ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ
ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಉಡುಪಿಯ ರಾಮ ಭವನ ಹೋಟೆಲ್ ಸಂಕೀರ್ಣ ದಲ್ಲಿ ಈ ವರ್ಷ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪಿಯುಸಿ ವಿದ್ಯಾರ್ಥಿನಿ ಅಭಿಜ್ಞಾ ಎಸ್. ರಾವ್, ನಾಲ್ಕನೇ ಸ್ಥಾನ ಪಡೆದ ಮೇಧಾ ಎನ್. ಭಟ್ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಭವ್ಯ ನಾಯಕ್ ಅವರನ್ನು ಈ […]
ಶುರುವಾಗಿದೆ ಇ-ಸಂಜೀವಿನಿ: ಮನೆಯಿಂದಲೇ ಪಡೀರಿ ಅಗತ್ಯ ಆರೋಗ್ಯ ಸೇವೆ
ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ತುರ್ತು ಆರೋಗ್ಯ ಸಮಸ್ಯೆಗಳಿಗೆ ಆರೋಗ್ಯ ಕೇಂದ್ರಗಳಿಗೆ/ಆಸ್ಪತ್ರೆಗಳಿಗೆ ಭೇಟಿ ನೀಡುವುದು ಕಷ್ಟ ಸಾದ್ಯವಾಗಿರುತ್ತದೆ. ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಇ-ಸಂಜೀವಿನಿ ಟೆಲಿ ಮೆಡಿಸಿನ್ ರಾಷ್ಟ್ರ ಮಟ್ಟದಲ್ಲಿ ಆರಂಭಗೊಂಡಿದೆ. ಇ-ಸಂಜೀವಿನಿ-ರಾಷ್ಟ್ರೀಯ ಟೆಲಿ ಸಮಾಲೋಚನಾ ಸೇವೆ (ನ್ಯಾಷನಲ್‌ಟೆಲಿ ಕನ್ಸಲ್‌ಟೇಷನ್ ಸರ್ವೀಸ್) ಎಂಬ ಹೆಸರಿನಲ್ಲಿ ಮೊಬೈಲ್ ಆಪ್ ಅನ್ನು ಸಿದ್ಧಪಡಿಸಲಾಗಿದ್ದು, ಸಾರ್ವಜನಿಕರು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಮನೆಯಿಂದಲೇ ವೈದ್ಯರನ್ನು ಮೊಬೈಲ್ ಮುಖಾಂತರ […]
ವಿವಿಧ ವೃತ್ತಿ ನಿರ್ವಹಿಸುವವರಿಗೆ ಲಭ್ಯವಿದೆ ಉಚಿತ ಉಪಕರಣ: ಅರ್ಜಿ ಸಲ್ಲಿಸಿ
ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ/ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರಗೆಲಸ, ದೋಬಿ, ಕ್ಷೌರಿಕ, ಬ್ಯೂಟಿಪಾರ್ಲರ್, ಕಮ್ಮಾರಿಕೆ, ಪ್ಲಂಬರ್, ಇಲೆಕ್ರ್ಟಿಶನ್ ಹಾಗೂ ಟೈಲರಿಂಗ್ ವೃತ್ತಿಯ ಉಪಕರಣಗಳನ್ನು ಉಚಿತವಾಗಿ ನೀಡಲಾಗುವುದು. ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಅರ್ಜಿ ನಮೂನೆಯನ್ನು ಈ ಕಛೇರಿಯಿಂದ/ ಆಯಾಯ ಗ್ರಾಮ ಪಂಚಾಯತ್‌ಗಳಿಂದ ಪಡೆದು ಸೆಪ್ಟೆಂಬರ್ 11 ರೊಳಗೆ ಉಪನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, “ಬಿ ಬ್ಲಾಕ್” ರೂಂ. ನಂ.207 ಮೊದಲನೇ ಮಹಡಿ ರಜತಾದ್ರಿ […]
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ನಿಂದ ಕೊರೊನಾ ಸಂಕಷ್ಟಕ್ಕೀಡಾದ ಸಣ್ಣ ಉದ್ದಿಮೆದಾರರಿಗೆ ಎಕ್ಸ್‌ಪ್ರೆಸ್ ಸಾಲ ಯೋಜನೆ: ಯಶ್‌ಪಾಲ್ ಸುವರ್ಣ
ಉಡುಪಿ: ಕೊರೊನಾ ಮಹಾಮಾರಿಯ ಪರಿಣಾಮದಿಂದ ವ್ಯವಹಾರಿಕ ಹಿನ್ನಡೆಯಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ನಿಂದ ಅರ್ಹ ಗ್ರಾಹಕರಿಗೆ ಭದ್ರತೆ ರಹಿತ ಎಕ್ಸ್‌ಪ್ರೆಸ್ ಸಾಲ ಯೋಜನೆ ಜಾರಿಗೊಳಿಸಲಾಗುವುದು ಬ್ಯಾಂಕ್ ನ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ನೀಡಿದ್ದ 6 ತಿಂಗಳ ಮಾರಟೋರಿಯಂ ಅವಧಿ ಆಗಸ್ಟ್ 31 ಕ್ಕೆ ಅಂತ್ಯಗೊಂಡಿದ್ದು, ಸೆಪ್ಟೆಂಬರ್ ತಿಂಗಳಿನಿಂದ ಗ್ರಾಹಕರು ಸಾಲದ ಕಂತು ಪಾವತಿಸಬೇಕಾಗಿದೆ. ಈ ಸಂದರ್ಭದಲ್ಲಿ ಸಣ್ಣ ಉದ್ದಿಮೆದಾರರಿಗೆ, ಮೀನುಗಾರರಿಗೆ ಆರ್ಥಿಕವಾಗಿ ಶಕ್ತಿತುಂಬುವ […]
ಸೆಪ್ಟೆಂಬರ್ 3ರಂದು ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಉಡುಪಿ: ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಇದರ ಕಾರ್ಯಕರ್ತರ ಸಭೆಯು ಸೆಪ್ಟೆಂಬರ್ 3ರಂದು 4 ಗಂಟೆಗೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಳಿಯ ರಾಧ್ಮಾ ರೆಸಿಡೆನ್ಸಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ತೋನ್ಸೆ ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಗ್ರಾಮೀಣ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.