ಇಂದಿರಾನಗರ ಮಹಿಳೆಯ ಸಾವಿನ ಪ್ರಕರಣ: ಸಿಒಡಿ ತನಿಖೆ ಆರಂಭ- ಡಿಸಿ ಜಗದೀಶ್

ಉಡುಪಿ: ಇಂದಿರಾನಗರದ ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದ ತನಿಖೆಗಾಗಿ ನೇಮಿಸಲಾಗಿದ್ದ ತಜ್ಞ ವೈದ್ಯರ ತನಿಖೆ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆ ಹಾಗೂ ಎಫ್ ಎಸ್ ಎಲ್ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ನಗರಸಭೆ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತ ಸಭೆಯಲ್ಲಿ ಸದಸ್ಯರೊಬ್ಬರು ಎತ್ತಿದ ಪ್ರಶ್ನೆಗೆ ಉತ್ತರಿಸಿದರು. ಮಹಿಳೆಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಬಗ್ಗೆ ಸಿಒಡಿ ತನಿಖೆಯು ನಡೆಯುತ್ತಿದೆ ಎಂದು […]

ಉಡುಪಿ: ಖಾಲಿ ಜಾಗದಲ್ಲಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ, ಇಲ್ಲದಿದ್ದರೆ ದಂಡ ಕಟ್ಟಲು ರೆಡಿಯಾಗಿ.!

ಉಡುಪಿ: ಖಾಲಿ ಜಾಗಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆಯಲು ಸಂಬಂಧಪಟ್ಟ ಜಾಗದ ಮಾಲೀಕರಿಗೆ ಸೂಚಿಸಬೇಕು. ನಿಗದಿತ ಅವಧಿಯಲ್ಲಿ ಅವರು ತೆಗೆಯದಿದ್ದಲ್ಲಿ ದಂಡ ವಸೂಲು ಮಾಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಉಡುಪಿ ನಗರಸಭೆಯ ಎಲ್ಲಾ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತ ಸಂಬಂಧದಲಪಟ್ಟ ನಗರಸಭಾ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತು ಸಂಬಂಧಪಟ್ಟ ವಾರ್ಡ್ ನ ಸದಸ್ಯರುಗಳು […]

ಉಡುಪಿ ಕೃಷ್ಣಮಠದಲ್ಲಿ ಅಷ್ಟಮಿಗೆ ಭರದ ಸಿದ್ಧತೆ; ಭಕ್ತರಿಗೆ ಹಂಚಲು ಒಂದು ಲಕ್ಷ ಉಂಡೆ, ಚಕ್ಕುಲಿ ತಯಾರು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ಜಿಲ್ಲಾಡಳಿತದ ಆದೇಶದಂತೆ ಸೆ.11ರಂದು ಮಧ್ಯಾಹ್ನ 3 ರಿಂದ ಸಂಜೆ 6ರವರೆಗೆ ಕೃಷ್ಣಮಠದ ರಥಬೀದಿಯಲ್ಲಿ ಸಂಪ್ರದಾಯದಂತೆ ಸಾಂಕೇತಿಕವಾಗಿ ಕೃಷ್ಣ ಜನ್ಮಾಷ್ಟಮಿ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಲಕ್ಷ ಚಕ್ಕುಲಿ, ಉಂಡೆ: ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶ ಇಲ್ಲದ್ದರಿಂದ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಗಳ ಆಶಯದಂತೆ ಎಲ್ಲ ಭಕ್ತರಿಗೆ ಕೃಷ್ಣ ಪ್ರಸಾದ ಸಿಗಬೇಕು ಎಂಬ ಉದ್ದೇಶದಿಂದ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ […]

ಅಷ್ಟಮಿ ಪ್ರಯುಕ್ತ ಕೃಷ್ಣಮಠದಲ್ಲಿ ನಡೆಯುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಲ್ಲಿದೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯವ ಕಾರ್ಯಕ್ರಮಗಳ ವಿವರ ಈ ಕೆಳಕಂಡಂತಿವೆ. ಸೆಪ್ಟೆಂಬರ್ 10ರಂದು ಗುರುವಾರ: ಬೆಳಿಗ್ಗೆ 7.30ಕ್ಕೆ ಲಕ್ಷ ತುಳಸಿ ಅರ್ಚನೆ, ಮಹಾಪೂಜೆಯ 10.30-1.00: ದಾಮೋದರ ಸೇರಿಗಾರ್ ಅವರಿಂದ ಸ್ಯಾಕ್ಸೋಫೋನ್ ವಾದನ 1.00-03.00:- ಪಾವನ ಬಿ. ಆಚಾರ್ಯ ಇವರಿಂದ ವೀಣಾ ವಾದನ ಸಂಜೆ 5.30: ಪ್ರವಚನ ಮಾಲಿಕೆಯ ಕಾರ್ಯಕ್ರಮ ಅದಮಾರು ಮಠದ ಹಿರಿಯ ವಿಶ್ವಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶ ಈಶಪ್ರಿಯತೀರ್ಥ ಶ್ರೀಪಾದರು ಉಪಸ್ಥಿತರಿರುವರು. ರಾತ್ರಿ […]

ವಿಟ್ಲಪಿಂಡಿ ಉತ್ಸವದ ಹಿನ್ನೆಲೆ: ಸೆ. 11ರಂದು ಮಧ್ಯಾಹ್ನ 12.30ರಿಂದ ಸಂಜೆ 5.30ರ ವರೆಗೆ ರಥಬೀದಿಗೆ ಸಾರ್ವಜನಿಕರ ಪ್ರವೇಶ ನಿಷೇಧ

ಉಡುಪಿ: ಇಲ್ಲಿನ ಶ್ರೀ ಕೃಷ್ಣಮಠದ ರಥಬೀದಿಯಲ್ಲಿ ಸೆಪ್ಟೆಂಬರ್ 11ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶ್ರೀಕೃಷ್ಣ ಲೀಲೋತ್ಸವ (ವಿಟ್ಲ ಪಿಂಡಿ) ನೆರವೇರಲಿದೆ. ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 12.30ರಿಂದ ಸಂಜೆ 5.30 ರ ವರೆಗೆ ರಥಬೀದಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಹಾಗಾಗಿ ಸಾರ್ವಜನಿಕರು ಸಂಜೆ 6 ಗಂಟೆಯ ಬಳಿಕ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆಯಬಹುದು ಎಂದು ಮಠದ ಪ್ರಕಟಣೆ ತಿಳಿಸಿದೆ.