ಅಡುಗೆ ಅನಿಲ ಸಿಲಿಂಡರ್ ಗೆ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತ: ಸೆ. 1ರಿಂದಲೇ ನಿಯಮ ಜಾರಿ

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತ ಹಾಗೂ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿನ ಸತತ ಏರಿಳಿಕೆಯ ಹಿನ್ನೆಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್​​​ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಗೆ ಬಂದಿದೆ. ಇನ್ಮುಂದೆ ಸಬ್ಸಿಡಿ ರಹಿತ ಮತ್ತು ಸಬ್ಸಿಡಿ ಸಹಿತ ಗ್ಯಾಸ್ ಸಿಲಿಂಡರ್​​ಗಳ ಬೆಲೆ ಒಂದೇ ರೀತಿ ಆಗಿರುತ್ತದೆ. ಯಾವುದೇ ಗ್ರಾಹಕ ಸಿಲಿಂಡರ್ ಖರೀದಿಸಿದರೂ ಏಕರೂಪದ ಬೆಲೆ ಪಾವತಿಸಬೇಕು. ಸದ್ಯ 14.2 ಕೆಜಿ ತೂಕದ ಸಿಲಿಂಡರ್​​ಗೆ 594 […]

ಉಡುಪಿಯಲ್ಲಿ ಇಂದು 250 ಮಂದಿ ಕೊರೊನಾದಿಂದ ಗುಣಮುಖ: ಮೂವರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 250 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 185 ಮಂದಿ ಸಹಿತ 250 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 9601 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 167 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11924ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ […]

ಪಬ್ಜಿ ಸಹಿತ 118 ಚೀನಾದ ಆ್ಯಪ್ ಗಳಿಗೆ ನಿಷೇಧ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಚೀನಾದ ಮೊಬೈಲ್ ಆ್ಯಪ್ ಗಳ ವಿರುದ್ಧ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸಮರ ಸಾರಿದೆ. ಪಬ್ಜಿ, ಪಬ್ಜಿ ಮೊಬೈಲ್ ಲೈಟ್, ವಿಚಾಟ್ ವರ್ಕ್‌, ವಿಚಾಟ್ ರೀಡಿಂಗ್ ಸೇರಿದಂತೆ 118 ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಹಿಂದೆ ಎರಡು ಬಾರಿ ಒಟ್ಟು ಚೀನಾದ ನೂರಕ್ಕೂ ಹೆಚ್ಚು ಆ್ಯಪ್‌ಗಳ ಮೇಲೆ ನಿಷೇಧ ಹೇರಲಾಗಿತ್ತು. ದೇಶದ ರಕ್ಷಣೆ, ಸಾರ್ವಭೌಮತ್ವ, ಸಮಗ್ರತೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು 118 ಆ್ಯಪ್‌ಗಳನ್ನು ನಿಷೇಧಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರ 33ನೇ ಚಾತುರ್ಮಾಸ್ಯ ಸಮಾಪ್ತಿ

ಬ್ರಹ್ಮಾವರ: ಇಲ್ಲಿನ ನೀಲಾವರ ಗೋಶಾಲೆಯಲ್ಲಿರುವ ತಮ್ಮ ಶಾಖಾ ಮಠದಲ್ಲಿ 33ನೇ ಚಾತುರ್ಮಾಸ್ಯ ವ್ರತವನ್ನು ನಡೆಸುತ್ತಿದ್ದ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ವ್ರತ ಸಮಾಪ್ತಿಗೊಳಿಸಿದರು. ಬೆಳಿಗ್ಗೆ ಪಟ್ಟದೇವರಾದ ಶ್ರೀರಾಮ ವಿಠಲ ದೇವರಿಗೆ ಮಹಾಪೂಜೆ ನೆರವೇರಿಸಿ, ಬಳಿಕ ಗೋಶಾಲೆಯ ಪುಷ್ಕರಿಣಿಯಲ್ಲಿ ಚಾತುರ್ಮಾಸ್ಯ ಮೃತ್ತಿಕಾ ವಿಸರ್ಜನೆ ಮಾಡಿದರು. ಮಧ್ಯಾಹ್ನ ಗೋಶಾಲೆಯಿಂದ ತಮ್ಮ ಶಿಷ್ಯರೊಡಗೂಡಿ ಮಹಿಳೆಯರ  ಭಜನೆ, ವಿದ್ಯಾರ್ಥಿಗಳ ಮಂತ್ರಘೋಷಗಳೊಂದಿಗೆ  ಸಮೀಪದ ಸೀತಾನದಿ ತೀರದವರೆಗೆ ಕುದುರೆ ಸವಾರಿ ನಡೆಸಿದರು. ಸೀತಾನದಿಗೆ ಸೀಯಾಳ, ಪುಷ್ಪ ಅರ್ಪಣೆ  ಸಹಿತ ಮಂಗಳಾರತಿ ಬೆಳಗಿದರು. ಬಳಿಕ ಸ್ಥಳೀಯರಾದ […]

ಬಿಹಾರ: ಜೀತನ್ ರಾಮ್ ಮಾಂಝಿ ಪಕ್ಷ ಎನ್‌ಡಿಎ ಮೈತ್ರಿ ಒಕ್ಕೂಟಕ್ಕೆ ಸೇರ್ಪಡೆ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆಗಳಿದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಬಿಹಾರ ರಾಜಕೀಯದಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ನೇತೃತ್ವದ ಎಚ್‌ಎಎಂ(ಎಸ್‌) ಪಕ್ಷವು ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಎನ್‌ಡಿಎ ಮೈತ್ರಿ ಒಕ್ಕೂಟದೊಂದಿಗೆ ಸೇರ್ಪಡೆಯಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ಪಕ್ಷದ ಮುಖಂಡ ಮಾಂಝಿ ಅವರು ಗುರುವಾರ ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ವಕ್ತಾರ ಡ್ಯಾನಿಷ್ ರಿಜ್ವಾನ್ […]