ನಟ ಸುಶಾಂತ್ ಸಿಂಗ್ ನದ್ದು ಕೊಲೆಯಲ್ಲ, ಆತ್ಮಹತ್ಯೆ.! ಜೀ ನ್ಯೂಸ್ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ
ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ರದ್ದು ಆತ್ಮಹತ್ಯೆ, ಅದು ಕೊಲೆಯಲ್ಲ ಎಂಬ ಸ್ಫೋಟಕ ಮಾಹಿತಿ ಈವರೆಗಿನ ಸಿಬಿಐ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಬಗ್ಗೆ ಜೀ ನ್ಯೂಸ್ ವರದಿ ಮಾಡಿದೆ. ಸುಶಾಂತ್ ಸಿಂಗ್ ಸಾವಿನ ಕುರಿತು ಕೆಲ ಹಿಂದಿ ಹಾಗೂ ಇಂಗ್ಲಿಷ್ ನ್ಯೂಸ್ ಚಾನೆಲ್ ಗಳು ಟಿಆರ್ ಪಿಗಾಗಿ ತಮ್ಮದೇ ಆದ ರೀತಿಯಲ್ಲಿ ತನಿಖೆ ನಡೆಸಿ, ತೀರ್ಪು ನೀಡುತ್ತಿದೆ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ ಜೀ ನ್ಯೂಸ್ ನಲ್ಲಿ ಸೋಮವಾರ ರಾತ್ರಿ 9 ಗಂಟೆಗೆ ಪ್ರಸಾರಗೊಂಡ ಡೈಲಿ […]
ಸೆ.10: ಕಾರ್ಕಳ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಮುದ್ದು ಕೃಷ್ಣ ಸ್ಪರ್ಧೆ
ಕಾರ್ಕಳ : ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನ ಚೋಲ್ಪಾಡಿ ಕಾಬೆಟ್ಟು, ಕಾರ್ಕಳ ಹಾಗೂ ಪ್ರಜಾಪಿತ ಬಹ್ಮ್ಮಾಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯ ಇವರ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ಸೆ.10 ರಂದು ಮಧ್ಯಾಹ್ನ 3 ಗಂಟೆಗೆ ಕಾಬೆಟ್ಟು ವೇಣುಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. 1 ರಿಂದ 2 ವರ್ಷದವರೆಗೆ ಒಂದು ವಿಭಾಗ, 2 ವರ್ಷದಿಂದ 5 ವರ್ಷ, 5 ರಿಂದ 7 ಮತ್ತು 7 ರಿಂದ 12 ವರ್ಷದ ಒಳಗಿನ ಮಕ್ಕಳಿಗೆ ಸ್ಪರ್ದೆ ಜರಗಲಿರುವುದು ಎಂದು […]
ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡ ಚಂದನವನದ ಹಿರಿಯ ನಟ ಹೃದಯಾಘಾತದಿಂದ ವಿಧಿವಶ
ಬೆಂಗಳೂರು: ಚಂದನವನದ ಹಿರಿಯ ನಟ, ರಂಗಭೂಮಿ ಕಲಾವಿದ ಸಿದ್ದರಾಜ್ ಕಲ್ಯಾಣ್‌ಕರ್ (60) ನಿನ್ನೆ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಿನ್ನೆಯಷ್ಟೇ ತಮ್ಮ 60ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಆದರೆ ತಡರಾತ್ರಿ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಅಂತ್ಯಕ್ರಿಯೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಉಪೇಂದ್ರ ನಟನೆಯ ಬುದ್ಧಿವಂತ , ಸೂಪರ್ ಸೇರಿದಂತೆ ಸುಮಾರು 75 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಪ್ರಸ್ತುತ ಪ್ರೇಮಲೋಕ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಸೆಟ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಎನ್ನಲಾಗಿದೆ.
ತೆಲುಗಿನ ಖ್ಯಾತ ಖಳನಟ ಜಯ ಪ್ರಕಾಶ್ ರೆಡ್ಡಿ ನಿಧನ
ಅಮರಾವತಿ: ತೆಲುಗಿನ ಖ್ಯಾತ ಖಳನಟ ಜಯ ಪ್ರಕಾಶ್ ರೆಡ್ಡಿ (74) ಅವರು ಮಂಗಳವಾರ ಬೆಳಿಗ್ಗೆ ಗುಂಟೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಜಯ ಪ್ರಕಾಶ್ ರೆಡ್ಡಿ ಖಳನಾಯಕ ಮತ್ತು ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾಗಿದ್ದರು. ಅವರ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ‘ಸಮರಸಿಂಹ ರೆಡ್ಡಿ, ಪ್ರೇಮಿಂಚುಕುಂದಮು ರಾ, ನರಸಿಂಹ ನಾಯ್ಡು, ರೆಡಿ, ಕಿಕ್, ಜಯಂ ಮನದೇರಾ, ಜಂಬಾ ಲಕಿಡಿ ಪಂಬಾ’ ಪ್ರಮುಖವಾಗಿವೆ. ನಟನ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ನಟ–ನಟಿಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಶಾಸಕನ ಪುತ್ರ ನೇಣು ಬೀಗಿದುಕೊಂಡು ಆತ್ಮಹತ್ಯೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ಮೀಸಲು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಸೂರಜ್ (18) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಲ್ಲಿನ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ಸೂರಜ್ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿಸಿದ್ದಾರೆ. ವೀರಭದ್ರಪ್ಪ ಹಾಲಹರವಿ 2008ರಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಮೀಸಲು ಕ್ಷೇತ್ರದಿಂದ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು.