ಸಾಮಾಜಿಕ ಜಾಲತಾಣದಲ್ಲಿ ಪೋಟೋ ದುರ್ಬಳಕೆ: ಕನ್ನಡದ ಖ್ಯಾತ ಹಾಸ್ಯನಟನಿಂದ ದೂರು ದಾಖಲು
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನನ್ನ ಪೋಟೊ ದುರ್ಬಳಕೆ ಮಾಡುತ್ತಿದ್ದಾರೆಂದು ಹೇಳಿ ಹಾಸ್ಯ ನಟ ಸಾಧುಕೋಕಿಲ ಅವರು ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಅನಗತ್ಯವಾಗಿ ನನ್ನ ಪೋಟೋ ಅಪ್ ಲೋಡ್ ಮಾಡಿ ದುರ್ಬಳಕೆ ಮಾಡಲಾಗುತ್ತಿದೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆಯಾಗುತ್ತಿದೆ. ಹಾಗಾಗಿ ತಪ್ಪಿತಸ್ಥ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾಧು ಕೋಕಿಲ ದೂರಿನಲ್ಲಿ ತಿಳಿಸಿದ್ದಾರೆ.
ನಟಿ ರಿಯಾ ಚಕ್ರವರ್ತಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಡ್ರಗ್ಸ್ ಜಾಲದ ನಂಟಿಗೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಮುಂಬೈನ ಮ್ಯಾಜೀಸ್ಟೆಟರ್ ನ್ಯಾಯಾಲಯ ಸೆ. 22ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಡ್ರಗ್ಸ್ ಜಾಲದ ನಂಟಿನ ಆರೋಪದಡಿ ರಿಯಾಳನ್ನು ಬಂಧಿಸಿರುವ ಎನ್ ಸಿಬಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿರುವ ನ್ಯಾಯಾಲಯ ರಿಯಾಳಿಗೆ […]
ಉಡುಪಿಯಲ್ಲಿ ಇಂದು ಕೊರೊನಾ ಮಹಾಮಾರಿಗೆ ಏಳು ಮಂದಿ ಮೃತ್ಯು
ಉಡುಪಿ: ಜಿಲ್ಲೆಯಲ್ಲಿ ಇಂದು 247 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13087ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 1844 ಸಕ್ರಿಯ ಕೊರೊನಾ ಸೋಂಕಿತರಿದ್ದು, 876 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 968 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. *178 ಮಂದಿ ಗುಣಮುಖ* ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 77 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 101 ಮಂದಿ […]
ಬರೋಬ್ಬರಿ 10 ಲಕ್ಷ ಮೌಲ್ಯದ 32 ಕೆ.ಜಿ. ಗಾಂಜಾ ವಶ: ಇಬ್ಬರು ಪೆಡ್ಲರ್ ಗಳ ಬಂಧನ
ಚಿಕ್ಕಬಳ್ಳಾಪುರ: ಇಲ್ಲಿನ ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಟೆ ಎಂಬಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್ಗಳನ್ನು ಬಂಧಿಸಿ ಬರೋಬ್ಬರಿ 10 ಲಕ್ಷ ಮೌಲ್ಯದ 32 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇಂಡಿಕಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದು, ಆಗ ಕಾರಿನಲ್ಲಿ ಗಾಂಜಾ ಪತ್ತೆಯಾಗಿದೆ. ಪೆಡ್ಲರ್ ಗಳಾದ ಆಂಧ್ರಪ್ರದೇಶದ ಚಿತ್ತೂರು ಮೂಲದ ಶಂಕರ್ ಹಾಗೂ ಶಿಡ್ಲಘಟ್ಟ ಮೂಲದ ಶಭಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಸಂಶೋಧಕ ಪ್ರೊ. ಅ. ಸುಂದರ ಅವರಿಗೆ ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ
ಉಡುಪಿ: ಈ ಬಾರಿಯ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಸಂಶೋಧಕ ಪ್ರೊ. ಅ. ಸುಂದರ ಅವರನ್ನು ಆಯ್ಕೆ ಮಾಡಲಾಗಿದೆ. ಸೆ.12ರಂದು ಸುಂದರ ಅವರ ಶಿವಮೊಗ್ಗದ ನಿವಾಸದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಷ್ಟ್ರಕವಿ ಗೋವಿಂದ ಪೈ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ತಿಳಿಸಿದ್ದಾರೆ. ಮಣಿಪಾಲ ಗ್ಲೋಬಲ್ನ ಮುಖ್ಯಸ್ಥ ಟಿ.ವಿ. ಮೋಹನದಾಸ್ ಪೈ ಅವರು ತಾಯಿ ವಿಮಲಾ ಪೈ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿದ್ದು, ಪುರಸ್ಕಾರ ₹ 1 ಲಕ್ಷ ನಗದು ಒಳಗೊಂಡಿದೆ. ಉಡುಪಿಯ ನೀಲಾವರದ ಪ್ರೊ.ಅ. ಸುಂದರ ಪುರಾತತ್ತ್ವ […]