ಸಾಲಗಾರರಿಗೆ ಸಿಹಿಸುದ್ದಿ: ಸಾಲ ಮರುಪಾವತಿ ಅವಧಿ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬ್ಯಾಂಕ್ ಸಾಲ ಸೇರಿದಂತೆ ವಿವಿಧ ರೀತಿಯ ಇಎಂಐ ಪಾವತಿದಾರರಿಗೆ ಸುಪ್ರೀಂ ಕೋರ್ಟ್ ಇಂದು ಸಿಹಿ ಸುದ್ದಿನೀಡಿದೆ. ಸಾಲ ಮರುಪಾವತಿ ಮಾಡುವ ಅವಧಿಯನ್ನು ಮುಂದೂಡಿಕೆ ಮಾಡಿ ಸಾಲಗಾರರ ಹೊರೆಯನ್ನು ಸುಪ್ರೀಂ ಕೋರ್ಟ್ ಇಳಿಸಿದೆ. ಈ ವರ್ಷದ ಆ.31 ರವರೆಗೆ ವಸೂಲಾಗದ ಸಾಲ ಎಂದು ಘೋಷಿಸಿಲ್ಲದ ಸಾಲ ಖಾತೆಗಳನ್ನು ಮುಂದಿನ ಆದೇಶದವರೆಗೆ ಎನ್ ಪಿಎ ಆಗಿ ಘೋಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಇದು ಕೊರೊನಾದಿಂದ ಸಂಕಷ್ಟದಲ್ಲಿರುವ ಸಾಲಗಾರರಿಗೆ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಕೋವಿಡ್‌ ಪಿಡುಗಿನಿಂದಾದ […]

ಉಡುಪಿಯಲ್ಲಿ ಇಂದು 186 ಮಂದಿಗೆ ಕೊರೊನಾ ಪಾಸಿಟಿವ್: ಇಬ್ಬರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 186 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12336 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 1967 ಸಕ್ರಿಯ ಕೊರೊನಾ ಸೋಂಕಿತರಿದ್ದು, 996 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 971 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. *332 ಮಂದಿ ಗುಣಮುಖ* ಜಿಲ್ಲೆಯಲ್ಲಿ ಇಂದು 332 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 107 […]

ಬಿಜೆಪಿ ಜಿಲ್ಲಾಧ್ಯಕ್ಷರೇ ಹುದ್ದೆಗೆ ತಕ್ಕಂತೆ ಹೇಳಿಕೆ ನೀಡಿ, ಸುಳ್ಳು ಹೇಳಿ ಘನತೆಗೆ ಚ್ಯುತಿ ತಂದುಕೊಳ್ಳಬೇಡಿ: ಸುರೇಶ್ ನಾಯಕ್ ರಿಂದ ತಿರುಗೇಟು

ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷರೇ ಹುದ್ದೆಗೆ ತಕ್ಕಂತೆ ಹೇಳಿಕೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ನಿಮ್ಮ ಘನತೆಯ ಸ್ಥಾನಕ್ಕೆ ಅಗೌರವ ತಂದುಕೊಳ್ಳಬೇಡಿ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆ ತಿರುಗೇಟು ನೀಡಿದ್ದಾರೆ. ಸುರೇಶ್ ನಾಯಕ್ ಗುರುವಾರ ತೆಂಕನಿಡಿಯೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾಧ್ಯಕ್ಷರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ‘ಸುರೇಶ್ ನಾಯಕ್ […]

ಸುರೇಶ್ ನಾಯಕ್ ಈ ಹಿಂದೆಯೇ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ: ಕುಯಿಲಾಡಿ

ಉಡುಪಿ: ಗುರುವಾರ (ಸೆ. 3) ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ತೆಂಕನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಹಿಂದೆಯೇ ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತದಾನ ಮಾಡದೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಸುರೇಶ್ ನಾಯಕ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷ […]

ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಆರೋಪಿ ನಟಿ ರಿಯಾ ಚಕ್ರವರ್ತಿ ಸಹೋದರ ಶೌವಿಕ್‌‌ ಚಕ್ರವರ್ತಿ, ಸುಶಾಂತ್‌ ಮ್ಯಾನೇಜರ್ ಸಾಮ್ಯುಯೆಲ್ ಮಿರಾಂದ್‌ ಅರೆಸ್ಟ್

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಟಿ ರಿಯಾ ಚಕ್ರವರ್ತಿ ಸಹೋದರ ಶೌವಿಕ್‌‌ ಚಕ್ರವರ್ತಿ, ಸುಶಾಂತ್‌ ಅವರ ಮ್ಯಾನೇಜರ್ ಸಾಮ್ಯುಯೆಲ್ ಮಿರಾಂದ್‌ ಅವರನ್ನು ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಅಧಿಕಾರಿಗಳು ಇಂದು ರಾತ್ರಿ ಬಂಧಿಸಿದ್ದಾರೆ. ಇವಬ್ಬರಿಗೆ ಡ್ರಗ್ಸ್ ಪೆಡ್ಲರ್ ಜತೆಗೆ ಸಂಪರ್ಕ ಇರುವುದು ಖಚಿತಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಎನ್‌ಸಿಬಿ ತಂಡವು ಇಂದು ಬೆಳಿಗ್ಗೆ 6.30 ರಿಂದ ಸಾಂತಕ್ರೂಸ್‌ನಲ್ಲಿರುವ ಶೌವಿಕ್‌ ಮನೆ ಮತ್ತು ಅಂಧೇರಿಯಲ್ಲಿರುವ ಮಿರಾಂದ್‌ ಮನೆಯಲ್ಲಿ […]