ನಟಿ ಮೇಘನಾಗೆ ನೋವಾಗಿದ್ದರೆ ಮತ್ತೊಮ್ಮೆ ಕ್ಷಮೆ ಯಾಚಿಸುತ್ತೇನೆ: ಇಂದ್ರಜಿತ್ ಲಂಕೇಶ್
ಬೆಂಗಳೂರು: ಚಿರಂಜೀವಿ ಸಾವಿನ ಬಗ್ಗೆ ಹೇಳಿರುವ ಹೇಳಿಕೆಯನ್ನು ಈಗಾಗಲೇ ಹಿಂಪಡೆದಿದ್ದೇನೆ. ಮೇಘನಾ ರಾಜ್ ಹಾಗೂ ಅವರ ಕುಟುಂಬಕ್ಕೆ ನೋವಾಗಿದ್ದಾರೆ ಮತ್ತೊಮ್ಮೆ ಕ್ಷಮೆ ಯಾಚಿಸುತ್ತೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇಂದು ನಟಿ ಮೇಘನಾ ಅವರು ಚಿರಂಜೀವಿ ಸರ್ಜಾ ಸಾವಿನ ಬಗ್ಗೆ ಇಂದ್ರಜಿತ್ ಲಂಕೇಶ್ ಹೇಳಿಕೆಯ ವಿರುದ್ಧ ಫಿಲ್ಮ್ ಚೇಂಬರ್ ಗೆ ಪತ್ರ ಬರೆದು ನೋವು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್, ಮತ್ತೆ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ಅವರ ಮನೆಗೆ ಹೋಗಿಯೇ ಕ್ಷಮೆಯಾಚಿಸುವುದಾಗಿ […]
ಉಡುಪಿಯಲ್ಲಿ ಇಂದು 175 ಮಂದಿಗೆ ಕೊರೊನಾ ಪಾಸಿಟಿವ್: ನಾಲ್ವರು ಕೊರೊನಾಗೆ ಬಲಿ
ಉಡುಪಿ: ಜಿಲ್ಲೆಯಲ್ಲಿ ಇಂದು 175 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12511 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 1906 ಸಕ್ರಿಯ ಕೊರೊನಾ ಸೋಂಕಿತರಿದ್ದು, 964 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 942 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. *232 ಮಂದಿ ಗುಣಮುಖ* ಜಿಲ್ಲೆಯಲ್ಲಿ ಇಂದು 232ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 68 ಮಂದಿ […]
ಮೀನುಗಾರಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕವನ್ನು ಪ್ರಥಮ ಸ್ಥಾನಕ್ಕೆ ತಲುಪಿಸಲು ಪ್ರಯತ್ನ: ಸಚಿವ ಕೋಟ
ಬೈಂದೂರು: ಮೀನುಗಾರಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕವನ್ನು ಪ್ರಥಮ ಸ್ಥಾನಕ್ಕೆ ತಲುಪಿಸಲು ಪ್ರಯತ್ನಿಸಲಾಗುವುದು ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಮೀನುಗಾರಿಕಾ ಜಟ್ಟಿ ಪ್ರದೇಶಗಳಿಗೆ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ದೇಶದಲ್ಲಿ ಕಡಲ ಮೀನುಗಾರಿಕೆಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ದು, ಒಳನಾಡು ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ. ಆದರೆ ಈಗ ಮುಖ್ಯಮಂತ್ರಿಗಳ ಪರಿಪೂರ್ಣ ಸಹಕಾರ ಹಾಗೂ ಮೀನುಗಾರಿಕೆಗೆ ಕೊಡುತ್ತಿರುವ ಉತ್ತೇಜನದಿಂದಾಗಿ ಇನ್ನು ಮೂರೇ ವರ್ಷದಲ್ಲಿ ದೇಶದಲ್ಲಿಯೇ ಕರ್ನಾಟಕ […]
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ರಘುಪತಿ ಭಟ್
ಉಡುಪಿ: ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದು. ಈ ವೃತ್ತಿಯಲ್ಲಿ ಸಿಗುವ ಗೌರವ, ಪ್ರೀತಿ ಬೇರೆ ಯಾವುದೇ ವೃತ್ತಿಯಲ್ಲಿ ಸಿಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುದರಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಶನಿವಾರ ಉಡುಪಿಯ ಸೈಂಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ , ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಹಾಗೂಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು […]
ಡ್ರಗ್ಸ್ ದಂಧೆ: 12 ಆರೋಪಿಗಳ ಹೆಸರು ಬಹಿರಂಗ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ 12 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಹೆಸರು ಬಹಿರಂಗವಾಗಿದೆ. ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಆರೋಪಿಗಳು ಪಟ್ಟಿಯಲ್ಲಿ A1 ಶಿವ ಪ್ರಕಾಶ್, ಚಿಪ್ಪಿ A2 ರಾಗಿಣಿ ದ್ವಿವೇದಿ, A3 ವಿರೇನ್ ಖನ್ನಾ, A4 ಪ್ರಶಾಂತ್ ರಾಂಕಾ, A5 ವೈಭವ್ ಜೈನ್, A6 ಆದಿತ್ಯಾ ಆಳ್ವಾ, A7 ಲೂಮ್ ಪೆಪ್ಪರ್( ಡಕಾರ್) ಸೈಮನ್, A8 ಪ್ರಶಾಂತ್ ರಾಜು, A9 ಅಶ್ವಿನ್ ಅಲಿಯಾಸ್ ಬೂಗಿ, A10 ಅಭಿಸ್ವಾಮಿ, A11 ರಾಹುಲ್ […]