ಜಾನುವಾರುಗಳಲ್ಲಿ ಲುಂಪಿ ಚರ್ಮರೋಗ: ರೋಗ ಲಕ್ಷಣ ಇರುವ ರಾಸುಗಳನ್ನು ಪ್ರತ್ಯೇಕಿಸಿ ಕ್ವಾರಂಟೈನ್ ಗೆ ಪಶುವೈದ್ಯರ ಸೂಚನೆ
ಉಡುಪಿ: ಪಶು ಪಾಲನಾ ಇಲಾಖೆಯ ಮಾಹಿತಿಯಂತೆ ಲುಂಪಿ ಚರ್ಮ ರೋಗ (Lumpy Skin Disease) ಇತ್ತೀಚಿನ ದಿನಗಳಲ್ಲಿ ಜಾನುವಾರುಗಳನ್ನು ಒಳಗೊಂಡು ಎಮ್ಮೆ ಮತ್ತು ಇತರೆ ಪ್ರಾಣಿಗಳಲ್ಲಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಗಳಲ್ಲಿ ಕಂಡುಬಂದಿದ್ದು, ಇದು ಸೊಳ್ಳೆ, ನೊಣ ಮತ್ತು ಉಣ್ಣೆ ಕಡಿತಗಳಿಂದ ಹರಡುತ್ತದೆ. ದನಗಳ ಚರ್ಮದ ಒಳಭಾಗದಲ್ಲಿ ವರ್ತುಲಾಕಾರದ ಗುಳ್ಳೆ, ಕನಿಷ್ಠ ಪ್ರಮಾಣದ ಜ್ವರ, ಹಾಲು ಇಳುವರಿ ಕಡಿಮೆ, ಆಹಾರ ಸೇವನೆಯಲ್ಲಿ ಕುಂಠಿತವಾಗುವುದು ಇತ್ಯಾದಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇಲಾಖಾ ಪಶು ವೈದ್ಯಾಧಿಕಾರಿಗಳು ಅಗತ್ಯವಿದ್ದಲ್ಲಿ ರೋಗ ಲಕ್ಷಣವಿರುವ […]
ತೆಂಕನಿಡಿಯೂರು ಗ್ರಾಪಂ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಸುರೇಶ್ ನಾಯಕ್ ಕಾಂಗ್ರೆಸ್ ಸೇರ್ಪಡೆ
ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಸುರೇಶ್ ನಾಯಕ್ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು. ಇಂದು ತೆಂಕನಿಡಿಯೂರಿನ ರಾಧ್ಮಾ ರೆಸಿಡೆನ್ಸಿಯಲ್ಲಿ ನಡೆದ ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡರು. ಇದೇ ವೇಳೆ ಅವರ ಜತೆಗೆ ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಜನಾರ್ದನ ತೋನ್ಸೆ, ರಮೇಶ ಕಾಂಚನ್, ಸತೀಶ […]
ಉಡುಪಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ
ಉಡುಪಿ: ಉಡುಪಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಸ್ತುತ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಮಾಹಿತಿ ಈ ಕೆಳಗಿನಂತಿದೆ. ಪ್ರೌಢ ಶಾಲಾ ವಿಭಾಗ: ಜನತಾ ಪ್ರೌಢಶಾಲೆ ಹೆಮ್ಮಾಡಿಯ ಬಿ.ಮೋಹನ ದಾಸ್ ಶೆಟ್ಟಿ, ರೆಂಜಾಳದ ವಿನಾಯಕ ನಾಯ್ಕ, ರಾಜೀವ ನಗರದ ಸಂಜೀವ ಎಚ್ ನಾಯಕ್, ಸಂಜಯ ಗಾಂಧಿ ಪ್ರೌಢ ಶಾಲೆ ಅಂಪಾರುನ ಉದಯ್ ಕುಮಾರ್, ವಿವೇಕ ಪ.ಪೂ. […]
ಶ್ರೀಕೃಷ್ಣ ಜನ್ಮಾಷ್ಟಮಿಗೆ ಉಚಿತ ಬಿಲ್ವಪತ್ರೆ ಸಸಿ ವಿತರಣೆ
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮೀ ಪ್ರಯುಕ್ತ ಉಡುಪಿ ವಲಯ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದ (ಪೆರ್ಡೂರು ನರ್ಸರಿ ) ಆಶ್ರಯದಲ್ಲಿ ಉಡುಪಿ ಪೇಜಾವರ ಮಠದ ಸಹಯೋಗದಲ್ಲಿ ಸೆಪ್ಟೆಂಬರ್ 6ರಿಂದ 8ರ ವರೆಗೆ ಮೂರು ದಿನಗಳ ಕಾಲ ಉಡುಪಿ ಸಂಸ್ಕೃತ ಕಾಲೇಜು ಮಹಾವಿದ್ಯಾಲಯದ ಆವರಣದಲ್ಲಿ ಆಸಕ್ತ ಸಾರ್ವಜನಿಕರಿಗೆ ಉಚಿತವಾಗಿ ಬಿಲ್ವಪತ್ರೆ ಸಸಿಗಳನ್ನು ವಿತರಿಸಲಾಗುವುದು ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ. ಎರಡು ಸಾವಿರ ಸಸಿಗಳನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 94490 82198, 94484 51023, 98458 […]
275 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭ: ಸಚಿವ ಸಂಪುಟದಲ್ಲಿ ನಿರ್ಧಾರ
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಮೊದಲ ಹಂತದಲ್ಲಿ 275 ಪಬ್ಲಿಕ್ ಶಾಲೆಗಳಲ್ಲಿ ಆರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಶಿಕ್ಷಣ ನೀಡಲು […]