಶಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಹಂತ ಹಂತವಾಗಿ ಬೆಂಗಳೂರು ಸೇರಿದಂತೆ ಹಲವು ಕಡೆ ಮೆಟ್ರೋ ಸಂಚಾರ ಆರಂಭವಾಗಲಿದೆ. ಇದರ ಜತೆಗೆ ಸಿನಿಮಾ ಹಾಲ್​, ಬಾರ್​ ಆ್ಯಂಡ್​ ರೆಸ್ಟೋರೆಂಟ್ ತೆರೆಯುವುದೂ ಸೇರಿದಂತೆ ಅನೇಕ ಸಡಿಲಿಕೆ ನೀಡಿ ಕೇಂದ್ರ ಸರ್ಕಾರ ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ.ಇನ್ನು ಸೆಪ್ಟೆಂಬರ್‌ 30ರವರೆಗೆ ಶಾಲಾ, ಕಾಲೇಜುಗಳನ್ನು […]

ಮಂಗಳೂರು: ಬರೋಬ್ಬರಿ 132 ಕೆ.ಜಿ. ಗಾಂಜಾ ವಶ; ಇಬ್ಬರ ಬಂಧನ

ಮಂಗಳೂರು: ನಗರದಲ್ಲಿ ಸಕ್ರಿಯವಾಗಿದ್ದ ಗಾಂಜಾ ಮಾರಾಟ ಜಾಲವೊಂದನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ. 21ರಂದು ಕಾಸರಗೋಡಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಬೊಲೆರೊ ಪಿಕಪ್ ವಾಹನವನ್ನು ರಾ.ಹೆ.66ರ ಪಂಪುವೆಲ್ ಬಳಿಯ ತಾರೆತೋಟ ಎಂಬಲ್ಲಿ ಪೊಲೀಸರು ತಡೆದು, ಆರೋಪಿಗಳಿಂದ ಬರೋಬ್ಬರಿ 132 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ವರ್ಕಾಡಿ ಪಾವೂರಿನ ಕಲಂದರ್ ಮಹಮ್ಮದ್ ಮತ್ತು ಕುಂಜತ್ತೂರಿನ ಮೊಹಿದಿನ್ ಅನ್ಸಾರ್ ಎಂದು ಗುರುತಿಸಲಾಗಿದೆ. ಪಿಕಪ್ ವಾಹನವನ್ನು ಹಿಂಬಾಲಿಸುತ್ತಿದ್ದ ಸ್ವಿಫ್ಟ್ ಕಾರು ಸಹಿತ ಅಂದಾಜು 43 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು […]

ಕುಂದಾಪುರ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ: ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮೇಜರ್ ಧ್ಯಾನ್ ಚಂದ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಮಾತನಾಡಿ, ಪ್ರಶಾಂತ ಮನಸ್ಥಿತಿ, ಸದೃಢ ಆರೋಗ್ಯಕ್ಕೆ ಯೋಗ ಮತ್ತು ಕ್ರೀಡೆ ಮಹತ್ವವಾಗಿದೆ ಎಂದರು. ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ಹಾಗೂ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. […]

ಉಡುಪಿಯಲ್ಲಿ ಇಂದು 219 ಮಂದಿ ಕೊರೊನಾದಿಂದ ಗುಣಮುಖ

ಉಡುಪಿ: ಜಿಲ್ಲೆಯಲ್ಲಿ ಇಂದು 219 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 41 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 178 ಮಂದಿ ಸಹಿತ 219 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 8603 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 172 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11259ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ […]