ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರು ಭಾರತದ 13ನೇ ರಾಷ್ಟ್ರಪತಿ, ದೇಶದ ಆರ್ಥಿಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಎರಡು ವರ್ಷ ಹಿಂದೆ ಭಾರತ ರತ್ನ ಪ್ರಶಸ್ತಿ ನೀಡಿ ಪುರಸ್ಕಾರಿಸಲಾಗಿತ್ತು. ದೆಹಲಿಯ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಯಲ್ಲಿ ಮೆದುಳು ಶಸ್ತ್ರಚಿಕಿತ್ಸೆ ಒಳಗಾಗಿದ್ದ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ […]

ಉಡುಪಿ ಕೃಷ್ಣಮಠದಲ್ಲಿ ಸೆ. 10ರಂದು ಕೃಷ್ಣ ಜನ್ಮಾಷ್ಟಮಿ: ಜಿಲ್ಲಾಡಳಿತದ ಸೂಚನೆಯಂತೆ ವಿಟ್ಲಪಿಂಡಿ ಉತ್ಸವ

ಉಡುಪಿ: ಇಲ್ಲಿನ ಶ್ರೀಕೃಷ್ಣನ ಮಠದಲ್ಲಿ ಸೆಪ್ಟೆಂಬರ್ 10ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಗುತ್ತದೆ. ಮರುದಿನ ಸೆ. 11ರಂದು ರಥಬೀದಿಯಲ್ಲಿ ನಡೆಯುವ ವಿಟ್ಲಪಿಂಡಿ ಆಚರಣೆಯನ್ನು ಜಿಲ್ಲಾಡಳಿತದ ನಿರ್ದೇಶನದಂತೆ ನೆರವೇರಿಸಲಾಗುವುದು ಎಂದು ಪರ್ಯಾಯ ಅದಮಾರುಮಠದ ಈಶಪ್ರಿಯತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಇಂದು ಕೃಷ್ಣಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 10ರಂದು ಮಧ್ಯರಾತ್ರಿ 12.16ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುವುದು. ಬೆಳಿಗ್ಗೆ ಮಹಾಪೂಜೆ, ನೈವೇದ್ಯ, ವಿಶೇಷ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮ ನೆರವೇರಲಿದೆ ಎಂದು ಮಾಹಿತಿ ನೀಡಿದರು. […]

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬಿ.ಜಿ. ಮೋಹನ್ ದಾಸ್ ವಿಧಿವಶ  

ಉಡುಪಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬಿ.ಜಿ. ಮೋಹನ್ ದಾಸ್ (70) ಅವರು ಅನಾರೋಗ್ಯದಿಂದ ಇಂದು ವಿಧಿವಶರಾದರು. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪತ್ನಿ ಯಶೋದಾ, ಪುತ್ರ ಅಖಿಲ್ ಹಾಗೂ ಪುತ್ರಿ ಯಶಸ್ವಿ ಹಾಗೂ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ. ಮಣಿಪಾಲದಿಂದ ಫಾರ್ಮಸಿ ವಿಭಾಗದಲ್ಲಿ ಸ್ನಾತಕೋತರ ಪದವಿ ಪಡೆದಿರುವ ಬೀಜಿಯವರು ಗಲ್ಫ್‌ನಾಡಿಗೆ ವಲಸೆ ಬರುವ ಮುನ್ನ ಮಣಿಪಾಲದಲ್ಲಿ ಫಾರ್ಮಸಿ ವಿಭಾಗದ ಸಹಾಯಕ ಪ್ರೊಪೆಸರ್ ಆಗಿಯೂ ಸೇವೆ ಸಲ್ಲಿಸಿದ್ದು, 1985ರಲ್ಲಿ […]

ನ್ಯಾಯಾಂಗ ನಿಂದನೆ ಪ್ರಕರಣ: ಪ್ರಶಾಂತ್ ಭೂಷನ್ ಗೆ ಒಂದು ರೂಪಾಯಿ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷನ್ ಗೆ ಸುಪ್ರೀಂ ಕೋರ್ಟ್ 1 ರೂ. ದಂಡ ಪಾವತಿಸುವಂತೆ ಶಿಕ್ಷೆ ವಿಧಿಸಿದೆ. ಸೆಪ್ಟಂಬರ್ 15ರೊಳಗೆ 1 ರೂ. ದಂಡವನ್ನು ಪಾವತಿಸಬೇಕು. ವಿಫಲರಾದರೆ ಮೂರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಹಾಗೂ 3 ವರ್ಷಗಳ ಕಾಲ ವಕೀಲಿ ವೃತ್ತಿ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.    

ಮನುಷ್ಯರಾಯ್ತು ಇದೀಗ ಜಾನುವಾರುಗಳಿಗೂ ಕ್ವಾರಂಟೈನ್.!

ಗುರುಮಠಕಲ್: ಕೊರೊನಾ ಸೋಂಕಿತರು ಕ್ವಾರಂಟೈನ್ ಆಗುತ್ತಿರುವ ಸಂದರ್ಭದಲ್ಲುಯೇ ಇದೀಗ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ವಿಚಿತ್ರ ರೋಗದಿಂದಾಗಿ ಅವುಗಳನ್ನು ಕ್ವಾರಂಟೈನ್ ಮಾಡಲಾಗುತ್ತಿದೆ. ಗುರುಮಠಕಲ್ ನ ಕೆಲವೊಂದು ಹಳ್ಳಿಗಳಲ್ಲಿ ಜಾನುವಾರುಗಳಿಗೆ ಲಂಪಿ ಎಂಬ ಚರ್ಮ ರೋಗ ಕಾಣಿಸಿಕೊಂಡಿದೆ. ಇದೊಂದು ಹರಡುವ ಕಾಯಿಲೆಯಾಗಿರುವ ಕಾರಣ ಅವುಗಳನ್ನು ಕ್ವಾರಂಟೈನ್ ಮಾಡಲಾಗುತ್ತಿದೆ. ಜಾನುವಾರುಗಳ ಬಾಯಿಯಲ್ಲಿ ಗುಳ್ಳೆ, ಮೈಯಲ್ಲಿ ಗುಳ್ಳೆ, ಕಾಲಿನಲ್ಲಿಯೂ ಗುಳ್ಳೆಗಳು ಉಂಟಾಗಿ ಮೇವು ಮೇಯದಂತೆ, ನಡೆಯದಂತೆ ಆಗಿ ನರಳುವಂತಾಗಿದೆ. ಇದರಿಂದ ರೈತರು ಕಂಗಲಾಗಿದ್ದಾರೆ. ಪಶು ವೈದ್ಯರ ಸೂಚನೆಯ ಮೇರೆಗೆ ರೈತರು ಈಗ ರಾಸುಗಳನ್ನು ಕ್ವಾರಂಟೈನ್ […]