ಸಾಣೂರು: ಫಿಟ್ ಇಂಡಿಯಾ ಬೈಸಿಕಲ್ ಜಾಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

ಕಾರ್ಕಳ: ಭಾರತ ಸರಕಾರ ಯುವ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಉಡುಪಿ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಯುವಕ ಮಂಡಲ ಸಾಣೂರು ಇದರ ಆಶ್ರಯದಲ್ಲಿ ಫಿಟ್ ಇಂಡಿಯಾ ಬೈಸಿಕಲ್ ಜಾಥಾ ಸರಣಿ ಕಾರ್ಯಕ್ರಮಕ್ಕೆ ಸರ್ಕಾರದ ಮುಖ್ಯ ಸಚೇತಕರು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಇಂದು ಚಾಲನೆ ನೀಡಿದರು. ಆ ನಂತರ ಮಾತನಾಡಿದ ಅವರು, ವ್ಯಾಯಾಮದ ಜೊತೆಗೆ ನಿರಂತರವಾಗಿ […]

ಕೊನೆಗೂ ಬಿಡುಗಡೆಗೊಂಡಿತು ಐಪಿಎಲ್ ವೇಳಾಪಟ್ಟಿ: ಉದ್ಘಾಟನಾ ಪಂದ್ಯದಲ್ಲಿ ಈ ಎರಡು ತಂಡಗಳು ಕಣಕ್ಕಿಳಿಯಲಿವೆ

ದುಬೈ: ಕೊರೊನಾ ಭೀತಿಯ ನಡುವೆಯೂ ಭಾರೀ ನಿರೀಕ್ಷೆಯ ಐಪಿಎಲ್ ಟೂರ್ನಿ ನಡೆಯುತ್ತಿದ್ದು, ಕೊನೆಗೂ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ಈ ಬಾರಿಯ ಐಪಿಎಲ್ ಯುಎಇನಲ್ಲಿ ಆಯೋಜಿಸಲಾಗಿದೆ. ಸೆ. 19ರಂದು ಅಬುಧಾಬಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ಸ್ ಅಪ್ ಚೆನ್ನೈ ಸೂಪರ್ ಕಿಂಗ್ಸ್‌ ಸೆಣಸಾಟ ನಡೆಸಲಿದೆ. ಸೆ. 20ರಂದು ನಡೆಯುವ ಟೂರ್ನಿಯ ಎರಡನೇ  ಪಂದ್ಯದಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ಮುಖಾಮುಖಿಯಾಗಲಿವೆ. ಸೆ. 21ರಂದು […]

ಕೊರೊನಾ ಪಾಸಿಟಿವ್ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ

ಉಡುಪಿ: ಸೆಪ್ಟೆಂಬರ್ 7ರಿಂದ 19ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಿಕೊಂಡ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡರು ಸಹ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಉಡುಪಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ ತಿಳಿಸಿದ್ದಾರೆ. ಕೊರೊನಾ ಸೋಂಕು ಕಂಡುಬರುವ ವಿದ್ಯಾರ್ಥಿಗಳಿಗೆ ಬನ್ನಂಜೆ ಬಾಲಕಿಯರ ವಸತಿ ನಿಲಯ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿರುವ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಸೋಂಕು ಇದ್ದರೆ ಮೊದಲೇ ತಿಳಿಸಿ: ಪರೀಕ್ಷೆ […]

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ನಟಿ ರಿಯಾ ಚಕ್ರವರ್ತಿ ಬಂಧನ ?.

ಮುಂಬೈ: ನಟಿ ರಿಯಾ ಚಕ್ರವರ್ತಿಗೆ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಉರುಳು ಮತ್ತಷ್ಟು ಬೀಗಿಗೊಳ್ಳುತ್ತಿದ್ದು, ಇನ್ನು ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ಮಾದಕವಸ್ತುಗಳ ಸೇವನೆ, ಸಂಗ್ರಹ ಮತ್ತು ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್‌, ನಟ ಸುಶಾಂತ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ಹಾಗೂ ಕೆಲಸದಾಳು ದೀಪೇಶ್‌ ಸಾವಂತ್ ಎನ್ ಸಿಬಿ ಈಗಾಗಲೇ ಬಂಧಿಸಿದೆ. ಈ ಮೂರು ಆರೋಪಿಗಳು ವಿಚಾರಣೆ ವೇಳೆ ರಿಯಾ ಚಕ್ರವರ್ತಿ ಡ್ರಗ್ಸ್ ತಯಾರಿಸಿಕೊಂಡಿದ್ದಳು ಎಂದು ಬಾಯಿಬಿಟ್ಟಿದ್ದಾರೆ. ಈ […]

ಮಂಗಳೂರಿನ ಐಟಿ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರ ಮಾಡಬಾರದು: ಯೋಗೀಶ್ ಶೆಟ್ಟಿ ಆಗ್ರಹ

ಉಡುಪಿ: ಮಂಗಳೂರು ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತ (ಆಡಳಿತ) ಕಚೇರಿಯನ್ನು ಬೇರೆಡೆಗೆ ಸ್ಥಳಾಂತರ ಮಾಡಬಾರದು ಎಂದು ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಎರಡು ದಶಕದಿಂದ ಐಟಿ ಕಚೇರಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದರ ವ್ಯಾಪ್ತಿಯಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ತೆರಿಗೆ ಪಾವತಿದಾರರಿದ್ದು, ಅತಿ ಹೆಚ್ಚು ತೆರಿಗೆ ಸಂಗ್ರಹಿಸುತ್ತಿರುವ ಕಚೇರಿ ಇದಾಗಿದೆ. ಇದನ್ನು ಬೇರೆ ಕಡೆಗೆ ಸ್ಥಳಾಂತರ ಮಾಡದೆ, ಮಂಗಳೂರಿನಲ್ಲಿಯೇ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅವಿಭಜಿತ ದಕ್ಷಿಣ […]