ಉಡುಪಿ: ಮುಚ್ಚಿಟ್ಟ ದಲಿತ ಚರಿತ್ರೆ ಕೃತಿ ಬಿಡುಗಡೆ: ಲೇಖಕರ ಜತೆ ಸಂವಾದ

ಉಡುಪಿ: ಲೇಖಕ ರಾಕೇಶ್ ಶೆಟ್ಟಿ ಅವರ ಕೃತಿ ಮುಚ್ಚಿಟ್ಟ ದಲಿತ ಚರಿತ್ರೆ ಕೃತಿಯ ಸಾಂಕೇತಿಕ ಬಿಡುಗಡೆ ಹಾಗೂ‌ ಲೇಖಕರ ಜೊತೆ ಸಂವಾದ ಕಾರ್ಯಕ್ರಮ ಶನಿವಾರ (ಸೆ.5) ಉಡುಪಿ ಅಂಬಲಪಾಡಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್ ನಲ್ಲಿ ನಡೆಯಿತು. ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಅವರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಡಾ| ಬಿ.ಆರ್. ಅಂಬೇಡ್ಕರ್ ಅವರಿಗೆ ಸರಿಸಮನಾಗಿ ದಲಿತರ ಪರ  ಜೋಗೇಂದ್ರನಾಥ ಅವರು ಬಹಳ ಹಿಂದೆ ಹೋರಾಟ ನಡೆಸಿದ್ದರು. ಆದರೆ ಅವರ ಬಗ್ಗೆ ಇತಿಹಾಸದಲ್ಲಿ‌ ಯಾವುದೇ ಉಲ್ಲೇಖವಿಲ್ಲ. ಜೋಗೇಂದ್ರನಾಥ್ ಕುರಿತಾದ […]

ಡ್ರಗ್ಸ್ ದಂಧೆ: ನಟ ಸುಶಾಂತ್‌ ಸಿಂಗ್‌ ಮನೆಕೆಲಸದಾಳು ದೀಪೇಶ್‌ ಸಾವಂತ್‌ ಬಂಧನ

ಮುಂಬೈ: ಡ್ರಗ್ಸ್ ದಂಧೆಯ ನಂಟಿನ ಆರೋಪದಡಿ ನಟ ಸುಶಾಂತ್‌ ಸಿಂಗ್‌ ಅವರ ಮನೆಗೆಲಸದ ಸಹಾಯಕ ದೀಪೇಶ್‌ ಸಾವಂತ್‌ನನ್ನು ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಇಂದು ರಾತ್ರಿ ಬಂಧಿಸಿದ್ದಾರೆ. ಮಾದಕವಸ್ತುಗಳ ಸೇವನೆ, ಸಂಗ್ರಹ ಮತ್ತು ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೀಪೇಶ್‌ ಸಾವಂತ್ ನ ಪಾತ್ರ ಇರುವ ಬಗ್ಗೆ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದ ಎನ್‌ಸಿಬಿಯು ದೀಪೇಶ್‌ನ ಹೇಳಿಕೆ ಮತ್ತು ಡಿಜಿಟಲ್‌ ಸಾಕ್ಷ್ಯಗಳ ಆಧಾರದ ಮೇಲೆ ಆತನನ್ನು ಬಂಧಿಸಿದೆ ಎಂದು ತಿಳಿದುಬಂದಿದೆ.

ಭಾರತ್ ಸ್ಕೌಟ್ಸ್-ಗೈಡ್ಸ್ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಅಭಿನಂದನೆ

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಆಶ್ರಯದಲ್ಲಿ ಶಿಕ್ಷಕ ದಿನಾಚರಣೆಯ ಅಂಗವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಕರ್ತವ್ಯ ನಿರ್ವಹಿಸಿದ ಜಿಲ್ಲೆಯ ಕಬ್ಸ್ – ಬುಲ್ ಬುಲ್ಸ್ , ಸ್ಕೌಟ್ಸ್ – ಗೈಡ್ಸ್ , ರೋವರ್ಸ್ – ರೇಂಜರ್ಸ್ ಶಿಕ್ಷಕರನ್ನು ಇಂದು ಅಭಿನಂದಿಸಲಾಯಿತು. ಜಿಲ್ಲೆಯ ಕಾರ್ಕಳ, ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ ಹಾಗೂ ಬೈಂದೂರು ವಲಯಗಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ […]

ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ; ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಕೋವಿಡ್-19 ಕುರಿತಂತೆ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಅಪಪ್ರಚಾರಗಳಿಗೆ ಸಾರ್ವಜನಿಕರು ಕಿವಿಗೊಡದೇ, ಜ್ವರ, ಶೀತ, ಕೆಮ್ಮು ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷಿಸಿಕೊಳ್ಳಬೇಕು. ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗುವ ಸುದ್ದಿಗಳನ್ನು ನಂಬಿ, ಸಾರ್ವಜನಿಕರು ರೋಗ ಲಕ್ಷಣಗಳಿದ್ದರೂ ಕೋವಿಡ್ ಪರೀಕ್ಷೆಗೆ ಒಳಪಡುತ್ತಿಲ್ಲ. ಮನೆಯಲ್ಲಿಯೇ ಮನೆ ಮದ್ದು ಮತ್ತು ಇತರೆ ಮಾತ್ರೆಗಳನ್ನು ಪಡೆಯುತ್ತಿದ್ದು, ಇದರಿಂದ ಯಾವುದೇ ರೋಗ […]

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಉಚಿತ ಬಸ್‌ ಸೌಲಭ್ಯ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆಪ್ಟೆಂಬರ್‌ 7 ರಿಂದ 19ರ ವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಉಚಿತ ಬಸ್‌ ಸೌಲಭ್ಯ ಕಲ್ಪಿಸಿದೆ. ವಿದ್ಯಾರ್ಥಿಗಳು ತಮ್ಮ ಊರುಗಳಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್‌ನಲ್ಲಿ ಪ್ರವೇಶ ಪತ್ರವನ್ನು ತೊರಿಸಬೇಕು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.